ಎಲ್ಲರೂ ಸೇರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದ ರಾಹುಲ್ಗೆ ಸ್ಮೃತಿ ಇರಾನಿ ತಿರುಗೇಟು
ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಒಂದರಿಂದಲೇ ಸಾಧ್ಯವಿಲ್ಲ ಎಂದು ನೀವು ಒಪ್ಪಿಕೊಂಡಿರಲ್ಲಾ ಅದೇ ಸಂತಸದ ಸಂಗತಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ತಿರುಗೇಟು ನೀಡಿದ್ದಾರೆ.
ಬಿಜೆಪಿ(BJP)ಯನ್ನು ಸೋಲಿಸಲು ಕಾಂಗ್ರೆಸ್(Congress) ಒಂದರಿಂದಲೇ ಸಾಧ್ಯವಿಲ್ಲ ಎಂದು ನೀವು ಒಪ್ಪಿಕೊಂಡಿರಲ್ಲಾ ಅದೇ ಸಂತಸದ ಸಂಗತಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ತಿರುಗೇಟು ನೀಡಿದ್ದಾರೆ. ಪ್ರಧಾನಿ ಮೋದಿಯನ್ನು ಸೋಲಿಸುವ ಶಕ್ತಿ ಕಾಂಗ್ರೆಸ್ಗಿಲ್ಲ, ನಿಮಗೆ ಬೇರೆಲ್ಲಾ ಪಕ್ಷಗಳ ಸಹಕಾರ ಬೇಕು ಎಂದು ಒಪ್ಪಿಕೊಂಡಿದ್ದೀರಿ ಎಂದಿದ್ದಾರೆ.
2024ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಾಟ್ನಾದಲ್ಲಿ ನಡೆಯುತ್ತಿರುವ ಪ್ರತಿಪಕ್ಷಗಳ ಸಭೆಯಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ರಾಹುಲ್ ಈ ಹೇಳಿಕೆ ನೀಡಿದ್ದಾರೆ.
ಮತ್ತಷ್ಟು ಓದಿ: Rajasthan Politics: ಸಚಿನ್ ಪೈಲಟ್ ಪಕ್ಷ ಬಿಡುವುದು ನಮಗ್ಯಾರಿಗೂ ಇಷ್ಟವಿಲ್ಲ: ಕೆಸಿ ವೇಣುಗೋಪಾಲ್
ಬಿಜೆಪಿ ದ್ವೇಷ, ಹಿಂಸಾಚಾರ ಹರಡಲು ಹಾಗೂ ದೇಶವನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ, ನಾವು ಪ್ರೀತಿ ಹರಡಿಸಿ ಜನರನ್ನು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ನಾವು ಒಗ್ಗಟ್ಟಾಗಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದರು ಹೇಳಿದ್ದಾರೆ.
2020ರ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ಮೊದಲ ಬಾರಿಗೆ ಬಿಹಾರಕ್ಕೆ ತೆರಳಿರುವ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗಿದ್ದರು. ಬೆಳಗ್ಗೆಯಿಂದಲೇ ವಿಮಾನ ನಿಲ್ದಾಣದ ಆವರಣವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಿಂದ ತುಂಬಿ ತುಳುಕುತ್ತಿತ್ತು. ಭಾರತ್ ಜೋಡೋ ಯಾತ್ರೆಯು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಚೈತನ್ಯವನ್ನು ತುಂಬಿದಂತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ