ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ ಜಿಲ್ಲಾಧಿಕಾರಿ

|

Updated on: Aug 19, 2023 | 2:41 PM

ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ವರದಿಯಾಗಿದ್ದು, ಇದೀಗ ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆ; ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ ಜಿಲ್ಲಾಧಿಕಾರಿ
ಸಾಂದರ್ಭಿಕ ಚಿತ್ರ
Follow us on

ತಿರುವನಂತಪುರಂ, ಆ.19: ಕೇರಳದ ಕನಿಚಾರ್ ಗ್ರಾಮದಲ್ಲಿ ಆಫ್ರಿಕನ್ ಹಂದಿಜ್ವರ  (African swine fever) ಏಕಾಏಕಿ ವರದಿಯಾಗಿದ್ದು, ಇದೀಗ ಹಂದಿಗಳನ್ನು ಎರಡು ಫಾರ್ಮ್‌ಗಳಲ್ಲಿ ಕೊಲ್ಲಲು ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ. ಶುಕ್ರವಾರ ಮಲೆಯಂಪಾಡಿನಲ್ಲಿ ಈ ಜ್ವರ ಪತ್ತೆಯಾಗಿದ್ದು, ಈ ಬಗ್ಗೆ ಜಿಲ್ಲಾ ಪಶುಸಂಗೋಪನೆ ಅಧಿಕಾರಿಗಳು ದೃಢಪಟ್ಟಿಸಿದ್ದಾರೆ. ನಂತರ, ಜಿಲ್ಲಾಧಿಕಾರಿಗಳು ಹಂದಿಗಳನ್ನು ಮಲೆಯಂಪಾಡಿಯಲ್ಲಿರುವ ಮತ್ತು 10 ಕಿಮೀ ವ್ಯಾಪ್ತಿಯಲ್ಲಿರುವ ಹಂದಿಗಳನ್ನು ಕೊಲ್ಲಲು ಆದೇಶ ನೀಡಿದ್ದು, ಅದನ್ನು ಶಿಷ್ಟಾಚಾರದ ಪ್ರಕಾರ ಶವಗಳನ್ನು ಹೂಳಲು ಹೇಳಿದ್ದಾರೆ.

ಹಂದಿ ಸಾಕಾಣಿಕೆ ಕೇಂದ್ರದ ಸುತ್ತಲಿನ ಒಂದು ಕಿ.ಮೀ ಪ್ರದೇಶವನ್ನು ಸೋಂಕಿತ ಪ್ರದೇಶವೆಂದು ಘೋಷಿಸಲಾಗಿದೆ ಮತ್ತು 10 ಕಿಮೀ ವ್ಯಾಪ್ತಿಯನ್ನು ರೋಗ ಕಣ್ಗಾವಲು ವಲಯ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಈ ಪ್ರದೇಶದಲ್ಲಿ ಹಂದಿ ಮಾಂಸದ ವಿತರಣೆ ಮತ್ತು ಮಾರಾಟ, ಸಾಗಣೆಯನ್ನು ಮೂರು ತಿಂಗಳವರೆಗೆ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಆಫ್ರಿಕನ್ ಹಂದಿ ಜ್ವರದಿಂದ ಮಧ್ಯಪ್ರದೇಶದಲ್ಲಿ 85 ಹಂದಿಗಳು ಸಾವು, 115ಕ್ಕೆ ಸೋಂಕು

ಕಳೆದ ಎರಡು ತಿಂಗಳ ಹಿಂದೆ ಹಾನಿಗೊಳಗಾದ ಜಮೀನಿನಿಂದ ಹಂದಿಗಳನ್ನು ಬೇರೆ ಜಮೀನುಗಳಿಗೆ ಸಾಗಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಲು ತುರ್ತು ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ