African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ

African Swine Fever: ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

African Swine Fever: ಕೇರಳದ ಕಣ್ಣೂರು ಮತ್ತು ವಯನಾಡು ಜಿಲ್ಲೆಗಳಲ್ಲಿ ಮತ್ತೆ ಹಂದಿ ಜ್ವರ ಪತ್ತೆ
African Swine Fever
Image Credit source: NDTV
TV9kannada Web Team

| Edited By: ಅಕ್ಷಯ್​ ಕುಮಾರ್​​

Aug 01, 2022 | 4:17 PM

ಕೇರಳ: ಕೇರಳದಲ್ಲಿ ಇತ್ತೀಚೆಗೆ ಆಫ್ರಿಕನ್ ಹಂದಿ ಜ್ವರ ಹರಡುವುದನ್ನು ತಡೆಗಟ್ಟಲು ವಯನಾಡ್ ಜಿಲ್ಲೆಯಲ್ಲಿ 300 ಕ್ಕೂ ಹೆಚ್ಚು ಹಂದಿಗಳನ್ನು ಕೊಂದ ಕೇವಲ ಒಂದು ವಾರದ ನಂತರ ಮತ್ತೆ  ರಾಜ್ಯದ ಕಣ್ಣೂರು ಜಿಲ್ಲೆಯಲ್ಲಿ ಹಂದಿ ಜ್ವರದ ಹೊಸ ಪ್ರಕರಣಗಳು ವರದಿಯಾಗಿವೆ. ವಯನಾಡು ಮತ್ತು ಕಣ್ಣೂರಿನಲ್ಲಿ ತಲಾ ಒಂದೊಂದು ಪ್ರಕರಣ ವರದಿಯಾಗಿದೆ ಎಂದು ಅಲ್ಲಿನ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ರೋಗದ ವರದಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಭೆಯನ್ನು ನಿಗದಿಪಡಿಸಲಾಗಿದೆ ಎಂದು ಕಣ್ಣೂರಿನ ಜಿಲ್ಲಾಧಿಕಾರಿ ಕಚೇರಿ ಪಿಟಿಐಗೆ ತಿಳಿಸಿದೆ.

ವಯನಾಡಿನ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಡಾ.ರಾಜೇಶ್ ಅವರು, ಸುಲ್ತಾನ್ ಬತ್ತೇರಿಯ ನೆನ್ಮೆನಿ ಫಾರ್ಮ್ ಮತ್ತು ಅದರ ಸುತ್ತಮುತ್ತಲಿನ 193 ಹಂದಿಗಳನ್ನು ಈ ವಾರದಲ್ಲಿ ರೋಗ ಹರಡುವುದನ್ನು ತಡೆಯಲು ಕೊಲ್ಲಲಾಗುವುದು  ಎಂದು ಪಿಟಿಐಗೆ ತಿಳಿಸಿದರು.

ವಯನಾಡ್ ಒಂದರಲ್ಲೇ 222 ಹಂದಿ ಸಾಕಣೆ ಕೇಂದ್ರಗಳಲ್ಲಿ 20,000 ಹಂದಿಗಳು ಈ ರೋಗ ಹರಡಿಕೊಂಡಿವೆ. ಮುಜಾಗೃತ ಕ್ರಮವಾಗಿ ಈ ಈ ರೋಗದ ಬಗ್ಗೆ ವೈದ್ಯರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳಲಾಗುವುದು ಎಂದು  ಹೇಳಿದರು. ಬಿಹಾರ ಮತ್ತು ಕೆಲವು ಈಶಾನ್ಯ ರಾಜ್ಯಗಳಲ್ಲಿ ಆಫ್ರಿಕನ್ ಹಂದಿ ಜ್ವರ ವರದಿಯಾಗಿದೆ ಎಂದು ಕೇಂದ್ರದ ಎಚ್ಚರಿಕೆಯ ನಂತರ ಕೇರಳ ಜುಲೈನಲ್ಲಿ ಜೈವಿಕ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಿತ್ತು.

ಇದನ್ನೂ ಓದಿ

ಹಂದಿ ಜ್ವರವು ಹೊಸ ಪ್ರಕರಣವು ಜಿಲ್ಲೆಯ ನೆನ್ಮೇನಿ ಗ್ರಾಮದಲ್ಲಿ ವರದಿಯಾಗಿದೆ. ಹೊಸ ಪ್ರಕರಣದಿಂದ ಜಿಲ್ಲೆಯಲ್ಲಿ ಪಶು ಸಂಗೋಪನಾ ಇಲಾಖೆ ಎಚ್ಚೆತ್ತುಕೊಂಡಿದೆ. ಆಹಾರ ಮತ್ತು ಕೃಷಿ ಸಂಸ್ಥೆ (FAO) ಪ್ರಕಾರ, ಆಫ್ರಿಕನ್ ಹಂದಿ ಜ್ವರವು ದೇಶೀಯ ಹಂದಿಗಳಲ್ಲಿ ಅತ್ಯಂತ ಸಾಂಕ್ರಾಮಿಕ ಮತ್ತು ಮಾರಣಾಂತಿಕವಾಗಿ ಹರಡುವ ರೋಗವಾಗಿದೆ. ಇದು ಮೊದಲ ಬಾರಿಗೆ ಪೂರ್ವ ಆಫ್ರಿಕಾದ ಕೀನ್ಯಾದಲ್ಲಿ 1921ರಲ್ಲಿ ಹಂದಿಗಳನ್ನು ಕೊಲ್ಲುವ ಕಾಯಿಲೆಯಾಗಿ ಪತ್ತೆಯಾಯಿತು. ಇದು ಪ್ರಾಣಿಗಳಲ್ಲಿ ವೈರಸ್ ಹರಡುವಲ್ಲಿ ಪ್ರಮುಖ ಅಂಶವಾಗಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada