Omicron: ಆಂಧ್ರಪ್ರದೇಶ, ಚಂಡೀಗಡದ ಬೆನ್ನಲ್ಲೇ ನಾಗ್ಪುರದಲ್ಲೂ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ; ದೇಶದಲ್ಲಿ 37ಕ್ಕೇರಿದ ಸೋಂಕಿತರ ಸಂಖ್ಯೆ

Nagpur: ಇಂದು ಆಂಧ್ರಪ್ರದೇಶ ಹಾಗೂ ಚಂಡೀಗಡದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಮಹಾರಾಷ್ಟ್ರದ ನಾಗಪುರದಲ್ಲೂ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಕರ್ನಾಟಕದಲ್ಲೂ ಒಂದು ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 37ಕ್ಕೇರಿದೆ.

Omicron: ಆಂಧ್ರಪ್ರದೇಶ, ಚಂಡೀಗಡದ ಬೆನ್ನಲ್ಲೇ ನಾಗ್ಪುರದಲ್ಲೂ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆ; ದೇಶದಲ್ಲಿ 37ಕ್ಕೇರಿದ ಸೋಂಕಿತರ ಸಂಖ್ಯೆ
ಪ್ರಾತಿನಿಧಿಕ ಚಿತ್ರ (ಕೃಪೆ: ಪಿಟಿಐ)
Follow us
TV9 Web
| Updated By: shivaprasad.hs

Updated on:Dec 12, 2021 | 4:31 PM

ನಾಗ್ಪುರ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂದು ಬೆಳಗ್ಗೆ ಆಂಧ್ರಪ್ರದೇಶ ಹಾಗೂ ಚಂಡೀಗಡದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಮಧ್ಯಾಹ್ನ ಕರ್ನಾಟಕದಲ್ಲಿ 34 ವರ್ಷದ ವ್ಯಕ್ತಿಯೋರ್ವರಲ್ಲಿ ಒಮಿಕ್ರಾನ್ ವೈರಾಣು ಕಂಡುಬಂದಿತ್ತು. ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸದ್ಯ ದೇಶದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾದಂತಾಗಿದೆ. ಇಂದು ನಾಗ್ಪುರದಲ್ಲಿ 40 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಕರ್ನಾಟಕದಲ್ಲಿ ಇದುವರೆಗೆ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ಕಂಡುಬಂದಿದೆ. ಇಂದು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದರು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಚಂಡೀಗಡದಲ್ಲಿ 20 ವರ್ಷದ ಇಟಲಿ ನಿವಾಸಿಯೋರ್ವರಿಗೆ ಒಮಿಕ್ರಾನ್ ಪಾಸಿಟಿವ್ ಬಂದಿದೆ. ಇದು ಚಂಡೀಗಡದ ಮೊದಲ ಪ್ರಕರಣವಾಗಿದೆ. ಆಂಧ್ರಪ್ರದೇಶದಲ್ಲಿ 34 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದ್ದು, ಅವರು ಐರ್ಲೆಂಡ್​ನಿಂದ ಹಿಂದಿರುಗಿದ್ದರು.

ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಲಕ್ಷಣಗಳು ಹೇಗಿವೆ? ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳು ಎಲ್ಲಾ ವಯೋಮಾನದವರಲ್ಲೂ ಕಂಡುಬರುತ್ತಿವೆ. ಒಂದೂವರೆ ವರ್ಷ ಹಾಗೂ ಮೂರು ವರ್ಷದ ಮಕ್ಕಳಲ್ಲೂ ಸೋಂಕು ಕಂಡುಬಂದಿದೆ. ಒಮಿಕ್ರಾನ್ ಪ್ರಕರಣಗಳಲ್ಲಿ ರೋಗಿಗಳಿಗೆ ಬಹುತೇಕ ಬಾರಿ ಯಾವುದೇ ಲಕ್ಷಣಗಳಿರುವುದಿಲ್ಲ. ಇದ್ದರೂ ಸೌಮ್ಯ ಪ್ರಮಾಣದಲ್ಲಿರುತ್ತದೆ. ಹೆಚ್ಚಿನ ರೋಗಿಗಳು ವಾರದೊಳಗೆ ಚೇತರಿಸಿಕೊಳ್ಳಲು ಆರಂಭಿಸುತ್ತಾರೆ. ಒಮಿಕ್ರಾನ್​ನ ಸಾಮಾನ್ಯ ಲಕ್ಷಣ ಲಘು ಜ್ವರ ಮತ್ತು ತೀವ್ರ ಸುಸ್ತು. ಭಾರತದಲ್ಲಿ ಕೆಲವು ಪ್ರಕರಣಗಳನ್ನು ಹೊರತುಪಡಿಸಿ, ಹೆಚ್ಚಿನ ಒಮಿಕ್ರಾನ್ ರೋಗಿಗಳು ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ.

ಇದನ್ನೂ ಓದಿ:

Omicron ಒಮಿಕ್ರಾನ್ ಏಪ್ರಿಲ್ ಅಂತ್ಯದ ವೇಳೆಗೆ ಯುಕೆಯಲ್ಲಿ 75,000 ಸಾವುಗಳಿಗೆ ಕಾರಣವಾಗಬಹುದು: ಅಧ್ಯಯನ ವರದಿ

ಸಿಡಿಎಸ್ ಬಿಪಿನ್ ರಾವತ್ ಅವರೊಂದಿಗೆ ಹುತಾತ್ಮರಾಗಿದ್ದ ಲ್ಯಾನ್ಸ್​ ನಾಯಕ್ ಸಾಯಿ ತೇಜಾ ಪಾರ್ಥಿವ ಶರೀರದ ಅಂತ್ಯಕ್ರಿಯೆ

Published On - 4:26 pm, Sun, 12 December 21

ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್