Hijab Row: ಹೈಕೋರ್ಟ್​ ಕುರಾನ್​ನ ಸಾಲುಗಳನ್ನು ತಪ್ಪಾಗಿ ಉಲ್ಲೇಖಿಸಿದೆ: ವಕೀಲ ನಿಜಾಮ್ ಪಾಷಾ

ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ವಿದ್ಯಾರ್ಥಿನಿಯರು ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯಿತು.

Hijab Row: ಹೈಕೋರ್ಟ್​ ಕುರಾನ್​ನ ಸಾಲುಗಳನ್ನು ತಪ್ಪಾಗಿ ಉಲ್ಲೇಖಿಸಿದೆ: ವಕೀಲ ನಿಜಾಮ್ ಪಾಷಾ
Hijab
Follow us
TV9 Web
| Updated By: ನಯನಾ ರಾಜೀವ್

Updated on:Sep 08, 2022 | 5:12 PM

ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ವಿದ್ಯಾರ್ಥಿನಿಯರು ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯಿತು.

ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ ಎಂದು ಹೇಳುವಾಗ ಕುರಾನ್​ನಲ್ಲಿರುವ ಸಾಲುಗಳನ್ನು ತಪ್ಪಾಗಿ ಉಲ್ಲೇಖಿಸಿದೆ ಎಂದು ವಕೀಲರಾದ ನಿಜಾಮ್ ಪಾಷಾ ಸುಪ್ರೀಂಕೋರ್ಟ್​ಗೆ ಹೇಳಿದ್ದಾರೆ. ವಾದ- ಪ್ರತಿವಾದಿಗಳ ಬಳಿಕ ಮುಂದಿನ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಲಾಗಿದೆ.

ಮೊದಲ ದಿನ ವಿಚಾರಣೆಯಲ್ಲಿ ಫಿರ್ಯಾದುದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್​ ಕಾಮತ್​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು.

ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ ಹಿಜಾಬ್​ ಧರಿಸುವುದು ಹಕ್ಕು ಎಂದು ವಾದ ಮಂಡಿಸಿದಾಗ ಕೋರ್ಟ್​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು.

ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಕಾಮತ್ ಹಾಗೂ ನಿಜಾಮ್ ಪಾಷಾ ಅವರು ಹಿಜಾಬ್ ಬಗ್ಗೆ ಇಸ್ಲಾಮಿಕ್ ಕಾನೂನಿನಲ್ಲಿರುವ ನಿಷೇಧಾಜ್ಞೆಗಳ ಮೇಲೆ ಕೇಂದ್ರೀಕರಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ಎತ್ತಿಹಿಡಿಯುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆಗಸ್ಟ್ 29 ರಂದುನೋಟಿಸ್ ನೀಡಿತ್ತು.

ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5 ರಂದು ನಡೆಸಲಾಗಿತ್ತು, ಇಂದು ಮತ್ತೆ ಅರ್ಜಿ ವಿಚಾರಣೆಯನ್ನು ನಡೆಸಿ ಸೆ.12ಕ್ಕೆ ಮುಂದೂಡಿದೆ.

ಸರ್ಕಾರದ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯನ್ನು ಅಭ್ಯಾಸ ಮಾಡುವುದನ್ನು ತಡೆಯುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದು ಅರ್ಜಿಯೊಂದರಲ್ಲಿ ಆರೋಪಿಸಲಾಗಿದೆ.

ಶಾಲಾ-ಕಾಲೇಜುಗಳ ಏಕರೂಪದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಕರ್ನಾಟಕ ಶಾಲಾ ಕಾಲೇಜುಗಳ ತರಗತಿಗಳ ಒಳಗೆ ವಿದ್ಯಾರ್ಥಿನಿಯರು ಹಿಜಾಬ್​ ಧರಿಸುವುದನ್ನು ನಿಷೇಧಿಸಿ ಹೈಕೋರ್ಟ್ ನೀಡಿದ​ ಆದೇಶದ ವಿರುದ್ಧ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ಮೂರನೇ ದಿನದ ವಿಚಾರಣೆ ಸುಪ್ರೀಂಕೋರ್ಟ್​ನಲ್ಲಿ ನಡೆಯಿತು. ಇಸ್ಲಾಂನಲ್ಲಿ ಹಿಜಾಬ್ ಕಡ್ಡಾಯವಲ್ಲ ಎಂದು ಹೇಳುವಾಗ ಖುರಾನ್​ನಲ್ಲಿರುವ ಸಾಲುಗಳನ್ನು ತಪ್ಪಾಗಿ ಉಲ್ಲೇಖಿಸಿದೆ ಎಂದು ವಕೀಲರಾದ ನಿಜಾಮ್ ಪಾಷಾ ಸುಪ್ರೀಂಕೋರ್ಟ್​ಗೆ ಹೇಳಿದ್ದಾರೆ. ವಾದ- ಪ್ರತಿವಾದಿಗಳ ಬಳಿಕ ಮುಂದಿನ ವಿಚಾರಣೆಯನ್ನು ಸೆ.12 ಕ್ಕೆ ಮುಂದೂಡಲಾಗಿದೆ. ಮೊದಲ ದಿನ ವಿಚಾರಣೆಯಲ್ಲಿ ಫಿರ್ಯಾದುದಾರರ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ದೇವದತ್​ ಕಾಮತ್​ ಅವರು, ಬಟ್ಟೆಯ ವಿಚಾರದಲ್ಲಿ ಸರ್ಕಾರ ಮಕ್ಕಳ ಶಿಕ್ಷಣವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದರು. ಈ ವೇಳೆ ಪೀಠ, ಮಕ್ಕಳು ಶಾಲೆಯೊಳಗೆ ಮಿಡಿ, ಸ್ಕರ್ಟ್​ ಧರಿಸಿ ಬರಬಹುದೇ ಎಂದು ಪ್ರಶ್ನಿಸಿದ್ದರು. ಹೀಗಾಗಿ ಶಿಕ್ಷಣಕ್ಕೂ, ಬಟ್ಟೆಗೂ ಸಂಬಂಧವಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.ನಿನ್ನೆ ನಡೆದ ಎರಡನೇ ದಿನದ ವಿಚಾರಣೆಯಲ್ಲಿ “ಹಿಜಾಬ್​ ಧರಿಸುವುದು ಹಕ್ಕು” ಎಂದು ವಾದ ಮಂಡಿಸಿದಾಗ ಕೋರ್ಟ್​, ಧರಿಸುವ ಹಕ್ಕಿದ್ದರೆ, ಅದನ್ನು ಧರಿಸದೇ ಇರುವ ಹಕ್ಕೂ ಇದೆ ಎಂದು ನ್ಯಾಯಾಧೀಶರು ಹೇಳಿದ್ದರು. ಮೇಲ್ಮನವಿ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠ ವಿಚಾರಣೆ ನಡೆಸಿತು. ಕಾಮತ್ ಹಾಗೂ ನಿಜಾಮ್ ಪಾಷಾ ಅವರು ಹಿಜಾಬ್ ಬಗ್ಗೆ ಇಸ್ಲಾಮಿಕ್ ಕಾನೂನಿನಲ್ಲಿರುವ ನಿಷೇಧಾಜ್ಞೆಗಳ ಮೇಲೆ ಕೇಂದ್ರೀಕರಿಸಿದರು. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಮೇಲಿನ ನಿಷೇಧ ಎತ್ತಿಹಿಡಿಯುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಕರ್ನಾಟಕ ಸರ್ಕಾರಕ್ಕೆ ಆಗಸ್ಟ್ 29 ರಂದುನೋಟಿಸ್ ನೀಡಿತ್ತು. ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಯನ್ನು ಸೆಪ್ಟೆಂಬರ್ 5 ರಂದು ನಡೆಸಲಾಗಿತ್ತು, ಇಂದು ಮತ್ತೆ ಅರ್ಜಿ ವಿಚಾರಣೆಯನ್ನು ನಡೆಸಿ ಸೆ.12ಕ್ಕೆ ಮುಂದೂಡಿದೆ.

ಸರ್ಕಾರದ ಮಲತಾಯಿ ವರ್ತನೆಯು ವಿದ್ಯಾರ್ಥಿಗಳ ನಂಬಿಕೆಯನ್ನು ಅಭ್ಯಾಸ ಮಾಡುವುದನ್ನು ತಡೆಯುತ್ತದೆ ಮತ್ತು ಅನಗತ್ಯ ಕಾನೂನು ಮತ್ತು ಸುವ್ಯವಸ್ಥೆ ಪರಿಸ್ಥಿತಿಗೆ ಕಾರಣವಾಗುತ್ತದೆ ಎಂದು ಅರ್ಜಿಯೊಂದರಲ್ಲಿ ಆರೋಪಿಸಲಾಗಿದೆ. ಶಾಲಾ-ಕಾಲೇಜುಗಳ ಏಕರೂಪದ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ದೇಶಿಸುವ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ವಿವಿಧ ಅರ್ಜಿದಾರರು ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ದೇಶದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:07 pm, Thu, 8 September 22