ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ, ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಾಕಷ್ಟು ಕೋಲಾಹಲದ ನಡುವೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಮಸೂದೆ ಕುರಿತು ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ ನಡೆದಿದೆ. ಬಳಿಕ ಮತಕ್ಕೆ ಹಾಕಿದಾಗ ಮಸೂದೆ ಪರವಾಗಿ 311 ಹಾಗೂ ವಿರುದ್ಧ 82 ಮತಗಳು ಬಂದವು. ಲೋಕಸಭೆಯಲ್ಲಿ ಪಾಸಾಯ್ತು ಪೌರತ್ವ ತಿದ್ದುಪಡಿ ಮಸೂದೆ: ಆರಂಭದಿಂದಲೂ ವಿವಾದಕ್ಕೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕವನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ್ರು. ವಿಧೇಯಕ ಮಂಡನೆಗೆ ಕಾಂಗ್ರೆಸ್‌, ಟಿಎಂಸಿ ಹಾಗೂ ಇತರ ವಿಪಕ್ಷಗಳು […]

ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ, ಕೊನೆಗೂ ಪೌರತ್ವ ತಿದ್ದುಪಡಿ ಮಸೂದೆ ಅಂಗೀಕಾರ
Follow us
ಸಾಧು ಶ್ರೀನಾಥ್​
|

Updated on:Dec 10, 2019 | 11:32 AM

ದೆಹಲಿ: ವಿವಾದದ ಕಿಡಿ ಹೊತ್ತಿಸಿದ್ದ ಪೌರತ್ವ ತಿದ್ದುಪಡಿ ಮಸೂದೆ ಸಾಕಷ್ಟು ಕೋಲಾಹಲದ ನಡುವೆ ಲೋಕಸಭೆಯಲ್ಲಿ ಅಂಗೀಕಾರಗೊಂಡಿದೆ. ಮಸೂದೆ ಕುರಿತು ಮಧ್ಯರಾತ್ರಿವರೆಗೆ ಕಾವೇರಿದ ಚರ್ಚೆ ನಡೆದಿದೆ. ಬಳಿಕ ಮತಕ್ಕೆ ಹಾಕಿದಾಗ ಮಸೂದೆ ಪರವಾಗಿ 311 ಹಾಗೂ ವಿರುದ್ಧ 82 ಮತಗಳು ಬಂದವು.

ಲೋಕಸಭೆಯಲ್ಲಿ ಪಾಸಾಯ್ತು ಪೌರತ್ವ ತಿದ್ದುಪಡಿ ಮಸೂದೆ: ಆರಂಭದಿಂದಲೂ ವಿವಾದಕ್ಕೆ ಕಾರಣವಾಗಿದ್ದ ಪೌರತ್ವ ತಿದ್ದುಪಡಿ ವಿಧೇಯಕವನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ನಿನ್ನೆ ಲೋಕಸಭೆಯಲ್ಲಿ ಮಂಡಿಸಿದ್ರು. ವಿಧೇಯಕ ಮಂಡನೆಗೆ ಕಾಂಗ್ರೆಸ್‌, ಟಿಎಂಸಿ ಹಾಗೂ ಇತರ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದವು. ಹೀಗಾಗಿ, ಮತ ವಿಭಜನೆ ಬಳಿಕ ಮಸೂದೆಯನ್ನ ಮಂಡಿಸಲಾಯ್ತು. ಈ ವೇಳೆ ಮಾತನಾಡಿದ ಅಮಿತ್ ಶಾ, ದೇಶದ ಸುರಕ್ಷತೆಯನ್ನ ಗಮನದಲ್ಲಿಟ್ಟುಕೊಂಡು ವಿಧೇಯಕವನ್ನ ನೋಡಬೇಕು. ನುಸುಳುಕೋರರು ಮತ್ತು ನಿರಾಶ್ರಿತರ ನಡುವಣ ವ್ಯತ್ಯಾಸ ಗುರುತಿಸಲು ಇದು ಅಗತ್ಯ ಅಂದ್ರು.

ಇನ್ನು ಪೌರತ್ವ ತಿದ್ದುಪಡಿ ಮಸೂದೆಯು ದೇಶದ ಮುಸ್ಲಿಂ ಸಮುದಾಯದ ಹಿತಾಸಕ್ತಿಗೆ ವಿರುದ್ಧವಾಗಿದೆ ಅಂತ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ರು. ಜೊತೆಗೆ ಇದು ಹಿಟ್ಲರ್ ಜಾರಿಗೆ ತಂದಿದ್ದ ಜನಾಂಗೀಯ ತಾರತಮ್ಯ ನೀತಿಗಿಂತಲೂ ಕ್ರೂರವಾದದ್ದು ಅಂತ ಮಸೂದೆಯ ಪ್ರತಿಯನ್ನೇ ಹರಿದು ಹಾಕಿದ್ರು.

ಏನಿದು ಪೌರತ್ವ ತಿದ್ದುಪಡಿ ಮಸೂದೆ..? ನೆರೆಯ ದೇಶಗಳಾದ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘನಿಸ್ತಾನದಿಂದ ಬಂದು ಭಾರತದಲ್ಲಿ ನೆಲೆಸಿದ ಹಿಂದೂ, ಸಿಖ್‌, ಬೌದ್ಧ, ಜೈನ್‌, ಪಾರ್ಸಿ ಹಾಗೂ ಕ್ರಿಶ್ಚಿಯನ್‌ ಧರ್ಮದ ನಿರಾಶ್ರಿತರಿಗೆ ಕಾಯಂ ಪೌರತ್ವ ನೀಡುವುದು ಪೌರತ್ವ ತಿದ್ದುಪಡಿ ವಿಧೇಯಕದ ಉದ್ದೇಶವಾಗಿದೆ. 2014, ಡಿಸೆಂಬರ್‌ 31ರ ಒಳಗೆ ಬಂದು ನೆಲೆಸಿದವರಿಗೆ ಮಾತ್ರ ಈ ವಿಧೇಯಕದ ಸವಲತ್ತು ಅನ್ವಯವಾಗಲಿದೆ.

5 ವರ್ಷ ಕಾಲ ನಿರಂತರ ಭಾರತದಲ್ಲಿ ವಾಸವಿರುವ ನಿರಾಶ್ರಿತರು ಕಾಯಂ ಪೌರತ್ವ ಪಡೆಯಲು ಅರ್ಹರಾಗಿರುತ್ತಾರೆ. ಈ ಹಿಂದೆ ಇದರ ಮಿತಿಯು ಹನ್ನೊಂದು ವರ್ಷಗಳಿಗೆ ನಿಗದಿಯಾಗಿತ್ತು. ಆದ್ರೆ ಅಸ್ಸಾಂ, ಮೇಘಾಲಯ, ತ್ರಿಪುರಾ ಅಥವಾ ಮಿಜೋರಾಂ ರಾಜ್ಯಗಳ ಬುಡಕಟ್ಟು ಪ್ರದೇಶಗಳ ವಲಸಿಗರಿಗೆ ಈ ವಿಧೇಯಕ ಅನ್ವಯವಾಗುವುದಿಲ್ಲ. ಸಂವಿಧಾನದ 6ನೇ ಶೆಡ್ಯೂಲ್‌ ಹಾಗೂ ಬಂಗಾಳ ಪೂರ್ವ ಗಡಿನಾಡು ನಿಯಂತ್ರಣ ಕಾಯ್ದೆ 1873ರ ವ್ಯಾಪ್ತಿಗೆ ಒಳಪಟ್ಟ ಅರುಣಾಚಲ ಪ್ರದೇಶ, ನಾಗಾಲ್ಯಾಂಡ್‌ ಮತ್ತು ಮಿಜೋರಾಂ ರಾಜ್ಯಗಳನ್ನ ಇದರ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಇನ್ನು ಮಸೂದೆಯು ಮುಸ್ಲಿಂ ವಿರೋಧಿ ಎಂಬ ಆರೋಪವನ್ನ ಅಮಿತ್​ ಶಾ ತಳ್ಳಿ ಹಾಕಿದ್ರು. ಜೊತೆಗೆ ಮೋದಿ ನೇತೃತ್ವದ ಸರ್ಕಾರ ಎಲ್ಲಾ ಧರ್ಮೀಯರ ಹಿತವನ್ನ ಕಾಪಾಡಲು ಬದ್ಧ ಅಂದ್ರು. ಹೀಗೆ ಸುದೀರ್ಘ ಚರ್ಚೆ, ಕೋಲಾಹಲ ನಡೆದು ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಮಸೂದೆಯನ್ನ ಮತಕ್ಕೆ ಹಾಕಲಾಯ್ತು. ಈ ವೇಳೆ ಮಸೂದೆಯ ಪರವಾಗಿ 311 ಬಂದು ಅಂಗೀಕಾರವಾಯ್ತು.

ಲೋಕಸಭೆಯಲ್ಲಿ ಅಂಗೀಕಾರವಾದ ಮಸೂದೆಯು ನಾಳೆ ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ಸಂಸತ್ತಿನ ಮೇಲ್ಮನೆಯಲ್ಲೂ ಮಸೂದೆ ಪಾಸಾದ್ರೆ ಕಾಯ್ದೆಯಾಗಿ ಜಾರಿಗೆ ಬರಲಿದೆ. ಒಟ್ನಲ್ಲಿ, ವಿಪಕ್ಷಗಳು ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ರೂ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಪೌರತ್ವ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಪಾಸಾಗಿದೆ.

Published On - 8:19 am, Tue, 10 December 19

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!