Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಭೆಯಿಂದ ದೂರ ಉಳಿಯಲಿದ್ದಾರೆ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ನಡೆಯಲಿರುವ ಜಿ20 ಶೃಂಗಸಭೆಯಿಂದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ದೂರ ಉಳಿಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೀನಾ ಮೂಲದ ಭಾರತೀಯ ರಾಜತಾಂತ್ರಿಕ ಮತ್ತು G20 ನಲ್ಲಿ ಸರ್ಕಾರಕ್ಕಾಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು ಲಿ ಕಿಯಾಂಗ್ ಸಭೆಯಲ್ಲಿ ಬೀಜಿಂಗ್ ಅನ್ನು ಪ್ರತಿನಿಧಿಸಬಹುದು ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವಾಲಯಗಳ ವಕ್ತಾರರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗ ಸಭೆಯಿಂದ ದೂರ ಉಳಿಯಲಿದ್ದಾರೆ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್
ಕ್ಸಿ ಜಿನ್​ಪಿಂಗ್
Follow us
ನಯನಾ ರಾಜೀವ್
|

Updated on:Aug 31, 2023 | 2:43 PM

ದೆಹಲಿಯಲ್ಲಿ ಸೆಪ್ಟೆಂಬರ್ 9 ಹಾಗೂ 10ರಂದು ನಡೆಯಲಿರುವ ಜಿ20 ಶೃಂಗಸಭೆಯಿಂದ ಚೀನಾ ಅಧ್ಯಕ್ಷ ಷಿ ಜಿನ್​ಪಿಂಗ್ ದೂರ ಉಳಿಯಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಚೀನಾ ಮೂಲದ ಭಾರತೀಯ ರಾಜತಾಂತ್ರಿಕ ಮತ್ತು G20 ನಲ್ಲಿ ಸರ್ಕಾರಕ್ಕಾಗಿ ಕೆಲಸ ಮಾಡುವ ಅಧಿಕಾರಿಯೊಬ್ಬರು ಲಿ ಕಿಯಾಂಗ್ ಸಭೆಯಲ್ಲಿ ಬೀಜಿಂಗ್ ಅನ್ನು ಪ್ರತಿನಿಧಿಸಬಹುದು ಎಂದು ಹೇಳಿದ್ದಾರೆ. ಈ ಬಗ್ಗೆ ಭಾರತ ಮತ್ತು ಚೀನಾ ವಿದೇಶಾಂಗ ಸಚಿವಾಲಯಗಳ ವಕ್ತಾರರು ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಭಾರತದಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಷಿ ಅವರು ಯುಎಸ್ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಕಳೆದ ವರ್ಷ ಇಂಡೋನೇಷ್ಯಾದ ಬಾಲಿಯಲ್ಲಿ ನಡೆದ ಜಿ20 ಶೃಂಗಸಭೆಯ ಸಂದರ್ಭದಲ್ಲಿ ಜಿನ್​ಪಿಂಗ್ ಬೈಡನ್ ಅವರನ್ನು ಕೊನೆಯ ಬಾರಿ ಭೇಟಿಯಾಗಿದ್ದರು.

ಮತ್ತೊಂದೆಡೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಈ ಶೃಂಗಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಮೊದಲೇ ಘೋಷಿಸಿದ್ದರು. ಅವರ ಸ್ಥಳದಲ್ಲಿ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಷಿ ಜಿನ್​ಪಿಂಗ್ ಯಾವ ಕಾರಣಗಳಿಂದ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ ಎಂಬುದರ ಬಗ್ಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕೂಡ ಗೈರಾಗುವ ಸಾಧ್ಯತೆ ಭಾರತದಲ್ಲಿ ನಡೆಯಲಿರುವ ಜಿ20 ಶೃಂಗಸಭೆಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೈರಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶೃಂಗಸಭೆಯು ಸೆಪ್ಟೆಂಬರ್ 9-10 ರಂದು ನಡೆಯಲಿದ್ದು, ಅಮೆರಿಕ ಅಧ್ಯಕ್ಷ ಜೋ ಬೈಡನ್, ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್, ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯಲ್ ಮ್ಯಾಕ್ರನ್ ಮತ್ತು ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರಂತಹ ವಿಶ್ವ ನಾಯಕರು ಈ ಕಾರ್ಯಕ್ರಮಕ್ಕಾಗಿ ದೆಹಲಿಗೆ ಆಗಮಿಸುವ ಸಾಧ್ಯತೆ ಇದೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆ: ಮಂಗನ ಕಾಟ ತಪ್ಪಿಸಲು ಬೃಹತ್ ಗಾತ್ರದ ಲಂಗೂರ್ ಕಟೌಟ್ ಸ್ಥಾಪಿಸಿದ ದೆಹಲಿ ಮುನ್ಸಿಪಲ್ ಕೌನ್ಸಿಲ್

ವಿವಿಧ ದೇಶಗಳ ಹೆಚ್ಚಿನ ಅತಿಥಿಗಳು ಸೆಪ್ಟೆಂಬರ್ 8 ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಸಭೆ ಬಳಿಕ ಪ್ರತಿನಿಧಿಗಳು ಸೆಪ್ಟೆಂಬರ್ 10-11 ರಂದು ತಮ್ಮ ದೇಶಗಳಿಗೆ ಹಿಂದಿರುಗುತ್ತಾರೆ.

ವರದಿಗಳ ಪ್ರಕಾರ, ಐಟಿಸಿ ಮೌರ್ಯ, ತಾಜ್ ಪ್ಯಾಲೇಸ್, ದಿ ಒಬೆರಾಯ್, ದಿ ಲೋಧಿ, ದಿ ಇಂಪೀರಿಯಲ್ ಮತ್ತು ಲ ಮೆರಿಡಿಯನ್‌ನಂತಹ 5-ಸ್ಟಾರ್ ಹೋಟೆಲ್‌ಗಳಲ್ಲಿ ಗಣ್ಯರಿಗೆ ಆತಿಥ್ಯ ನೀಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:04 pm, Thu, 31 August 23