ಭಾರತದಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿದ ಅಫ್ಘಾನಿಸ್ತಾನ
ಅಫ್ಘಾನಿಸ್ತಾನವು ಭಾರತದಲ್ಲಿನ ರಾಯಭಾರ ಕಚೇರಿಯನ್ನು ಮುಚ್ಚಿರುವುದಾಗಿ ತಿಳಿಸಿದೆ. ಸರ್ಕಾರದಿಂದ ಬೆಂಬಲದ ಕೊರತೆ, ಅಫ್ಘಾನಿಸ್ತಾನದ ಹಿತಾಸಕ್ತಿಗಳ ನಿರೀಕ್ಷೆಯನ್ನು ಪೂರೈಸಲು ವಿಫಲತೆ, ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುವುದು ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಮುಚ್ಚುತ್ತಿದ್ದೇವೆ ಎಂದು ಹೇಳಲು ದುಃಖವಾಗುತ್ತಿದೆ. ದೀರ್ಘಕಾಲದ ಪಾಲುದಾರಿಕೆಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಚರ್ಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಅಫ್ಘಾನಿಸ್ತಾನ(Afghanistan)ವು ಭಾರತದಲ್ಲಿನ ರಾಯಭಾರ ಕಚೇರಿಯನ್ನು ಮುಚ್ಚಿರುವುದಾಗಿ ತಿಳಿಸಿದೆ. ಸರ್ಕಾರದಿಂದ ಬೆಂಬಲದ ಕೊರತೆ, ಅಫ್ಘಾನಿಸ್ತಾನದ ಹಿತಾಸಕ್ತಿಗಳ ನಿರೀಕ್ಷೆಯನ್ನು ಪೂರೈಸಲು ವಿಫಲತೆ, ಸಂಪನ್ಮೂಲ ಹಾಗೂ ಸಿಬ್ಬಂದಿ ಕೊರತೆ ಹಿನ್ನೆಲೆಯಲ್ಲಿ ಅಕ್ಟೋಬರ್ 1 ರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುವುದು ಎಂದು ಅಫ್ಘಾನ್ ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಮುಚ್ಚುತ್ತಿದ್ದೇವೆ ಎಂದು ಹೇಳಲು ದುಃಖವಾಗುತ್ತಿದೆ. ದೀರ್ಘಕಾಲದ ಪಾಲುದಾರಿಕೆಯನ್ನು ಗಮನದಲ್ಲಿಟ್ಟುಕೊಂಡು ಎಚ್ಚರಿಕೆಯಿಂದ ಚರ್ಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ರಾಯಭಾರ ಕಚೇರಿ ತಿಳಿಸಿದೆ.
ಭಾರತ ಸರ್ಕಾರ ಅಷ್ಟಾಗಿ ಬೆಂಬಲ ನೀಡುತ್ತಿಲ್ಲ, ವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಸಾಮರ್ಥ್ಯಕ್ಕೆ ಅಡ್ಡಿಯಾಗಿದೆ. ಭಾರತದಲ್ಲಿ ರಾಜತಾಂತ್ರಿಕ ಬೆಂಬಲದ ಕೊರತೆ ಮತ್ತು ಕಾಬೂಲ್‌ನಲ್ಲಿ ಕಾನೂನುಬದ್ಧ ಸರ್ಕಾರದ ಅನುಪಸ್ಥಿತಿಯಿಂದಾಗಿ ಅಫ್ಘಾನಿಸ್ತಾನ ಮತ್ತು ಅದರ ನಾಗರಿಕರ ಉತ್ತಮ ಹಿತಾಸಕ್ತಿಗಳನ್ನು ಪೂರೈಸಲು ಅಗತ್ಯವಾದ ನಿರೀಕ್ಷೆಗಳು ಮತ್ತು ಅವಶ್ಯಕತೆಗಳನ್ನು ಪೂರೈಸುವಲ್ಲಿ ನಮ್ಮ ನ್ಯೂನತೆಗಳನ್ನು ನಾವು ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದೆ.
ಕನಿಷ್ಠ ಐವರು ಆಫ್ಘನ್ ರಾಜತಾಂತ್ರಿಕರು ಭಾರತವನ್ನು ತೊರೆದಿದ್ದಾರೆ ಎಂದು ರಾಯಭಾರ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ. ನವದೆಹಲಿಯಲ್ಲಿ ಕಾರ್ಯಾಚರಣೆಯನ್ನು ಮುಚ್ಚುವ ನಿರ್ಧಾರದ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ (MEA) ಮೊದಲೇ ತಿಳಿಸಲಾಗಿತ್ತು ಎಂದು ರಾಯಭಾರ ಕಚೇರಿ ತಿಳಿಸಿದೆ.
ಮತ್ತಷ್ಟು ಓದಿ: ಭಾರತದಲ್ಲಿ ತಾಲಿಬಾನ್ನ ಹೊಸ ಉಸ್ತುವಾರಿ ಅಧಿಕಾರಿ ನೇಮಕ ವರದಿ ತಿರಸ್ಕರಿಸಿದ ಅಫ್ಘಾನಿಸ್ತಾನ ರಾಯಭಾರ ಕಚೇರಿ
ಭಾರತದಲ್ಲಿ ವಾಸಿಸುವ, ಕೆಲಸ ಮಾಡುವ, ಅಧ್ಯಯನ ಮಾಡುವ, ವ್ಯಾಪಾರ ಮಾಡುವ ಮತ್ತು ವಿವಿಧ ಚಟುವಟಿಕೆಗಳಲ್ಲಿ ತೊಡಗಿರುವ ಆಫ್ಘನ್ನರ ಹಿತಾಸಕ್ತಿಗಳನ್ನು ರಕ್ಷಿಸಲು ಸರ್ಕಾರವನ್ನು ಒತ್ತಾಯಿಸಿದೆ. 2021 ರಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಭಾರತವು ಅಫ್ಘಾನಿಸ್ತಾನದಲ್ಲಿನ ತನ್ನ ರಾಯಭಾರ ಕಚೇರಿಯನ್ನು ಮುಚ್ಚಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ