ಉಗ್ರರ ಹುಟ್ಟಡಗಿಸಲು ಸಶಸ್ತ್ರ ಪಡೆಗಳಿಗೆ ಪೂರ್ತಿ ಸ್ವಾತಂತ್ರ್ಯ ನೀಡಿದ ಪ್ರಧಾನಿ ಮೋದಿ
ದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರ ನಿವಾಸದಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆದಿದೆ. ಈ ಸಭೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಎನ್ಎಸ್ಎ ಅಜಿತ್ ದೋವಲ್, ಸಿಡಿಎಸ್, ಮೂರು ಸೇನಾ ಮುಖ್ಯಸ್ಥರು ಈ ಸಭೆಯಲ್ಲಿ ಭಾಗವಹಿಸಿದ್ದರು. ಒಂದೂವರೆ ಗಂಟೆ ನಡೆದ ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆ ಸ್ವಾತಂತ್ರ್ಯ ನೀಡುವುದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಯಾವ ಸಮಯಕ್ಕೆ, ಯಾವ ಜಾಗದಲ್ಲಿ, ಯಾವ ರೀತಿಯಲ್ಲಿ ದಾಳಿ ಮಾಡಬೇಕು ಅಥವಾ ಕ್ರಮ ತೆಗೆದುಕೊಳ್ಳಬಕೆಂಬುದನ್ನು ನಿರ್ಧರಿಸುವ ಸ್ವಾತಂತ್ರ್ಯವನ್ನು ಮೋದಿ ಸಶಸ್ತ್ರ ಪಡೆಗಳಿಗೆ ನೀಡುವ ಮೂಲಕ ಸೇನಾ ಪಡೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ

ನವದೆಹಲಿ, ಏಪ್ರಿಲ್ 29: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯ ವಿಧಾನ, ಗುರಿಗಳು ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಸಶಸ್ತ್ರ ಪಡೆಗಳಿಗೆ ‘ಸಂಪೂರ್ಣ ಸ್ವಾತಂತ್ರ್ಯ’ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು ದೆಹಲಿಯ ಪ್ರಧಾನಿ ಮೋದಿ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆದಿದ್ದು, ಪ್ರಧಾನಿಯವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರು ತಮ್ಮ ನಿರ್ಧಾರ ಘೋಷಿಸಿದ್ದಾರೆ.
ಭಯೋತ್ಪಾದನೆಗೆ ಹೊಡೆತ ನೀಡುವುದು ನಮ್ಮ ರಾಷ್ಟ್ರೀಯ ಸಂಕಲ್ಪ ಎಂದು ಪ್ರಧಾನಿ ಮೋದಿ ಮತ್ತೆ ದೃಢಪಡಿಸಿದ್ದಾರೆ. ‘ಭಾರತೀಯ ಸೇನೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಮತ್ತು ವಿಶ್ವಾಸವಿದೆ’ ಎಂದು ಮೋದಿ ಹೇಳಿದ್ದಾರೆ. ಈ ಸಭೆ ಮುಗಿದ ಸ್ವಲ್ಪ ಸಮಯದ ನಂತರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಪ್ರಧಾನಿ ಮೋದಿಯವರ ನಿವಾಸಕ್ಕೆ ತೆರಳಿ ಚರ್ಚಿಸಿದ್ದಾರೆ.
#WATCH | PM Narendra Modi chairs a meeting with Defence Minister Rajnath Singh, NSA Ajit Doval, CDS and chiefs of all the Armed Forces. pic.twitter.com/Wf00S8YVQO
— ANI (@ANI) April 29, 2025
ಇದನ್ನೂ ಓದಿ: ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್, ದೋವಲ್ ಭಾಗಿ
ಏಪ್ರಿಲ್ 22ರಂದು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರ ದಾಳಿ ನಡೆದಿತ್ತು. ಈ ದಾಳಿಯಲ್ಲಿ 26 ಜನ ಮೃತಪಟ್ಟಿದ್ದರು. ಫೆಬ್ರವರಿ 2019ರ ಪುಲ್ವಾಮಾ ದಾಳಿಯ ನಂತರ ದೇಶದಲ್ಲಿ ನಡೆದ ಅತ್ಯಂತ ಕೆಟ್ಟ ಘಟನೆ ಇದಾಗಿದೆ. ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಆಗ ನಡೆದ ದಾಳಿಯಲ್ಲಿ 40 ಸೈನಿಕರು ಸಾವನ್ನಪ್ಪಿದ್ದರು. ನಂತರ ಭಾರತ ಪಾಕಿಸ್ತಾನದ ಬಾಲಕೋಟ್‌ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಿತ್ತು. ಈ ಶಿಬಿರಗಳನ್ನು ನಿಷೇಧಿತ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ ಪಾಕ್ ಸೇನೆಯ ಸಹಾಯದಿಂದ ನಡೆಸುತ್ತಿತ್ತು. ಇದೀಗ ಕಳೆದ ವಾರ ನಡೆದ ಪಹಲ್ಗಾಮ್ ದಾಳಿಯ ಹಿಂದೆಯೂ ಪಾಕಿಸ್ತಾನದ ಕೈವಾಡವಿದೆ ಎಂದು ಲಭ್ಯವಿರುವ ಪುರಾವೆಗಳು ಸೂಚಿಸುತ್ತವೆ. ಹೀಗಾಗಿ, ಭಾರತ ಮತ್ತೊಮ್ಮೆ ಪಾಕ್ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:55 pm, Tue, 29 April 25