ನಾಗ್ಪುರ: ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ವಿವಿಧ ರಾಜ್ಯಗಳಲ್ಲಿ ಹೊಸ ಪ್ರಕರಣಗಳು ಪತ್ತೆಯಾಗುತ್ತಿವೆ. ಇಂದು ಬೆಳಗ್ಗೆ ಆಂಧ್ರಪ್ರದೇಶ ಹಾಗೂ ಚಂಡೀಗಡದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿತ್ತು. ಮಧ್ಯಾಹ್ನ ಕರ್ನಾಟಕದಲ್ಲಿ 34 ವರ್ಷದ ವ್ಯಕ್ತಿಯೋರ್ವರಲ್ಲಿ ಒಮಿಕ್ರಾನ್ ವೈರಾಣು ಕಂಡುಬಂದಿತ್ತು. ಇದೀಗ ಮಹಾರಾಷ್ಟ್ರದ ನಾಗ್ಪುರದಲ್ಲಿ ಮೊದಲ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸದ್ಯ ದೇಶದಲ್ಲಿ ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರದಲ್ಲಿ ಪತ್ತೆಯಾದಂತಾಗಿದೆ. ಇಂದು ನಾಗ್ಪುರದಲ್ಲಿ 40 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದೆ. ಈ ಮೂಲಕ ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಕರ್ನಾಟಕದಲ್ಲಿ ಇದುವರೆಗೆ ಒಟ್ಟು ಮೂರು ಒಮಿಕ್ರಾನ್ ಪ್ರಕರಣಗಳು ಕಂಡುಬಂದಿದೆ. ಇಂದು ದಕ್ಷಿಣ ಆಫ್ರಿಕಾದಿಂದ ಹಿಂದಿರುಗಿದ 34 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ತಿಳಿಸಿದ್ದರು. ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಚಂಡೀಗಡದಲ್ಲಿ 20 ವರ್ಷದ ಇಟಲಿ ನಿವಾಸಿಯೋರ್ವರಿಗೆ ಒಮಿಕ್ರಾನ್ ಪಾಸಿಟಿವ್ ಬಂದಿದೆ. ಇದು ಚಂಡೀಗಡದ ಮೊದಲ ಪ್ರಕರಣವಾಗಿದೆ. ಆಂಧ್ರಪ್ರದೇಶದಲ್ಲಿ 34 ವರ್ಷದ ವ್ಯಕ್ತಿಯೋರ್ವರಿಗೆ ಪಾಸಿಟಿವ್ ಬಂದಿದ್ದು, ಅವರು ಐರ್ಲೆಂಡ್ನಿಂದ ಹಿಂದಿರುಗಿದ್ದರು.
ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳ ಲಕ್ಷಣಗಳು ಹೇಗಿವೆ?
ಭಾರತದಲ್ಲಿ ಒಮಿಕ್ರಾನ್ ಪ್ರಕರಣಗಳು ಎಲ್ಲಾ ವಯೋಮಾನದವರಲ್ಲೂ ಕಂಡುಬರುತ್ತಿವೆ. ಒಂದೂವರೆ ವರ್ಷ ಹಾಗೂ ಮೂರು ವರ್ಷದ ಮಕ್ಕಳಲ್ಲೂ ಸೋಂಕು ಕಂಡುಬಂದಿದೆ. ಒಮಿಕ್ರಾನ್ ಪ್ರಕರಣಗಳಲ್ಲಿ ರೋಗಿಗಳಿಗೆ ಬಹುತೇಕ ಬಾರಿ ಯಾವುದೇ ಲಕ್ಷಣಗಳಿರುವುದಿಲ್ಲ. ಇದ್ದರೂ ಸೌಮ್ಯ ಪ್ರಮಾಣದಲ್ಲಿರುತ್ತದೆ. ಹೆಚ್ಚಿನ ರೋಗಿಗಳು ವಾರದೊಳಗೆ ಚೇತರಿಸಿಕೊಳ್ಳಲು ಆರಂಭಿಸುತ್ತಾರೆ. ಒಮಿಕ್ರಾನ್ನ ಸಾಮಾನ್ಯ ಲಕ್ಷಣ ಲಘು ಜ್ವರ ಮತ್ತು ತೀವ್ರ ಸುಸ್ತು. ಭಾರತದಲ್ಲಿ ಕೆಲವು ಪ್ರಕರಣಗಳನ್ನು ಹೊರತುಪಡಿಸಿ, ಹೆಚ್ಚಿನ ಒಮಿಕ್ರಾನ್ ರೋಗಿಗಳು ವಿದೇಶಿ ಪ್ರಯಾಣದ ಇತಿಹಾಸವನ್ನು ಹೊಂದಿದ್ದಾರೆ.
ಇದನ್ನೂ ಓದಿ:
Omicron ಒಮಿಕ್ರಾನ್ ಏಪ್ರಿಲ್ ಅಂತ್ಯದ ವೇಳೆಗೆ ಯುಕೆಯಲ್ಲಿ 75,000 ಸಾವುಗಳಿಗೆ ಕಾರಣವಾಗಬಹುದು: ಅಧ್ಯಯನ ವರದಿ
ಸಿಡಿಎಸ್ ಬಿಪಿನ್ ರಾವತ್ ಅವರೊಂದಿಗೆ ಹುತಾತ್ಮರಾಗಿದ್ದ ಲ್ಯಾನ್ಸ್ ನಾಯಕ್ ಸಾಯಿ ತೇಜಾ ಪಾರ್ಥಿವ ಶರೀರದ ಅಂತ್ಯಕ್ರಿಯೆ
Published On - 4:26 pm, Sun, 12 December 21