ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ಪಾಕ್ ಸೇನೆ ದಾಳಿಗೆ ಯತ್ನಿಸಿತ್ತು:ಭಾರತೀಯ ಸೇನೆ

ಆಪರೇಷನ್ ಸಿಂಧೂರ್​ ಮುಗಿದು ದಾಳಿ ಪ್ರತಿದಾಳಿಗಳು ನಡೆದು ಇದೀಗ ಎರಡೂ ದೇಶಗಳು ಕದನ ವಿರಾಮ ಘೋಷಿಸಿದ ಬಳಿಕ ಭಾರತೀಯ ಸೇನೆಯು ಆಪರೇಷನ್ ಸಿಂಧೂರ್​ ಬಳಿಕ ಪಾಕಿಸ್ತಾನ ಭಾರತದ ಮೇಲೆ ಎಲ್ಲೆಲ್ಲಿ ದಾಳಿ ಮಾಡಿತ್ತು ಎನ್ನುವ ಮಾಹಿತಿಯನ್ನು ಬಹಿರಂಗಪಡಿಸಿದೆ. ಪಾಕಿಸ್ತಾನ ಸೇನೆಯು ಪಂಜಾಬ್‌ನ ಅಮೃತಸರದಲ್ಲಿರುವ ಸ್ವರ್ಣ ದೇವಾಲಯವನ್ನು ಗುರಿಯಾಗಿಸಲು ಪ್ರಯತ್ನಿಸಿತ್ತು, ಆದರೆ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಯು ಆಕಾಶ್ ಕ್ಷಿಪಣಿಯನ್ನು ಬಳಸುವ ಮೂಲಕ ಪಾಕಿಸ್ತಾನದ ದುಷ್ಕೃತ್ಯವನ್ನು ವಿಫಲಗೊಳಿಸಿತು. 15 ನೇ ಪದಾತಿ ದಳದ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ (ಜೆಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಈ ಕುರಿತು ಮಾಹಿತಿ ನೀಡಿದ್ದಾರೆ.ಪಾಕಿಸ್ತಾನ ಮತ್ತು ಪಿಒಕೆಯಲ್ಲಿನ 9 ಭಯೋತ್ಪಾದಕ ತಾಣಗಳ ಮೇಲೆ ಭಾರತ ನಡೆಸಿದ ದಾಳಿಗೆ ಪ್ರತಿಯಾಗಿ ಮೇ 7-8ರ ರಾತ್ರಿ ಡ್ರೋನ್‌ಗಳು ಮತ್ತು ಕ್ಷಿಪಣಿಗಳ ಮೂಲಕ ಅಮೃತಸರದ ಸ್ವರ್ಣ ಮಂದಿರವನ್ನು ಗುರಿಯಾಗಿಸಲು ಪ್ರಯತ್ನಿಸಲಾಯಿತು ಎಂದಿದ್ದಾರೆ.

ಅಮೃತಸರದ ಗೋಲ್ಡನ್​ ಟೆಂಪಲ್ ಮೇಲೆ ಪಾಕ್ ಸೇನೆ ದಾಳಿಗೆ ಯತ್ನಿಸಿತ್ತು:ಭಾರತೀಯ ಸೇನೆ
ಗೋಲ್ಡನ್ ಟೆಂಪಲ್

Updated on: May 19, 2025 | 12:39 PM

ನವದೆಹಲಿ, ಮೇ 19: ಭಾರತವು ಆಪರೇಷನ್ ಸಿಂಧೂರ್(Operation Sindoor)​ ಅಡಿಯಲ್ಲಿ ಪಾಕಿಸ್ತಾನ(Pakistan)ದ 9 ಸ್ಥಳಗಳಲ್ಲಿ ಭಯೋತ್ಪಾದಕ ಶಿಬಿರಗಳ ಮೇಲೆ ದಾಳಿ ನಡೆಸಿದ ನಂತರ, ಪಂಜಾಬ್​ನ ಅಮೃತಸರದಲ್ಲಿರುವ ಸ್ವರ್ಣ ಮಂದಿರವನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನವು ಕ್ಷಿಪಣಿಗಳು ಮತ್ತು ಡ್ರೋನ್​ ಮೂಲಕ ದಾಳಿ ಮಾಡಿತ್ತು.

ಈ ಕುರಿತು ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಈ ಮಾಹಿತಿ ನೀಡಿದ್ದು, ಸೇನಾ ವಾಯು ರಕ್ಷಣಾ ಗನ್ನರ್‌ಗಳು ಸುವರ್ಣ ಮಂದಿರವನ್ನು ಗುರಿಯಾಗಿಸಿಕೊಂಡು ನಡೆಸಿದ ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ
ಆಪರೇಷನ್ ಸಿಂಧೂರ್ ಕುರಿತು ಭಾರತೀಯ ಸೇನೆಯಿಂದ ಸುದ್ದಿಗೋಷ್ಠಿ
ಹಿಂದೂ ಮಹಿಳೆಯರ ಕುಂಕುಮ ಅಳಿಸಿದವರಿಗೆ ತಕ್ಕ ಶಾಸ್ತಿಯಾಗಿದೆ ಎಂದ ಸೇನೆ
ಪಾಕ್​ನಲ್ಲಿ ಭಾರತದ ದಾಳಿ ಆರಂಭದಿಂದ ಇಲ್ಲಿಯವರೆಗೆ ಏನೇನಾಯ್ತು?
ಪಾಕಿಸ್ತಾನದ ಈ 9 ಸ್ಥಳಗಳ ಮೇಲೆ ಭಾರತದಿಂದ ದಾಳಿ, ಮನೆ ಬಿಟ್ಟು ಓಡಿದ ಜನರು

ಪಾಕಿಸ್ತಾನವು ಸ್ವರ್ಣ ಮಂದಿರದಂತಹ ಧಾರ್ಮಿಕ ಸ್ಥಳಗಳು ಸೇರಿದಂತೆ, ಸೇನಾ ಶಿಬಿರಗಳ ಮೇಲೆ ದಾಳಿ ನಡೆಸಬಹುದು ಎಂದು ಸೇನೆ ಆಗಲೇ ನಿರೀಕ್ಷಿಸಿತ್ತು, ಅದಕ್ಕೆ ಬೇಕಾದ ಕ್ರಮಗಳನ್ನು ಕೂಡ ತೆಗೆದುಕೊಂಡಿತ್ತು.
ಪಾಕಿಸ್ತಾನ ಸೇನೆಯು ಯಾವುದೇ ಸಮರ್ಪಕ ಗುರಿಗಳನ್ನು ಹೊಂದಿಲ್ಲ ಎಂದು ತಿಳಿದಿದ್ದರೂ,ಕೆಲವು ನಿರೀಕ್ಷೆಗಳಿದ್ದವು ಇವುಗಳಲ್ಲಿ, ಗೋಲ್ಡನ್ ಟೆಂಪಲ್ ಅತ್ಯಂತ ಪ್ರಮುಖವಾದದ್ದು ಎಂದು ಕಂಡುಬಂದಿದೆ.

ಮೇ 8 ರಂದು ಪಾಕಿಸ್ತಾನವು ಮಾನವರಹಿತ ವೈಮಾನಿಕ ಶಸ್ತ್ರಾಸ್ತ್ರಗಳು, ಮುಖ್ಯವಾಗಿ ಡ್ರೋನ್‌ಗಳು ಮತ್ತು ದೀರ್ಘ-ಶ್ರೇಣಿಯ ಕ್ಷಿಪಣಿಗಳನ್ನು ಬಳಸಿಕೊಂಡು ಬೃಹತ್ ವಾಯುದಾಳಿ ನಡೆಸಿತು ಎಂದು ಅವರು ಹೇಳಿದರು.

ಮತ್ತಷ್ಟು ಓದಿ: ಉಗ್ರ ಸಂಘಟನೆಗಳು ಏಕೆ ಬೇಕು?; ಪಾಕಿಸ್ತಾನಕ್ಕೆ ತನ್ನದೇ ಮಾಜಿ ರಾಯಭಾರಿಯಿಂದ ಖಡಕ್ ಪ್ರಶ್ನೆ

ನಾವು ಇದನ್ನು ನಿರೀಕ್ಷಿಸಿದ್ದರಿಂದ ನಾವು ಸಂಪೂರ್ಣವಾಗಿ ಸಿದ್ಧರಾಗಿದ್ದೆವು, ಮತ್ತು ನಮ್ಮ ಧೈರ್ಯಶಾಲಿ ಮತ್ತು ಜಾಗರೂಕ ಸೇನಾ ವಾಯು ರಕ್ಷಣಾ ಗನ್ನರ್‌ಗಳು ಪಾಕಿಸ್ತಾನ ಸೇನೆಯ ದುಷ್ಟ ಯೋಜನೆಗಳನ್ನು ವಿಫಲಗೊಳಿಸಿದರು ಮತ್ತು ಸುವರ್ಣ ದೇವಾಲಯವನ್ನು ಗುರಿಯಾಗಿಸಿಕೊಂಡ ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದರು. ಅವರು ಸ್ವರ್ಣ ಮಂದಿರಕ್ಕೆ ಒಂದು ಚೂರು ಹಾನಿಯಾಗಲು ಕೂಡ ಬಿಡಲಿಲ್ಲ.

ಆಕಾಶ್ ಕ್ಷಿಪಣಿ ವ್ಯವಸ್ಥೆ, ಎಲ್ -70 ಏರ್ ಡಿಫೆನ್ಸ್ ಗನ್ಸ್ ಸೇರಿದಂತೆ ಭಾರತೀಯ ವಾಯು ರಕ್ಷಣಾ ವ್ಯವಸ್ಥೆಗಳು ಅಮೃತಸರದ ಸ್ವರ್ಣ ದೇವಾಲಯ ಮತ್ತು ಪಂಜಾಬ್ ನಗರಗಳನ್ನು ಪಾಕಿಸ್ತಾನದ ಕ್ಷಿಪಣಿ ಮತ್ತು ಡ್ರೋನ್ ದಾಳಿಯಿಂದ ಹೇಗೆ ರಕ್ಷಿಸಿದವು ಎಂಬುದರ ಕುರಿತು ಮಾತನಾಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್​ನಲ್ಲಿ ಉಗ್ರರು ದಾಳಿ ನಡೆಸಿ 26 ಅಮಾಯಕರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತವು ಪಾಕಿಸ್ತಾನದ ಮೇಲೆ ಆಪರೇಷನ್ ಸಿಂಧೂರ್ ಅಡಿಯಲ್ಲಿ ಕ್ರಮ ಕೈಗೊಂಡು, 9 ಉಗ್ರರ ನೆಲೆ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿತ್ತು. ಈ ಸಂದರ್ಭದಲ್ಲಿ ಪಾಕ್ ಸೇನೆ ಅಮೃತಸರದಲ್ಲಿರುವ ಗೋಲ್ಡನ್​ ಟೆಂಪಲ್ ಗುರಿಯಾಗಿಸಿಕೊಂಡಿತ್ತು ಎಂದು ಭಾರತೀಯ ಸೇನೆ ಮಾಹಿತಿ ಬಹಿರಂಗಪಡಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:50 am, Mon, 19 May 25