Adhir Ranjan Chowdhury: ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ರಂಜನ್ ಚೌಧರಿ ರಾಜೀನಾಮೆ; ಕಾರಣ ಇಲ್ಲಿದೆ
ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ. ಕಳೆದ ಕೆಲವು ದಿನಗಳಿಂದ ಈ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಮೂಲಗಳ ಪ್ರಕಾರ, ಕೆಲವು ದಿನಗಳ ಹಿಂದೆಯೇ ಅಧೀರ್ ರಂಜನ್ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ನೀಡಿದ್ದಾರೆ. ಇದಕ್ಕೆ ಕಾರಣವೇನು? ಎಂಬುದರ ಮಾಹಿತಿ ಇಲ್ಲಿದೆ.
ಕೊಲ್ಕತ್ತಾ: ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್‌ನಲ್ಲಿ ಅಧೀರ್ ರಂಜನ್ ಚೌಧರಿ ಅಧಿಕಾರಾವಧಿ ಮುಗಿದಿದೆ. ಮೂಲಗಳ ಪ್ರಕಾರ, ಅಧೀರ್ ರಂಜನ್ (Adhir Ranjan Chowdhury) ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ (Congress President) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ನೇರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮೂಲಗಳ ಪ್ರಕಾರ, ಅಧೀರ್ ರಂಜನ್ ಚೌಧರಿ ಅವರು ಕೆಲವು ದಿನಗಳ ಹಿಂದೆಯೇ ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್‌ಗೆ ಕಳುಹಿಸಿದ್ದಾರೆ. ಹೈಕಮಾಂಡ್ ಆ ರಾಜೀನಾಮೆ ಪತ್ರವನ್ನು ಅಂಗೀಕರಿಸಲಾಗಿದೆ ಎಂದು ಕೂಡ ಹೇಳಲಾಗುತ್ತಿದೆ. ಆದರೆ ಅಧೀರ್ ರಾಜೀನಾಮೆ ನೀಡಿದ್ದೇಕೆ? ಹೈಕಮಾಂಡ್ ಜತೆಗಿನ ಸಂವಹನ ಕೊರತೆಯಿಂದ ಅಧೀರ್ ರಾಜೀನಾಮೆ ನೀಡಿದ್ದಾರಾ? ಅಥವಾ ಅಧೀರ್ ಸೋತ ನಂತರ ಕಾಂಗ್ರೆಸ್ ಈ ರಾಜೀನಾಮೆ ಪತ್ರವನ್ನು ಕೇಳಿ ಪಡೆಯಿತಾ? ಬಂಗಾಳದಲ್ಲಿ ತನ್ನಿಂದಾಗಿಯೇ ಕುಸಿದು ಬಿದ್ದಿರುವ ಕಾಂಗ್ರೆಸ್ ಮುಂದೆ ಸಾಗಲು ಸಾಧ್ಯವಿಲ್ಲ ಎಂಬುದು ಅಧೀರನಿಗೆ ಅರಿವಾಗಿದೆಯೇ? ಈ ಬಗ್ಗೆ ಕಾಂಗ್ರೆಸ್ ಆಗಲೀ ಅಥವಾ ಅಧೀರ್ ರಂಜನ್ ಆಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಇದನ್ನೂ ಓದಿ: ಕಾಂಗ್ರೆಸ್ಗೆ ಮರಳುವ ಇಚ್ಛೆ ವ್ಯಕ್ತಪಡಿಸಿದ ಪ್ರಣಬ್ ಮುಖರ್ಜಿ ಮಗ ಅಭಿಜಿತ್ ಮುಖರ್ಜಿ
ಇಂದು ಕೊಲ್ಕತ್ತಾದಲ್ಲಿ ಕಾಂಗ್ರೆಸ್‌ನ ಪ್ರಾಂತೀಯ ಸಭೆ ನಡೆಯಿತು. ಈ ಸಭೆಯ ನಂತರ, ಅಧೀರ್ ರಂಜನ್ ಮಾತನಾಡಿ, ನಾನು ಬಂಗಾಳದ ಪ್ರದೇಶ ಕಾಂಗ್ರೆಸ್‌ನ ಹಂಗಾಮಿ ಅಧ್ಯಕ್ಷ. ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷರಾದ ದಿನದಿಂದಲೂ ದೇಶದಲ್ಲಿ ಎಲ್ಲೂ ರಾಜ್ಯಾಧ್ಯಕ್ಷರೇ ಇರಲಿಲ್ಲ. ಎಲ್ಲರೂ ಹಂಗಾಮಿ ಅಧ್ಯಕ್ಷರಷ್ಟೇ. ನಾನು ಕೂಡ ಹಂಗಾಮಿ ಅಧ್ಯಕ್ಷ ಮಾತ್ರ. ಹೊಸ ನೇಮಕಾತಿ ಪ್ರಕ್ರಿಯೆ ಸದ್ಯದಲ್ಲೇ ಆರಂಭವಾಗಲಿದೆ ಎಂದು ಹೇಳಿದ್ದರು.
ಬಂಗಾಳ ರಾಜ್ಯ ಕಾಂಗ್ರೆಸ್ ಸಂಘಟನೆ ಮಾಡುತ್ತಿರುವುದು ಗೊತ್ತಾಗಿದೆ. ರಾಜ್ಯ ಕಾಂಗ್ರೆಸ್ ನ ನೂತನ ಅಧ್ಯಕ್ಷರನ್ನಾಗಿ ಯಾರನ್ನಾದರೂ ನೇಮಕ ಮಾಡಬೇಕೆಂಬ ಆಗ್ರಹ ಕೇಳಿ ಬಂದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೂತನ ರಾಜ್ಯ ಕಾಂಗ್ರೆಸ್ ಅಧ್ಯಕ್ಷರು ಯಾರೆಂದು ನಿರ್ಧರಿಸಲಿದ್ದಾರೆ.
ಇದನ್ನೂ ಓದಿ: ‘ಪೇಪರ್ ಲೀಕ್ ಸರ್ಕಾರ’; ಯುಜಿಸಿ-ನೆಟ್ ಪರೀಕ್ಷೆಗಳ ರದ್ದತಿಗೆ ಕಾಂಗ್ರೆಸ್ ಪ್ರತಿಕ್ರಿಯೆ
ಅಧೀರ್ ರಂಜನ್ ಅವರ ನಂತರ ಪಶ್ಚಿಮ ಬಂಗಾಳ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಯಾರಾಗಬಹುದು? ಎಂಬ ಕುತೂಹಲ ಉಂಟಾಗಿದೆ. ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದಿಂದ ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಸಂಸದ ಇಶಾ ಖಾನ್ ಚೌಧರಿ ಅವರು ಪಶ್ಚಿಮ ಬಂಗಾಳದ ಹೊಸ ಪ್ರಾಂತೀಯ ಅಧ್ಯಕ್ಷರಾಗುವ ರೇಸ್‌ನಲ್ಲಿದ್ದಾರೆ. ಇದಲ್ಲದೆ, ಪ್ರದೀಪ್ ಭಟ್ಟಾಚಾರ್ಯ ಮತ್ತು ಅಬ್ದುಲ್ ಮನ್ನನ್ ಕೂಡ ಹೊಸ ಪ್ರಾಂತೀಯ ಅಧ್ಯಕ್ಷರಾಗುವ ರೇಸ್‌ನಲ್ಲಿದ್ದಾರೆ ಎಂದು ಮೂಲಗಳು ಹೇಳುತ್ತವೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ