AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಸತ್ ಮುಂಗಾರು ಅಧಿವೇಶನ: ಕೊರೊನಾದಿಂದ ಪ್ರತಿದಿನ 4 ಗಂಟೆ ಕಾಲ ಕಲಾಪ ಅಷ್ಟೇ

ದೆಹಲಿ: ಡೆಡ್ಲಿ ಕೊರೊನಾ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. ಹೀಗಾಗಿ ಸಂಸತ್ ಭವನದಲ್ಲಿ ಅಧಿವೇಶನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಕೋವಿಡ್-19 ಪ್ರೊಟೋಕಾಲ್ ಅನುಸಾರವಾಗಿ ಸಂಸತ್ ಸದಸ್ಯರಿಗೆ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ. ದೇಶದ ಮೂಲೆ ಮೂಲೆಯಲ್ಲೂ ಕೊರೊನಾ ಜಪ ನಡೆಯುತ್ತಿದೆ. ಮಹಾಮಾರಿಯ ಅಟ್ಟಹಾಸ ಸದ್ಯ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್‌ನಲ್ಲಿ ಘೋಷಿಸಲಾಗಿದ್ದ ಲಾಕ್‌ಡೌನ್ ನಂತ್ರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲು ಸಿದ್ಧವಾಗಿದೆ. ಈ ಬಾರಿಯ […]

ಸಂಸತ್ ಮುಂಗಾರು ಅಧಿವೇಶನ: ಕೊರೊನಾದಿಂದ ಪ್ರತಿದಿನ 4 ಗಂಟೆ ಕಾಲ ಕಲಾಪ ಅಷ್ಟೇ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 17, 2020 | 9:19 AM

Share

ದೆಹಲಿ: ಡೆಡ್ಲಿ ಕೊರೊನಾ ದೇಶದಲ್ಲಿ ಅಟ್ಟಹಾಸ ಮೆರೆಯುತ್ತಿರುವ ನಡುವೆಯೇ ಸಂಸತ್ ಮುಂಗಾರು ಅಧಿವೇಶನಕ್ಕೂ ಸಿದ್ಧತೆ ನಡೆದಿದೆ. ಹೀಗಾಗಿ ಸಂಸತ್ ಭವನದಲ್ಲಿ ಅಧಿವೇಶನಕ್ಕಾಗಿ ಸಿದ್ಧತೆ ನಡೆಸಲಾಗಿದ್ದು, ಕೋವಿಡ್-19 ಪ್ರೊಟೋಕಾಲ್ ಅನುಸಾರವಾಗಿ ಸಂಸತ್ ಸದಸ್ಯರಿಗೆ ಸಕಲ ವ್ಯವಸ್ಥೆಗಳನ್ನೂ ಮಾಡಲಾಗಿದೆ.

ದೇಶದ ಮೂಲೆ ಮೂಲೆಯಲ್ಲೂ ಕೊರೊನಾ ಜಪ ನಡೆಯುತ್ತಿದೆ. ಮಹಾಮಾರಿಯ ಅಟ್ಟಹಾಸ ಸದ್ಯ ಎಲ್ಲರನ್ನ ಬೆಚ್ಚಿಬೀಳಿಸಿದೆ. ಹೀಗೆ ಕೊರೊನಾ ಸೋಂಕಿನ ಹಿನ್ನೆಲೆ ಮಾರ್ಚ್‌ನಲ್ಲಿ ಘೋಷಿಸಲಾಗಿದ್ದ ಲಾಕ್‌ಡೌನ್ ನಂತ್ರ ಸಂಸತ್ತಿನ ಮೊದಲ ಮುಂಗಾರು ಅಧಿವೇಶನ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಲು ಸಿದ್ಧವಾಗಿದೆ.

ಈ ಬಾರಿಯ ಸಂಸತ್ ಅಧಿವೇಶನ ಸಖತ್ ಡಿಫರೆಂಟ್! ಅಂದಹಾಗೆ ಈ ಬಾರಿಯ ಲೋಕಸಭಾ ಅಧಿವೇಶನ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಏಕೆಂದರೆ ಇದು ಲಾಕ್​ಡೌನ್ ನಂತರ ನಡೆಯುತ್ತಿರುವ ಮೊದಲ ಅಧಿವೇಶನ. ಹಾಗೇ ಹಲವು ಮೊದಲುಗಳಿಗೆ ಈ ಬಾರಿಯ ಸೆಷನ್ ಸಾಕ್ಷಿಯಾಗಲಿದೆ. ಹಾಗಾದ್ರೆ ಅಧಿವೇಶನಕ್ಕಾಗಿ ಕೈಗೊಂಡಿರುವ ಸಿದ್ಧತೆಗಳನ್ನ ಡೀಟೇಲ್ ಆಗಿ ನೋಡೋದಾದ್ರೆ.

ಕಲಾಪಕ್ಕೆ ಕೌಂಟ್​ಡೌನ್? ಸದಸ್ಯರು ಚರ್ಚೆಯಲ್ಲಿ ಪಾಲ್ಗೊಳ್ಳಲು ಕೊಠಡಿಗೆ 4 ದೊಡ್ಡ ಪ್ರದರ್ಶನ ಪರದೆ ಅಳವಡಿಸಲಾಗುವುದು. ಹಾಗೇ ವೈರಸ್ ಕೊಲ್ಲಲು ಎಸಿ ಘಟಕದಲ್ಲಿ ಅಲ್ಟ್ರಾವಯಲೆಟ್ ರೇಡಿಯೇಶನ್ ವ್ಯವಸ್ಥೆ ಅಳವಡಿಸುವ ಪ್ರಸ್ತಾಪವಿದೆ. ಕೇಂದ್ರಸರ್ಕಾರ ಅಧಿವೇಶನಕ್ಕೆ ಡೇಟ್ ಫಿಕ್ಸ್ ಮಾಡುತ್ತಿದ್ದಂತೆಯೇ ಸಂಸತ್ ಕಟ್ಟಡವೂ ಸಿದ್ಧವೆಂದು ಹೇಳಲಾಗುತ್ತಿದೆ.

ಪ್ರತಿಯೊಂದು ಪಕ್ಷದ ಬಲಾಬಲದ ಆಧಾರದಲ್ಲಿ ಅಧಿವೇಶನದಲ್ಲಿ ಆಸನಗಳ ವ್ಯವಸ್ಥೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. 1 ಭಾಗ ಆಡಳಿತ ಪಕ್ಷಕ್ಕೆ ಇದ್ದರೆ, ಮನ್ನೊಂದು ಭಾಗ ಇತರರಿಗೆ ಎಂದು ಮೀಸಲಿಡಲು ತೀರ್ಮಾನಿಸಲಾಗಿದೆ. ಪ್ರತಿದಿನ ಸದನದಲ್ಲಿ ನಾಲ್ಕು ಗಂಟೆಗಳ ಕಾಲ ಕಲಾಪ ನಡೆಯಲಿದೆ ಅಂತಾ ಹೇಳಲಾಗಿದ್ದು, ಕುತೂಹಲ ಕೆರಳಿಸಿದೆ.

ಒಟ್ನಲ್ಲಿ ಕೊರೊನಾ ಸಂಕಷ್ಟ ಕಾಲದಲ್ಲಿ ನಡೆಯುತ್ತಿರುವ ಸಂಸತ್ ಅಧಿವೇಶನ ಭಾರಿ ಕುತೂಹಲ ಕೆರಳಿಸಿದ್ದು, ಅಧಿವೇಶನಕ್ಕೆ ಸಕಲ ಸಿದ್ಧತೆಗಳು ರೂಪುಗೊಂಡಿವೆ. ಆದರೆ ಕೇಂದ್ರ ಸರ್ಕಾರ ಅಧಿವೇಶನಕ್ಕೆ ಡೇಟ್ ಯಾವಾಗ ಫಿಕ್ಸ್ ಮಾಡುತ್ತೆ ಅನ್ನೋದನ್ನ ಕಾದು ನೋಡಬೇಕಿದೆ.

Published On - 7:00 am, Mon, 17 August 20

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ