ನ್ಯೂಯಾರ್ಕ್: ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಪಾಕಿಸ್ತಾನ ಹಾಗೂ ಚೀನಾ ವಿರುದ್ಧ ಪರೋಕ್ಷವಾಗಿ ಗುಡುಗಿದ್ದಾರೆ. ಭಯೋತ್ಪಾದನೆಯನ್ನು ರಾಜಕೀಯ ಅಸ್ತ್ರದಂತೆ ಬಳಸ್ತಿದ್ದಾರೆ. ಆದರೆ, ಭಯೋತ್ಪಾದನೆ ಮುಂದೊಂದು ದಿನ ಅವರಿಗೂ ಕಂಟಕವಾಗುತ್ತದೆ ಎಂಬುದನ್ನು ಅವರು ಮರೆಯಬಾರದು. ಅಫ್ಘಾನಿಸ್ತಾನದ ಭೂಮಿ ಭಯೋತ್ಪಾದನೆಗೆ ಬಳಕೆ ಆಗಬಾರದು ಎಂದು ನಾವು ಎಚ್ಚರಿಕೆ ನೀಡುತ್ತಿದ್ದೇನೆ. ಭಯೋತ್ಪಾದನೆ ರಾಜಕೀಯವಾಗಿ ಬಳಕೆಯಾಗುತ್ತಿದೆ ಎಂದು ಹೇಳುವ ಮೂಲಕ ಚೀನಾ ಮತ್ತು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.
ಅಫ್ಘಾನಿಸ್ತಾನದ ಮಹಿಳೆಯರು, ಮಕ್ಕಳು, ಅಲ್ಪಸಂಖ್ಯಾತರಿಗೆ ರಕ್ಷಣೆ ಬೇಕಾಗಿದೆ. ಅಫ್ಘಾನಿಸ್ತಾನದ ಉಗ್ರರನ್ನು ಬಳಸಿಕೊಳ್ಳುವ ಪ್ರಯತ್ನ ಮಾಡಬೇಡಿ. ಅಲ್ಲಿನ ಸೂಕ್ಷ್ಮ ಪರಿಸ್ಥಿತಿಯನ್ನು ಯಾವುದೇ ದೇಶ ಬಳಸಿಕೊಳ್ಳಬಾರದು. ಅಫ್ಘಾನಿಸ್ತಾನದ ಬಿಕ್ಕಟ್ಟನ್ನು ಯಾವುದೇ ದೇಶ ತನ್ನ ಲಾಭಕ್ಕೆ ಬಳಸಬಾರದು. ಸಮುದ್ರ ಸಂಪನ್ಮೂಲ ಬಳಸಿಕೊಳ್ಳಬೇಕೇ ವಿನಃ ದುರ್ಬಳಕೆ ಮಾಡಿಕೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Addressing the @UN General Assembly. https://t.co/v9RtYcGwjX
— Narendra Modi (@narendramodi) September 25, 2021
ಈ ವೇಳೆ ಚಾಣಕ್ಯನ ಮಾತುಗಳನ್ನು ಉಲ್ಲೇಖಿಸಿದ ನರೇಂದ್ರ ಮೋದಿ, ಸರಿಯಾದ ಸಮಯದಲ್ಲಿ ಸರಿಯಾದ ಕೆಲಸ ಮಾಡದಿದ್ದರೆ ಸಮಯವೇ ಆ ಕೆಲಸವನ್ನು ಮಾಡುತ್ತದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆಯಲ್ಲಿ ಸುಧಾರಣೆ ಆಗಲೇಬೇಕು. ವಿಶ್ವಸಂಸ್ಥೆ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಕೊವಿಡ್, ಹವಾಮಾನ ಬದಲಾವಣೆ, ಭಯೋತ್ಪಾದನೆ, ಅಫ್ಘಾನಿಸ್ತಾನದ ವಿಚಾರದಲ್ಲಿ ವಿಶ್ವಸಂಸ್ಥೆ ಬಗ್ಗೆ ಪ್ರಶ್ನೆ ಎದ್ದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
Essential to ensure Afghanistan territory not used to spread terrorism: PM Modi at UNGA
Read @ANI Story | https://t.co/z71vG5D9LD#PMModiUSVisit #PMModiatUNGA #UNGA pic.twitter.com/mbYA9rpbNX
— ANI Digital (@ani_digital) September 25, 2021
UNGA 76ನೇ ಅಧಿವೇಶನ ಉದ್ದೇಶಿಸಿ ಮೋದಿ ಭಾಷಣ ಮಾಡುತ್ತಿದ್ದು, ಭಾರತ ಸ್ವಾತಂತ್ರ್ಯದ 75ನೇ ವರ್ಷ ಪ್ರವೇಶಿಸಿದೆ. ಕೊರೊನಾದಿಂದ ಮೃತಪಟ್ಟ ಎಲ್ಲರಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಭಾರತ ಉಜ್ವಲ ಪ್ರಜಾಪ್ರಭುತ್ವಕ್ಕೆ ಒಂದು ಉದಾಹರಣೆ ಆಗಿದೆ. ಭಾರತದ ಪ್ರಧಾನಿ ಆಗಿ 4ನೇ ಬಾರಿಗೆ UNGAಯಲ್ಲಿ ಭಾಷಣ ಮಾಡುತ್ತಿದ್ದೇನೆ. ದೇಶದ ಜನರ ಸೇವೆ ಮಾಡುತ್ತಾ 20 ವರ್ಷ ಕಳೆದಿದ್ದೇನೆ. ಪ್ರಜಾಪ್ರಭುತ್ವದಿಂದ ಮಾತ್ರ ಉತ್ತಮ ಆಳ್ವಿಕೆ ಸಾಧ್ಯ. ಅಭಿವೃದ್ಧಿಯಿಂದ ಯಾರನ್ನೂ ಹೊರಗಿಡುವುದಿಲ್ಲ. ಮೊದಲು ಮುಖ್ಯಮಂತ್ರಿಯಾಗು, ಈಗ ಪ್ರಧಾನಮಂತ್ರಿಯಾಗಿ ಜನರ ಕೆಲಸ ಮಾಡ್ತಿದ್ದೇನೆ ಎಂದು ಮೋದಿ ಹೇಳಿದ್ದಾರೆ. ವಿಶ್ವಸಂಸ್ಥೆಯಲ್ಲಿ ಹಿಂದಿ ಭಾಷೆಯಲ್ಲಿ ಪ್ರಧಾನಿ ಮೋದಿ ಮಾತನಾಡಿದ್ದಾರೆ.
ಇದನ್ನೂ ಓದಿ: ಭಾರತ ಅಭಿವೃದ್ಧಿಯಾದರೆ ವಿಶ್ವವೇ ಅಭಿವೃದ್ಧಿಯಾಗುತ್ತದೆ; ವಿಶ್ವಸಂಸ್ಥೆಯಲ್ಲಿ ಪ್ರಧಾನಿ ಮೋದಿ
PM Modi in UNGA Summit: ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಆರಂಭ
(Afghanistan Territory Not Used to spread Terrorism PM Narendra Modi Warning to Pakistan and China in UN General Assembly)
Published On - 7:25 pm, Sat, 25 September 21