Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದ ಗೌರವ್​ ವಲ್ಲಭ್​ ಬಿಜೆಪಿ ಸೇರ್ಪಡೆ

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದ ಗೌರವ್ ವಲ್ಲಭ್(Gourav Vallabh)​ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ನಾಯಕ ವಿನೋದ್​ ತಾವ್ಡೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರಿಗೆ ಪಕ್ಷದ ಸದಸ್ಯತ್ವವನ್ನು ನೀಡಿದರು. ಹಾಗೆಯೇ ಬಿಹಾರದ ಕಾಂಗ್ರೆಸ್​ ನಾಯಕ ಅನಿಲ್ ಶರ್ಮಾ ಹಾಗೂ ಆರ್​ಜೆಡಿ ನಾಯಕ ಉಪೇಂದ್ರ ಪ್ರಸಾದ್ ಕೂಡ ಬಿಜೆಪಿ ಸೇರಿದ್ದಾರೆ.

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದ ಗೌರವ್​ ವಲ್ಲಭ್​ ಬಿಜೆಪಿ ಸೇರ್ಪಡೆ
ಗೌರವ್
Follow us
ನಯನಾ ರಾಜೀವ್
|

Updated on: Apr 04, 2024 | 2:11 PM

ಕಾಂಗ್ರೆಸ್​ಗೆ ರಾಜೀನಾಮೆ ನೀಡಿದ್ದ ಗೌರವ್ ವಲ್ಲಭ್(Gourav Vallabh)​ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪಕ್ಷದ ನಾಯಕ ವಿನೋದ್​ ತಾವ್ಡೆ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರಿಗೆ ಪಕ್ಷದ ಸದಸ್ಯತ್ವವನ್ನು ನೀಡಿದರು. ಹಾಗೆಯೇ ಬಿಹಾರದ ಕಾಂಗ್ರೆಸ್​ ನಾಯಕ ಅನಿಲ್ ಶರ್ಮಾ ಹಾಗೂ ಆರ್​ಜೆಡಿ ನಾಯಕ ಉಪೇಂದ್ರ ಪ್ರಸಾದ್ ಕೂಡ ಬಿಜೆಪಿ ಸೇರಿದ್ದಾರೆ. ಗೌರವ್ ವಲ್ಲಭ್​ ಪಕ್ಷದ ಹಿರಿಯ ನಾಯಕ ಹಾಗೂ ವಕ್ತಾರ ಕೂಡ ಆಗಿದ್ದರು, ಪಕ್ಷದ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ ಹೊರಬಂದಿದ್ದರು.

ಇದಕ್ಕೂ ಮುನ್ನ ಗೌರವ್ ವಲ್ಲಭ್​ ಮಾತನಾಡಿ, ನಾನು ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರಬರೆದಿದ್ದೇನೆ ಅದರಲ್ಲಿ ನನ್ನ ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಿದ್ದೇನೆ ಎಂದು ಹೇಳಿದ್ದಾರೆ. ನಾನು ಅರ್ಥಶಾಸ್ತ್ರದ ವಿದ್ಯಾರ್ಥಿ, ದೇಶದ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಅರ್ಥಶಾಸ್ತ್ರ ಮತ್ತು ಹಣಕಾಸು ವಿಷಯಗಳನ್ನು ದೀರ್ಘಕಾಲ ಕಲಿಸಿದ್ದೇನೆ.

ಸನಾತನ ಧರ್ಮ ದುರ್ಬಳಕೆಯಾದಾಗ ಸುಮ್ಮನಿರಲು ನಮ್ಮಿಂದ ಸಾಧ್ಯವಿಲ್ಲ, ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ ನಮ್ಮ ಸಾಮರ್ಥ್ಯ ಮತ್ತು ಜ್ಞಾನವನ್ನು ಭಾರತವನ್ನು ಮುನ್ನಡೆಸಲು ಬಳಸುತ್ತೇನೆ ಎಂದಿದ್ದಾರೆ.

ಕಾಂಗ್ರೆಸ್ ಪಕ್ಷ ದಾರಿ ತಪ್ಪಿದೆ ಎಂದು ಗೌರವ್ ವಲ್ಲಭ್ ಹೇಳಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಪಕ್ಷದಲ್ಲಿ ಸರಿಯಾದ ನಿಲುವು ತಳೆಯಲು ಸಾಧ್ಯವಾಗುತ್ತಿಲ್ಲ ಎಂದರು. ಬುದ್ಧಿಜೀವಿಗಳು, ಹೊಸ ವಿಚಾರಗಳನ್ನು ಹೊಂದಿರುವ ಯುವಕರಿಗೆ ಪಕ್ಷದಲ್ಲಿ ಮನ್ನಣೆ ಸಿಗುತ್ತಿಲ್ಲ. ಪಕ್ಷ ತಳಮಟ್ಟದಲ್ಲಿ ಯಾರೊಂದಿಗೂ ಸಂಪರ್ಕ ಸಾಧಿಸಲು ಸಾಧ್ಯವಾಗುತ್ತಿಲ್ಲ.

ಮತ್ತಷ್ಟು ಓದಿ: ಕಾಂಗ್ರೆಸ್​ಗೆ ಮತ್ತೊಂದು ಶಾಕ್, ವಕ್ತಾರ ಗೌರವ್ ವಲ್ಲಭ್ ರಾಜೀನಾಮೆ

ಪ್ರಬಲ ಪ್ರತಿಪಕ್ಷದ ಪಾತ್ರವನ್ನೂ ಸರಿಯಾಗಿ ನಿರ್ವಹಿಸಲು ಪಕ್ಷಕ್ಕೆ ಸಾಧ್ಯವಾಗುತ್ತಿಲ್ಲ, ಇದರಿಂದ ಸಾಮಾನ್ಯ ಕಾರ್ಯಕರ್ತರು ಸಿಟ್ಟಿಗೆದ್ದಿದ್ದಾರೆ. ದೊಡ್ಡ ನಾಯಕರು ಮತ್ತು ತಳಮಟ್ಟದ ಕಾರ್ಯಕರ್ತರ ನಡುವೆ ಅಂತರ ಹೆಚ್ಚಾಗಿದ್ದು, ಇದರಿಂದ ಪಕ್ಷ ನಷ್ಟ ಅನುಭವಿಸುತ್ತಿದ್ದು, ಅಧಿಕಾರದಿಂದ ದೂರ ಉಳಿಯುತ್ತಿದೆ ಎಂದರು.

ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆಯಲ್ಲಿ ಕಾಂಗ್ರೆಸ್​ ಪಕ್ಷದ ನಿಲುವಿನಿಂದ ನಾನು ಅಸಮಾಧಾನಗೊಂಡಿದ್ದೇನೆ. ನಾನು ಹುಟ್ಟಿನಿಂದ ಹಿಂದೂ ಮತ್ತು ವೃತ್ತಿಯಲ್ಲಿ ಶಿಕ್ಷಕ. ಪಕ್ಷದ ನಿಲುವು ನನ್ನ ಭಾವನೆಗಳಿಗೆ ಸದಾ ಪೆಟ್ಟು ಕೊಡುತ್ತಿತ್ತು ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ