West Bengal: ಮಣಿಪುರ ಆಯ್ತು ಈಗ ಪಶ್ಚಿಮ ಬಂಗಾಳ ಸರದಿ; ಮಾಲ್ಡಾದಲ್ಲಿ ಇಬ್ಬರು ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ

ಕಳ್ಳತನದ ಆರೋಪದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಆದರೆ, ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.

West Bengal: ಮಣಿಪುರ ಆಯ್ತು ಈಗ ಪಶ್ಚಿಮ ಬಂಗಾಳ ಸರದಿ; ಮಾಲ್ಡಾದಲ್ಲಿ ಇಬ್ಬರು ಮಹಿಳೆಯರ ಅರೆಬೆತ್ತಲೆಗೊಳಿಸಿ ಮೆರವಣಿಗೆ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಸಂದರ್ಭ ನಡೆದಿದ್ದ ಹಿಂಸಾಚಾರದ ಸಂಗ್ರಹ ಚಿತ್ರImage Credit source: PTI
Follow us
Ganapathi Sharma
|

Updated on:Jul 22, 2023 | 3:16 PM

ಕೋಲ್ಕತ್ತ, ಜುಲೈ 22: ಮಣಿಪುರದಲ್ಲಿ ಮಹಿಳೆಯೊಬ್ಬರನ್ನು ನಗ್ನಗೊಳಿಸಿ ಮೆರವಣಿಗೆ ಮಾಡಿದ ಘಟನೆಯ ಕಹಿ ನೆನಪು ಮಾಸುವ ಮುನ್ನವೇ ಪಶ್ಚಿಮ ಬಂಗಾಳ(West Bengal) ಮಾಲ್ಡಾದಲ್ಲಿ ಅಂಥದ್ದೇ ಕೃತ್ಯ ಎಸಗಲಾಗಿದೆ. ಇಬ್ಬರು ಮಹಿಳೆಯರನ್ನು ಥಳಿಸಿ ಅರೆಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದನ್ನು ಪ್ರದರ್ಶಿಸುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಹಂಚಿಕೆಯಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಈ ಘಟನೆ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದೆ. ಮಾಲ್ಡಾದ ಪಕುವಾಹತ್‌ನಲ್ಲಿ (Malda’s Pakuahat) ಸ್ಥಳೀಯರು ಕಳ್ಳತನದ ಶಂಕೆಯ ಮೇಲೆ ಇಬ್ಬರು ಮಹಿಳೆಯರನ್ನು ಹಿಡಿದು ಥಳಿಸಿದ್ದಾರೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ.

ಕಳ್ಳತನದ ಆರೋಪದಲ್ಲಿ ಇಬ್ಬರು ಮಹಿಳೆಯರ ಮೇಲೆ ಹಲವಾರು ಮಹಿಳೆಯರು ಹಲ್ಲೆ ನಡೆಸುತ್ತಿರುವ ದೃಶ್ಯ ವಿಡಿಯೊದಲ್ಲಿದೆ. ಆದರೆ, ಘಟನೆ ಕುರಿತು ಯಾವುದೇ ದೂರು ದಾಖಲಾಗಿಲ್ಲ ಎಂದು ಪಶ್ಚಿಮ ಬಂಗಾಳ ಪೊಲೀಸರು ಹೇಳಿದ್ದಾರೆ.

ವಿಡಿಯೋ ಗಮನಕ್ಕೆ ಬಂದ ನಂತರವೇ ಘಟನೆಯ ಬಗ್ಗೆ ತಿಳಿಯಿತು ಎಂದು ಪೊಲೀಸರು ಹೇಳಿದ್ದಾರೆ. ಇಬ್ಬರು ಮಹಿಳೆಯರು ಕಳ್ಳತನ ಮಾಡುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ನಂತರ ಸ್ಥಳೀಯ ಮಹಿಳೆಯರಿಂದ ಥಳಿಸಲ್ಪಟ್ಟಿದ್ದಾರೆ ಎಂಬುದು ಪ್ರಾಥಮಿಕ ತನಿಖೆಗಳಿಂದ ತಿಳಿದುಬಂದಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಅತ್ಯಾಚಾರದಲ್ಲಿ ರಾಜಸ್ಥಾನ ಅಗ್ರಸ್ಥಾನದಲ್ಲಿದೆ; ವಿಧಾನಸಭೆಯಲ್ಲೇ ಹೇಳಿಕೆ ನೀಡಿದ ಸಚಿವ​ ರಾಜೇಂದ್ರ ಸಿಂಗ್ ವಜಾ

ಘಟನೆಯ ನಂತರ ಹಲ್ಲೆ ನಡೆಸಿದ ಮಹಿಳೆಯರೂ ಪರಾರಿಯಾಗಿದ್ದಾರೆ. ಥಳಿತಕ್ಕೊಳಗಾದವರು ಭಯದಿಂದ ದೂರು ದಾಖಲಿಸಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.

ಇದೀಗ ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಭರವನೆ ನೀಡಿದ್ದಾರೆ.

ಈ ಮಧ್ಯೆ, ಮಣಿಪುರದ ಬೆತ್ತಲೆ ಮೆರವಣಿಗೆ ಪ್ರರಕಣಕ್ಕೆ ಸಂಬಂಧಿಸಿ ಒಟ್ಟು 5 ಮಂದಿಯನ್ನು ಈವರೆಗೆ ಬಂಧಿಸಲಾಗಿದೆ. ಮಣಿಪುರದಾದ್ಯಂತ ಬಿಗಿ ಭದ್ರತೆ ಕಲ್ಪಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Sat, 22 July 23

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ