AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಮಕ್ಕಳ ಸಾವಿನ ನಂತರ ಕೆಮ್ಮು ಸಿರಪ್‌ಗಳ ಕಟ್ಟುನಿಟ್ಟಿನ ಪರೀಕ್ಷೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ

ಕಲುಷಿತ ಕೋಲ್ಡ್ರಿಫ್ ಕೆಮ್ಮಿನ ಸಿರಪ್‌ಗೆ ಸಂಬಂಧಿಸಿದ 20 ಮಕ್ಕಳ ದುರಂತ ಸಾವಿನ ನಂತರ ಕೇಂದ್ರ ಆರೋಗ್ಯ ಸೇವೆಗಳ ನಿರ್ದೇಶನಾಲಯವು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಟ್ಟುನಿಟ್ಟಿನ ನಿರ್ದೇಶನವನ್ನು ನೀಡಿದೆ. ಔಷಧ ಉತ್ಪನ್ನಗಳ ಪರೀಕ್ಷೆಯನ್ನು ಕಠಿಣಗೊಳಿಸುವಂತೆ ಅದು ಒತ್ತಾಯಿಸಿದೆ. ತಪಾಸಣೆಗಳನ್ನು ತೀವ್ರಗೊಳಿಸುವಂತೆ ಮತ್ತು ಸರಿಯಾದ ಪರೀಕ್ಷೆಯಿಲ್ಲದೆ ಯಾವುದೇ ಬ್ಯಾಚ್ ಔಷಧಿಗಳನ್ನು ಬಿಡುಗಡೆಯಾಗದಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರವು ಸೂಚಿಸಿದೆ.

ಸಾಲು ಸಾಲು ಮಕ್ಕಳ ಸಾವಿನ ನಂತರ ಕೆಮ್ಮು ಸಿರಪ್‌ಗಳ ಕಟ್ಟುನಿಟ್ಟಿನ ಪರೀಕ್ಷೆಗೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಆದೇಶ
Cough Syrups
ಸುಷ್ಮಾ ಚಕ್ರೆ
|

Updated on: Oct 08, 2025 | 8:58 PM

Share

ನವದೆಹಲಿ, ಅಕ್ಟೋಬರ್ 8: ಮಧ್ಯಪ್ರದೇಶದಲ್ಲಿ ಕಲುಷಿತ ಕೆಮ್ಮು ಸಿರಪ್‌ಗಳಿಂದಾಗಿ (Cough Syrup) ಮಕ್ಕಳ ಸಾವುಗಳು ಸಂಭವಿಸಿವೆ ಎಂಬ ವರದಿಗಳ ನಂತರ, ಭಾರತದ ಉನ್ನತ ಔಷಧ ನಿಯಂತ್ರಕವು ಕಠಿಣ ಕ್ರಮಕ್ಕೆ ಮುಂದಾಗಿದೆ. ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆ (CDSCO) ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ ಔಷಧ ನಿಯಂತ್ರಕರಿಗೆ ಕಟ್ಟುನಿಟ್ಟಿನ ಸಲಹೆಗಳನ್ನು ನೀಡಿದೆ. ಪ್ರತಿಯೊಂದು ಬ್ಯಾಚ್ ಕಚ್ಚಾ ವಸ್ತುವನ್ನು ಬಳಕೆ ಅಥವಾ ಮಾರಾಟ ಮಾಡುವ ಮೊದಲು ಸರಿಯಾಗಿ ಪರೀಕ್ಷಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಅವರಿಗೆ ಸೂಚನೆ ನೀಡಿದೆ.

ಭಾರತದ ಔಷಧ ನಿಯಂತ್ರಕ ಜನರಲ್ (DCGI) ಡಾ. ರಾಜೀವ್ ಸಿಂಗ್ ರಘುವಂಶಿ ಅವರು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಔಷಧ ನಿಯಂತ್ರಕರಿಗೆ ಈ ಸಂದೇಶವನ್ನು ಕಳುಹಿಸಿದ್ದಾರೆ. ಕೆಮ್ಮು ಸಿರಪ್‌ಗಳನ್ನು ತಯಾರಿಸುವಲ್ಲಿ ಬಳಸುವ ಸಹಾಯಕ ಪದಾರ್ಥಗಳನ್ನು ಒಳಗೊಂಡಂತೆ ಕಚ್ಚಾ ವಸ್ತುಗಳನ್ನು ಪರೀಕ್ಷಿಸುವ ನಿರ್ಣಾಯಕ ಮಹತ್ವವನ್ನು ಇದು ಒತ್ತಿಹೇಳುತ್ತದೆ.

ಇದನ್ನೂ ಓದಿ: ನಿಮ್ಮ ಮಕ್ಕಳಿಗೆ ಕೆಮ್ಮಿನ ಸಿರಪ್​ ಹಾಕುವ ಮುನ್ನ ಎಚ್ಚರ: ಇಲ್ಲಿದೆ ಆರೋಗ್ಯ ಇಲಾಖೆಯ ಗೈಡ್​ಲೈನ್ಸ್

ಇಂತಹ ಕಡ್ಡಾಯ ತಪಾಸಣೆಗಳನ್ನು ಮೊದಲೇ ಕಟ್ಟುನಿಟ್ಟಾಗಿ ಪಾಲಿಸಿದ್ದರೆ, ಕಲುಷಿತ ಕೆಮ್ಮಿನ ಸಿರಪ್‌ಗಳಿಗೆ ಸಂಬಂಧಿಸಿದ ಸರಣಿ ಮಕ್ಕಳ ಸಾವುಗಳನ್ನು ತಡೆಯಬಹುದಿತ್ತು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಸಿರಪ್‌ಗಳಲ್ಲಿ ಡೈಥಿಲೀನ್ ಗ್ಲೈಕಾಲ್ (DEG) ಮತ್ತು ಎಥಿಲೀನ್ ಗ್ಲೈಕಾಲ್ (EG)ನಂತಹ ವಿಷಕಾರಿ ಕೈಗಾರಿಕಾ ದ್ರಾವಕಗಳಿರುವುದರಿಂದ ಇವುಗಳ ಉತ್ಪಾದನೆಗೆ ಮೊದಲು ಕಚ್ಚಾ ವಸ್ತುಗಳನ್ನು ಪರೀಕ್ಷಿಸಲು ವಿಫಲವಾಗಿರುವುದು ಸ್ಪಷ್ಟವಾಗಿದೆ ಎಂದು ತನಿಖೆಗಳು ಬಹಿರಂಗಪಡಿಸಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿಯೂ 2 ಕೆಮ್ಮಿನ ಸಿರಪ್​​ ಅಸುರಕ್ಷಿತ: ಆರೋಗ್ಯ ಇಲಾಖೆ ಕೈಸೇರಿದೆ ಬೆಚ್ಚಿಬೀಳಿಸುವ ವರದಿ

ದೇಶದ ಉನ್ನತ ಔಷಧ ನಿಯಂತ್ರಕವಾದ DCGI ಇತ್ತೀಚಿನ ತಪಾಸಣೆಗಳಲ್ಲಿ ಹಲವಾರು ತಯಾರಕರು ಬಳಕೆಗೆ ಮೊದಲು ನಿಗದಿತ ಮಾನದಂಡಗಳ ಅನುಸರಣೆಗಾಗಿ ಪ್ರತಿ ಬ್ಯಾಚ್ ಸಹಾಯಕ ಪದಾರ್ಥಗಳು ಮತ್ತು ಸಕ್ರಿಯ ಪದಾರ್ಥಗಳನ್ನು ಪರೀಕ್ಷಿಸುತ್ತಿಲ್ಲ ಎಂದು ಸಲಹೆಯಲ್ಲಿ ಬರೆದಿದ್ದಾರೆ. ಅಂತಹ ಲೋಪಗಳು, ಅನುಮೋದಿತ ಪ್ರಯೋಗಾಲಯಗಳಲ್ಲಿ ಪ್ರತಿ ಬ್ಯಾಚ್‌ನ ಪರೀಕ್ಷೆ ಮತ್ತು ಸಂಪೂರ್ಣ ದಾಖಲೆಗಳ ನಿರ್ವಹಣೆಯನ್ನು ಕಡ್ಡಾಯಗೊಳಿಸುವ ಔಷಧ ನಿಯಮಗಳು, 1945 ಅನ್ನು ಉಲ್ಲಂಘಿಸುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ಹೀಗಾಗಿ, ರಾಜ್ಯ ನಿಯಂತ್ರಕರು ತಪಾಸಣೆಗಳನ್ನು ತೀವ್ರಗೊಳಿಸಬೇಕು ಮತ್ತು ಸರಿಯಾದ ಪರೀಕ್ಷೆಯಿಲ್ಲದೆ ಯಾವುದೇ ಬ್ಯಾಚ್ ಔಷಧ ಬಿಡುಗಡೆಯಾಗದಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!