AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani-Hindenburg Row: ಅದಾನಿ ತಪ್ಪು ಮಾಡಿದ್ದೇ ಆದಲ್ಲಿ… ಹಿಂಡನ್​ಬರ್ಗ್ ವಿವಾದದ ಬಗ್ಗೆ ಅಮಿತ್ ಶಾ ಮಾತು ಇಲ್ಲಿದೆ

ಅದಾನಿ ಗ್ರೂಪ್ ಹಾಗೂ ಹಿಂಡನ್​ಬರ್ಗ್ ವಿವಾದಕ್ಕೆ ಸಂಬಂಧಿಸಿದ ತನಿಖೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅಮಿತ್ ಶಾ, ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ದ್ವಿಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ ಮತ್ತು ಪ್ರತಿಯೊಬ್ಬರೂ ತಮ್ಮ ಬಳಿ ಇರುವ ಯಾವುದೇ ಪುರಾವೆಗಳನ್ನು ಸಮಿತಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ.

Adani-Hindenburg Row: ಅದಾನಿ ತಪ್ಪು ಮಾಡಿದ್ದೇ ಆದಲ್ಲಿ... ಹಿಂಡನ್​ಬರ್ಗ್ ವಿವಾದದ ಬಗ್ಗೆ ಅಮಿತ್ ಶಾ ಮಾತು ಇಲ್ಲಿದೆ
ಅಮಿತ್ ಶಾImage Credit source: ANI
Follow us
Ganapathi Sharma
|

Updated on:Mar 18, 2023 | 4:27 PM

ನವದೆಹಲಿ: ಸಿಬಿಐ (CBI) ಹಾಗೂ ಜಾರಿ ನಿರ್ದೇಶನಾಲಯದಂಥ (ED) ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ, ತನಿಖಾ ಸಂಸ್ಥೆಗಳು ದಾಖಲಿಸಿರುವ ಎಲ್ಲ ಪ್ರಕರಣಗಳೂ ಯುಪಿಎ ಸರ್ಕಾರದ ಅವಧಿಯಲ್ಲೇ ದಾಖಲಾಗಿದ್ದವುಗಳಾಗಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ. ದೆಹಲಿಯಲ್ಲಿ ‘ಇಂಡಿಯಾ ಟುಡೇ ಕಾನ್​ಕ್ಲೇವ್​’ನಲ್ಲಿ ಮಾತನಾಡಿದ ಅವರು, ತನಿಖಾ ಸಂಸ್ಥೆಗಳ ಕಾರ್ಯನಿರ್ವಹಣೆ ಬಗ್ಗೆ ನ್ಯಾಯಾಲಯದಲ್ಲಿಯೂ ಪ್ರಶ್ನಿಸಬಹುದಾಗಿದೆ ಎಂದು ಹೇಳಿದ್ದಾರೆ. 2017ರ ಉತ್ತರ ಪ್ರದೇಶ ಚುನಾವಣೆ ವೇಳೆ, ‘ಅವರು ಭ್ರಷ್ಟಾಚಾರ ಮಾಡುತ್ತಿದ್ದಾರೆ. ಯಾಕೆ ತನಿಖೆ ನಡೆಸಲಿಲ್ಲ’ ಎಂದು ಹಿರಿಯ ಮಹಿಳಾ ನಾಯಕಿಯೊಬ್ಬರು ಪ್ರಶ್ನಿಸಿದ್ದರು. ಅವರು ನಮ್ಮನ್ನು ಪ್ರಶ್ನಿಸುತ್ತಿದ್ದರು. ಈಗ ಕ್ರಮ ಕೈಗೊಂಡಾಗ ಅಳಲು ತೋಡಿಕೊಳ್ಳುತ್ತಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

ತನಿಖಾ ಸಂಸ್ಥೆಗಳು ನ್ಯಾಯಾಲಯಕ್ಕಿಂತ ಮೇಲಿನವುಗಳಲ್ಲ. ಅವುಗಳ ಯಾವುದೇ ನೋಟಿಸ್, ಎಫ್‌ಐಆರ್ ಮತ್ತು ಚಾರ್ಜ್ ಶೀಟ್​​ಗಳನ್ನು ನ್ಯಾಯಾಲಯಗಳಲ್ಲಿ ಪ್ರಶ್ನಿಸಬಹುದು ಎಂದು ಶಾ ಹೇಳಿದ್ದಾರೆ.

ನ್ಯಾಯಾಲಯದಲ್ಲಿ ಪ್ರಶ್ನಿಸುವ ಬದಲು ಸಾರ್ವಜನಿಕವಾಗಿ ಯಾಕೆ ಕೂಗಾಡುತ್ತಿದ್ದಾರೆ? ಯಾರ ಮೇಲಾದರೂ ಭ್ರಷ್ಟಾಚಾರದ ಆರೋಪವಿದ್ದರೆ ತನಿಖೆಯಾಗಬೇಕಲ್ಲವೇ ಎಂದು ನಾನು ಜನರನ್ನು ಕೇಳಲು ಬಯಸುತ್ತೇನೆ. ಎರಡು ಪ್ರಕರಣಗಳನ್ನು ಹೊರತುಪಡಿಸಿದರೆ, ಉಳಿದ ಎಲ್ಲಾ ಪ್ರಕರಣಗಳು ಅವರ (ಯುಪಿಎ) ಆಡಳಿತದ ಅವಧಿಯಲ್ಲಿ ದಾಖಲಾಗಿವೆ. ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಲ ಎಂದು ಶಾ ಹೇಳಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಆಡಳಿತದ 10 ವರ್ಷಗಳ ಅವಧಿಯಲ್ಲಿ 12 ಲಕ್ಷ ಕೋಟಿ ರೂ. ಮೊತ್ತದ ಹಗರಣಗಳ ಬಗ್ಗೆ ಆರೋಪಗಳು ಬಂದಾಗ, ಪರಿಸ್ಥಿತಿಯನ್ನು ಶಾಂತವಾಗಿಸಲು ಸಿಬಿಐ ಮೂಲಕ ಪ್ರಕರಣ ದಾಖಲಿಸಿತ್ತು ಎಂದು ಶಾ ಹೇಳಿದ್ದಾರೆ. ಅಕ್ರಮ ಹಣ ವರ್ಗಾವಣೆ ಸಂಬಂಧಿತ ಪ್ರಕರಣವಿದ್ದರೆ ತನಿಖೆಗೆ ಜಾರಿ ನಿರ್ದೇಶನಾಲಯ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ರಾಜ್ಯ ಭೋಜನ ಆಯೋಜಿಸಲಿದ್ದಾರೆ: ವರದಿ

ತನಿಖಾ ಸಂಸ್ಥೆಗಳು ಪ್ರತಿಪಕ್ಷಗಳ ನಾಯಕರನ್ನು ಗುರಿಯಾಗಿಸುತ್ತಿವೆ ಎಂಬ ಆರೋಪಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಅವರನ್ನು (ಪ್ರತಿಪಕ್ಷಗಳು) ನ್ಯಾಯಾಲಯಕ್ಕೆ ಹೋಗದಂತೆ ತಡೆಯುವವರು ಯಾರು? ಅವರ ಪಕ್ಷದಲ್ಲಿ ನಮಗಿಂತ ಉತ್ತಮ ವಕೀಲರಿದ್ದಾರಲ್ಲವೇ’ ಎಂದು ಕೇಳಿದರು. ಏಜೆನ್ಸಿಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ. ನೀವು ಕಾನೂನನ್ನು ಅನುಸರಿಸುವುದು ಉತ್ತಮ, ಅದೊಂದೇ ಮಾರ್ಗ ಎಂದು ಎಲ್ಲರಿಗೂ ಹೇಳಬಯಸುತ್ತೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಹಗರಣ ಆರೋಪದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿತ್ತು. ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಮಗಳು ಕೆ. ಕವಿತಾರನ್ನು ವಿಚಾರಣೆಗೆ ಒಳಪಡಿಸಿತ್ತು. ಆರ್​ಜೆಡಿ ನಾಯಕ ತೇಜಸ್ವಿ ಯಾದವ್​ ಅವರ ವಿರುದ್ಧವೂ ಹಲವು ಪ್ರಕರಣಗಳು ತನಿಖಾ ಹಂತದಲ್ಲಿವೆ. ಈ ಬೆಳವಣಿಗೆಗಳ ಬೆನ್ನಲ್ಲೇ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಟೀಕಿಸಿವೆ.

ಅದಾನಿ, ಹಿಂಡನ್​ಬರ್ಗ್ ಪ್ರಕರಣದ ಬಗ್ಗೆ ಅಮಿತ್ ಶಾ ಹೇಳಿದ್ದೇನು?

ಅದಾನಿ ಗ್ರೂಪ್ ಹಾಗೂ ಹಿಂಡನ್​ಬರ್ಗ್ ವಿವಾದಕ್ಕೆ ಸಂಬಂಧಿಸಿದ ತನಿಖೆಯ ಕುರಿತು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶಾ, ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದ ದ್ವಿಸದಸ್ಯ ಸಮಿತಿಯನ್ನು ಸುಪ್ರೀಂ ಕೋರ್ಟ್ ರಚಿಸಿದೆ ಮತ್ತು ಪ್ರತಿಯೊಬ್ಬರೂ ತಮ್ಮ ಬಳಿ ಇರುವ ಯಾವುದೇ ಪುರಾವೆಗಳನ್ನು ಸಮಿತಿಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ತಪ್ಪು ಮಾಡಿದ್ದರೆ ಯಾರನ್ನೂ ರಕ್ಷಿಸುವುದಿಲ್ಲ. ಎಲ್ಲರಿಗೂ ನ್ಯಾಯಾಂಗ ಪ್ರಕ್ರಿಯೆಯಲ್ಲಿ ನಂಬಿಕೆ ಇರಬೇಕು ಎಂದಿದ್ದಾರೆ.

ಆಧಾರ ರಹಿತ ಆರೋಪಗಳನ್ನು ಮಾಡಬಾರದು. ಅಂಥ ಆರೋಪಗಳು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಅದಾನಿ – ಹಿಂಡನ್​​ಬರ್ಗ್ ವಿಚಾರವಾಗಿ ಮಾರುಕಟ್ಟೆ ನಿಯಂತ್ರಕ ಸೆಬಿ ತನಿಖೆ ನಡೆಸುತ್ತಿದೆ ಎಂದು ಅಫಿಡವಿಟ್‌ನಲ್ಲಿ ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 12:36 pm, Sat, 18 March 23

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್