AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಫೈವ್​ ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಮಹಿಳೆಯೊಬ್ಬಳು ಏಕಾಏಕಿ ಬೆತ್ತಲಾಗಿ ರೂಮಿನಿಂದ​ ಆಚೆ ಬಂದು ಭಾರೀ ಹೈಡ್ರಾಮ ಸೃಷ್ಟಿಸಿದ್ದಾಳೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್
ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ
TV9 Web
| Edited By: |

Updated on:Dec 18, 2022 | 5:23 PM

Share

ಜೈಪುರ: ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದ ವಿದೇಶಿ ಮಹಿಳೆಯೊಬ್ಬರು ಬೆತ್ತಲೆಯಾಗಿ ರೂಮಿನಿಂದ ಹೊರಬಂದು ದೊಡ್ಡ ಹೈಡ್ರಾಮವೇ ಮಾಡಿದ್ದಾಳೆ. ಅಲ್ಲದೇ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ಮಾಡಿ ಮಾಡಿದ್ದಾಳೆ. ರಾಜಸ್ಥಾನ ರಾಜಧಾನಿ ಜೈಪುರದ ಫೈವ್​ ಸ್ಟಾರ್​ ಹೋಟೆಲ್​ನಲ್ಲಿ ನಡೆದಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮಹಿಳೆ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನು ಓದಿ: ಖ್ಯಾತ ಯೂಟ್ಯೂಬರ್​ನ ಇಬ್ಬರು ಪತ್ನಿಯರು ಒಂದೇ ಬಾರಿಗೆ ಪ್ರೆಗ್ನೆಂಟ್, ಅದು ಹೇಗೆ ಸಾಧ್ಯವೆಂದು ಅಚ್ಚರಿಗೊಂಡ ಜನ

ಭಾರತಕ್ಕೆ ಪ್ರವಾಸಕ್ಕಾಗಿ ಬಂದಿದ್ದ ವಿದೇಶಿ ಮಹಿಳೆ ಒಬ್ಬರು ಅಲ್ಲಿನ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದರು. ಏಕಾಏಕಿ ರೂಮಿನಿಂದ ಬೆತ್ತಲೆಯಾಗಿ ಬಂದ ಮಹಿಳೆ, ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಗಲಾಟೆ ಬಿಡಿಸಲು ಬಂದ ಮಹಿಳಾ ಸಿಬ್ಬಂದಿಯೊಬ್ಬರ ಕೂದಲು ಹಿಡಿದು ಎಳೆದಾಡಿದ್ದಾರೆ.

ದೃಶ್ಯದಲ್ಲಿ ನೋಡಿದ ಪ್ರಕಾರ, ಕೂಗಾಡುತ್ತಲೇ ಕೋಣೆಯಿಂದ ಬೆತ್ತಲಾಗಿ ಹೊರಬಂದ ಮಹಿಳೆ ಹೋಟೆಲ್​ ಸಿಬ್ಬಂದಿಯನ್ನು ಬಾಯಿಗೆ ಬಂದಂತೆ ಬೈದು ಕೂಗಾಡಿದ್ದಾಳೆ. ಅಲ್ಲದೇ ಹೋಟೆಲ್ ಸಿಬ್ಬಂದಿ ಮೇಲೂ ಹಲ್ಲೆಗೆ ಮುಂದಾಗಿರುವುದು ವೈರಲ್ ಆಗಿರುವ ವಿಡಿಯೋನಲ್ಲಿ ಕಾಣಬಹುದು.

ಆದ್ರೆ, ಈ ವಿದೇಶಿ ಮಹಿಳೆ ಹೋಟೆಲ್​ ರೂಮಿನಿಂದ ಬೆತ್ತಲೆಯಾಗಿ ಆಚೆ ಬಂದು ಯಾವ ಕಾರಣಕ್ಕೆ ಈ ರೀತಿ ರಂಪಾಟ ಮಾಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಆದರೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಒಬ್ಬರು, ಕೂಡಲೇ ಆಕೆಯನ್ನು ದೇಶದಿಂದ ವಾಪಸ್ ಕಳುಹಿಸಿ. ಪಾಸ್‌ಪೋರ್ಟ್‌‌‌‌ ಬ್ಲಾಕ್ ಲಿಸ್ಟ್​ಗೆ ಸೇರಿಸಿ ಎಂದಿದ್ದರೆ, ಮತ್ತೊಬ್ಬರು ಭಾರತದ ಕಾನೂನಿನ ಪ್ರಕಾರ ಆಕೆಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:20 pm, Sun, 18 December 22

Follow Us
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಕಳೆದ ಅಧಿವೇಶನದಂತೆ ಈ ವಿಶೇಷ ಅಧಿವೇಶನದ ಕಲಾಪವೂ ವೇಸ್ಟ್ ಆಗುತ್ತಾ!
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಇಂದಿನಿಂದ ದಸರಾ ಗೋಲ್ಡ್ ಕಾರ್ಡ್, ವಿವಿಧ ಕಾರ್ಯಕ್ರಮಗಳ ಟಿಕೆಟ್‌ ಮಾರಾಟ ಆರಂಭ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಕಸ್ತೂರಿ ರಂಗನ್ ವರದಿ ಬಗ್ಗೆ ಚರ್ಚೆ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ
ಹೆಚ್.ಕೆ. ಪಾಟೀಲ್ ಪತ್ರ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ JDS ವ್ಯಂಗ್ಯ