ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​

ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಅಂಧೇರಿಯಲ್ಲಿರುವ ನೈಟ್ ಕ್ಲಬ್ ಮೇಲೆ ದಾಳಿ ನಡೆಸಿದ ಮುಂಬೈ ಪೊಲೀಸರು ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ನಡೆಸುವಂತಿಲ್ಲ ಎಂದು ಆದೇಶ ನೀಡಿದ್ದಾರೆ.

ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು: ನೈಟ್​ ಕ್ಲಬ್ ಮೇಲೆ ದಾಳಿ ಬಳಿಕ ಖಾಕಿ​ ಖಡಕ್​ ವಾರ್ನಿಂಗ್​
ಪ್ರಾತಿನಿಧಿಕ ಚಿತ್ರ
Follow us
ರಶ್ಮಿ ಕಲ್ಲಕಟ್ಟ
| Updated By: KUSHAL V

Updated on: Dec 22, 2020 | 6:18 PM

ಮುಂಬೈ: ಕೊವಿಡ್ ನಿಯಮ ಉಲ್ಲಂಘಿಸಿದ್ದ ನೈಟ್ ಕ್ಲಬ್ ಮೇಲೆ ಮುಂಬೈ ಪೊಲೀಸರು ಮಂಗಳವಾರ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿ 34 ಮಂದಿಯನ್ನು ಬಂಧಿಸಿದ್ದರು.

ಈ ದಾಳಿ ನಂತರ ಟ್ವೀಟ್ ಮಾಡಿರುವ  ಮುಂಬೈ ಪೊಲೀಸರು, ಬೆಳಗ್ಗೆ 6 ಗಂಟೆವರೆಗೆ ಪಾರ್ಟಿ ಮುಂದುವರಿಯಬಾರದು. ಅಂಧೇರಿಯಲ್ಲಿರುವ ನೈಟ್ ಕ್ಲಬ್​​ನಲ್ಲಿ ಕೊವಿಡ್ ನಿಯಮ ಉಲ್ಲಂಘಿಸಿದ್ದಕ್ಕಾಗಿ ಬೆಳಗ್ಗೆ 3 ಗಂಟೆಗೆ ದಾಳಿ ನಡೆಸಿದ್ದೇವೆ. 34 ಮಂದಿ ವಿರುದ್ಧ ಕ್ರಮ ಕೈಗೊಂಡಿದ್ದು ಇದರಲ್ಲಿ 19 ಮಂದಿ ದೆಹಲಿ ಮತ್ತು ಪಂಜಾಬ್​​ನವರಾಗಿದ್ದಾರೆ. ಕೆಲವು ಸೆಲಬ್ರಿಟಿಗಳೂ ಇಲ್ಲಿ ಭಾಗಿಯಾಗಿದ್ದರು ಎಂದು ಪೊಲೀಸರು ಟ್ವೀಟ್​ ಮಾಡಿದ್ದಾರೆ.

ಬಂಧಿತರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಪಿಟಿಐ ಸುದ್ದಿ ಸಂಸ್ಧೆ ವರದಿ ಮಾಡಿದೆ. ಬಂಧಿತರಾದವರಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗಾಯಕ ಗುರು ರಾಂಧವಾ ಮೊದಲಾದ ಸೆಲೆಬ್ರಿಟಿಗಳಿದ್ದು ಇವರಿಗೆ ಜಾಮೀನು ನೀಡಲಾಗಿದೆ.

ಕ್ರಿಸ್​​ಮಸ್ ಮತ್ತು ಹೊಸವರ್ಷದ ಆಚರಣೆಗೆ ಪೂರ್ವಭಾವಿಯಾಗಿ ಮಹಾರಾಷ್ಟ್ರ ಸರ್ಕಾರ ಎಲ್ಲ ನಗರ ಮತ್ತು ಮುನ್ಸಿಪಲ್ ಕಾರ್ಪೊರೇಷನ್ ಪ್ರದೇಶಗಳಲ್ಲಿ ನೈಟ್ ಕರ್ಫ್ಯೂ ಘೋಷಿಸಿದೆ. ಡಿಸೆಂಬರ್ 22ರಿಂದ ಜನವರಿ 5ರವರೆಗೆ ರಾತ್ರಿ 11 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ಕರ್ಫ್ಯೂ ನಿರ್ಬಂಧವಿರಲಿದೆ.

ಹೊಸ ವರ್ಷವನ್ನು ನಾವು ಪ್ರತಿಬಾರಿಯಂತೆ ಆಚರಿಸಲಾಗುವುದಿಲ್ಲ. ಕೊರೊನಾ ಸೋಂಕು ಹರಡದಂತೆ ವಿಧಿಸಿರುವ ನಿಯಮಗಳ ಉಲ್ಲಂಘನೆ ಪುನರಾವರ್ತನೆಯಾಗಬಾರದು ಎಂಬ ಉದ್ದೇಶದಿಂದ ಕರ್ಫ್ಯೂ ಹೇರಲಾಗಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಕಮಿಷನರ್ ಇಕ್ಬಾಲ್ ಸಿಂಗ್ ಚಹಾಲ್ ಹೇಳಿದ್ದಾರೆ.

ಡ್ರ್ಯಾಗನ್​ಫ್ಲೈ ಕ್ಲಬ್ ಮೇಲೆ ಖಾಕಿ ದಾಳಿ: ಕ್ರಿಕೆಟಿಗ​ ಸುರೇಶ್​ ರೈನಾ ಸೇರಿ ಅನೇಕ ಸೆಲೆಬ್ರಿಟಿಗಳು ಅರೆಸ್ಟ್​!

ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ