AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ದೆಹಲಿಯಿಂದ ಲೇಹ್​ಗೆ ಹೊರಟಿದ್ದ ಸ್ಪೈಸ್​ ಜೆಟ್ಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಭೂಸ್ಪರ್ಶ ಮಾಡಲಾಯಿತು. ಟೇಕ್​ ಆಫ್​ ಆಗಿ ಅರ್ಧ ಗಂಟೆಗಳಲ್ಲೇ ಮತ್ತೆ ವಿಮಾನಗಳು ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು.

ಲೇಹ್​ಗೆ ಹೊರಟಿದ್ದ ಸ್ಪೈಸ್​ಜೆಟ್ ವಿಮಾನಕ್ಕೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ವಿಮಾನ
ನಯನಾ ರಾಜೀವ್
|

Updated on: May 26, 2024 | 2:32 PM

Share

ಲೇಹ್​ಗೆ ಹೊರಟಿದ್ದ ಸ್ಪೈಸ್​ ಜೆಟ್​(SpiceJet) ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ವಿಮಾನವು ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಲೇಹ್​ಗೆ ಹೊರಟಿದ್ದ ವಿಮಾನ ಟೇಕ್​ ಆಫ್​ ಆಗಿ ಕೆಲವೇ ಸಮಯದಲ್ಲಿ ಈ ಘಟನೆ ಸಂಭವಿಸಿದೆ. G123 ವಿಮಾನವು 10.29 ಕ್ಕೆ ಟೇಕ್ ಆಫ್ ಆಗಿತ್ತು, ಬಳಿಕ 11 ಗಂಟೆ ಸುಮಾರಿಗೆ ಸುರಕ್ಷಿತವಾಗಿ ದೆಹಲಿಯಲ್ಲಿ ಲ್ಯಾಂಡಿಂಗ್​ ಮಾಡಲಾಗಿದೆ.

ಸ್ಪೈಸ್‌ಜೆಟ್ B737 ವಿಮಾನವು ದೆಹಲಿಯಿಂದ ಲೇಹ್‌ಗೆ  ಪ್ರಯಾಣ ಬೆಳೆಸುತ್ತದೆ. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿಯಿತು, ಪ್ರಯಾಣಿಕರು ಕೂಡ ನಿಟ್ಟುಸಿರುಬಿಟ್ಟರು.

ಕಳೆದ ವಾರ, ಏರ್ ಇಂಡಿಯಾ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ಎಂಬ ಎರಡು ವಿಮಾನಗಳು ತಾಂತ್ರಿಕ ದೋಷಗಳಿಂದಾಗಿ ತುರ್ತು ಭೂಸ್ಪರ್ಶ ಮಾಡಬೇಕಾಯಿತು.

ಮತ್ತಷ್ಟು ಓದಿ: ಆಗಸದಲ್ಲಿ ತೀವ್ರವಾಗಿ ಅಲುಗಾಡಿದ ವಿಮಾನ : ಓರ್ವ ಪ್ರಯಾಣಿಕ ಸಾವು, 30 ಮಂದಿಗೆ ಗಾಯ

ಮೇ 19 ರಂದು, 179 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯೊಂದಿಗೆ ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಬಲ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು.

ಎರಡು ದಿನಗಳ ಹಿಂದೆ, ಮೇ 17 ರಂದು, 175 ಪ್ರಯಾಣಿಕರೊಂದಿಗೆ ದೆಹಲಿಯಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅದರ ಹವಾನಿಯಂತ್ರಣ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡ ನಂತರ ಹಿಂತಿರುಗಿ ರಾಷ್ಟ್ರ ರಾಜಧಾನಿಯಲ್ಲಿ ಇಳಿಯಿತು. ಮೇ 1 ರಂದು, ಭುವನೇಶ್ವರದಿಂದ ನವದೆಹಲಿಗೆ ಹೊರಟಿದ್ದ ವಿಸ್ತಾರ ವಿಮಾನವು ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಹಿಂತಿರುಗಿತು ಮತ್ತು ವಿಮಾನವು ಆಲಿಕಲ್ಲು ಮಳೆಗೆ ಸಿಲುಕಿ ಹಾನಿಗೊಳಗಾದ ನಂತರ ತುರ್ತು ಭೂಸ್ಪರ್ಶ ಮಾಡಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More