Caste Census ಬಿಹಾರದಲ್ಲಿ ಜಾತಿ ಜನಗಣತಿಗೆ ಸಿಎಂ ನಿತೀಶ್ ಕುಮಾರ್ ನಿರ್ಧಾರ

ದೇಶದಾದ್ಯಂತ ಜಾತಿಜನಗಣತಿ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ. ಹಾಗಾಗಿ ನಾವು ರಾಜ್ಯದಲ್ಲಿ ನಾವೇ ಜಾತಿಗಣತಿ ಮಾಡಲು ನಿರ್ಧರಿಸಿದ್ದೇವೆ, ಅದರ ಬಗ್ಗೆ ಸಂಪೂರ್ಣ ಒಮ್ಮತವಿದೆ.

Caste Census ಬಿಹಾರದಲ್ಲಿ ಜಾತಿ ಜನಗಣತಿಗೆ ಸಿಎಂ ನಿತೀಶ್ ಕುಮಾರ್ ನಿರ್ಧಾರ
ನಿತೀಶ್ ಕುಮಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 01, 2022 | 10:07 PM

ದೇಶದಲ್ಲಿ ಜಾತಿ ಜನಗಣತಿ (caste census) ಪ್ರಕ್ರಿಯೆ ನಡೆಸುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳಿದ ನಂತರ ಸರ್ವ ಪಕ್ಷ ಸಭೆ ಕರೆದ ಬಿಹಾರದ (Bihar) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ತಮ್ಮ ರಾಜ್ಯದಲ್ಲಿ ಜಾತಿ ಜನಗಣತಿ ನಡೆಸುವುದಾಗಿ ಬುಧವಾರ ಹೇಳಿದ್ದಾರೆ. ಸರ್ವಪಕ್ಷ ಸಭೆ ನಂತರ ಮಾತನಾಡಿದ ನಿತೀಶ್ ಕುಮಾರ್, ಎಲ್ಲ 9 ಪಕ್ಷಗಳು ಜಾತಿ ಜನಗಣತಿ ನಡೆಸಬಹುದು ಎಂದು ಒಪ್ಪಿವೆ. ಇದಕ್ಕೆ ಸಚಿವ ಸಂಪುಟದಿಂದ ಶೀಘ್ರದಲ್ಲೇ ಒಪ್ಪಿಗೆ ನೀಡಿ, ಅಗತ್ಯ ನಿಧಿ ಅನುದಾನ ನೀಡಲಾಗುವುದು. ಈ ಬಗ್ಗೆ ಪ್ರಕಟಣೆ ಹೊರಡಿಸಿ ಪ್ರಕ್ರಿಯೆ ಪೂರ್ತಿಗೊಳಿಸಲು ಡೆಡ್ ಲೈನ್ ನೀಡಲಾಗುವುದು ಎಂದಿದ್ದಾರೆ. ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ದೇಶದಾದ್ಯಂತ ಜಾತಿಜನಗಮತಿ ನಡೆಸಬೇಕು ಎಂದು ಕಳೆದ ವರ್ಷ ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ ಒತ್ತಾಯಿಸಿದ್ದವು. ದೇಶದಾದ್ಯಂತ ಜಾತಿಜನಗಣತಿ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟ ಪಡಿಸಿದೆ. ಹಾಗಾಗಿ ನಾವು ರಾಜ್ಯದಲ್ಲಿ ನಾವೇ ಜಾತಿಗಣತಿ ಮಾಡಲು ನಿರ್ಧರಿಸಿದ್ದೇವೆ, ಅದರ ಬಗ್ಗೆ ಸಂಪೂರ್ಣ ಒಮ್ಮತವಿದೆ ಎಂದು ಅವರು ಹೇಳಿದ್ದಾರೆ.  ಸ್ಥಳೀಯ ಸಂಸ್ಥೆಗಳ ಚುನಾವಣೆಯ ಕಾರಣ ಎರಡೂವರೆ ತಿಂಗಳು ಸರ್ವಪಕ್ಷ ಸಭೆ ವಿಳಂಬವಾಗಿದೆ ಎಂದು ಸಿಎಂ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಡಾ. ಸಂಜಯ್ ಜೈಸ್ವಾಲ್ ಮತ್ತು ಉಪ ಮುಖ್ಯಮಂತ್ರಿ ತಾರ್ಕಿಶೋರ್ ಪ್ರಸಾದ್ ಸಭೆಯಲ್ಲಿ ಭಾಗವಹಿಸಿದ್ದರು. ಆರ್‌ಜೆಡಿಯನ್ನು ಪ್ರತಿಪಕ್ಷದ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಮತ್ತು ರಾಜ್ಯಸಭಾ ಸಂಸದ ಮನೋಜ್ ಕುಮಾರ್ ಝಾ ಪ್ರತಿನಿಧಿಸಿದ್ದರು. ಎಐಎಂಐಎಂ ಬಿಹಾರ ಮುಖ್ಯಸ್ಥ ಅಖ್ತರುಲ್ ಇಮಾನ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು.

“ನಾವು ಜಾತಿ ಗಣತಿಗೆ ಬಹಳ ಹಿಂದಿನಿಂದಲೂ ಬೇಡಿಕೆ ಇಟ್ಟಿದ್ದೇವೆ. ರಾಷ್ಟ್ರವ್ಯಾಪಿ ಜನಗಣತಿ ಸೂಕ್ತವಾಗಿರುತ್ತಿತ್ತು. ಆದರೆ ಬಿಹಾರ ತನ್ನದೇ ಆದ ಜಾತಿ ಗಣತಿಯನ್ನು ನಡೆಸುತ್ತಿದೆ ಎಂದು ನಮಗೆ ತೃಪ್ತಿ ಇದೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ
Image
Anil Hegde: ಬಿಹಾರ ರಾಜ್ಯಸಭಾ ಉಪಚುನಾವಣೆ; ಜೆಡಿಯುದಿಂದ ಮಂಗಳೂರು ಮೂಲದ ಅನಿಲ್ ಹೆಗ್ಡೆ ಕಣಕ್ಕೆ
Image
ಪ್ರತಿಯೊಬ್ಬರ ಅಭಿಪ್ರಾಯ ಮುಖ್ಯವಲ್ಲ ಎಂದಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್​​ಗೆ ಪ್ರಶಾಂತ್ ಕಿಶೋರ್​​ ಟ್ವೀಟ್​​ ತಿರುಗೇಟು
Image
ಜಾತಿ ಆಧಾರಿತ ಜನಗಣತಿ ನ್ಯಾಯಸಮ್ಮತ ಬೇಡಿಕೆ: ಎನ್‌ಸಿಬಿಸಿ ಮುಖ್ಯಸ್ಥ

ಕರ್ನಾಟಕ ಮತ್ತು ತೆಲಂಗಾಣ ನಂತರ ಬಿಹಾರ ತನ್ನದೇ ಆದ ಜಾತಿ ಗಣತಿಯನ್ನು ನಡೆಸುವ ಮೂರನೇ ರಾಜ್ಯವಾಗಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ