ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

ನಿನ್ನೆಯಷ್ಟೇ ಎಸ್​ಡಿಪಿಐ ನಾಯಕ ಕೆ.ಎಸ್​ ಶಾನ್ ಅವರನ್ನು ಕೊಲೆ ಮಾಡಲಾಗಿತ್ತು. ಅದರ ಬೆನ್ನಲ್ಲೇ ಅಲಪ್ಪುಳದಲ್ಲಿ ಇಂದು ಮುಂಜಾನೆ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಮನೆಗೆ ನುಗ್ಗಿದ ಅಪರಿಚಿತರು ಅವರ ಕುತ್ತಿಗೆ ಕತ್ತರಿಸಿ ಹತ್ಯೆ ಮಾಡಿದ್ದಾರೆ.

ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ
ರಂಜಿತ್ ಶ್ರೀನಿವಾಸ್
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 19, 2021 | 9:08 AM

ಅಲಪ್ಪುಳ: ಇಂದು ಮುಂಜಾನೆ ಕೇರಳದ ಅಲಪ್ಪುಳದಲ್ಲಿ ಬಿಜೆಪಿ ಮುಖಂಡರೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಬಿಜೆಪಿಯ ಒಬಿಸಿ ಮೋರ್ಚಾ ಕೇರಳ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸ್ ಎಂಬ 40 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ಅಪರಿಚಿತರಿಂದ ಕೊಲೆಗೀಡಾಗಿದ್ದಾರೆ. ಇಂದು ಬೆಳಗ್ಗೆ ಅವರ ಮನೆಗೆ ನುಗ್ಗಿದ ಗುಂಪೊಂದು ಬಾಗಿಲು ಬೆಲ್ ಮಾಡಿದೆ. ಮನೆಯ ಬಾಗಿಲು ತೆಗೆದ ಕೂಡಲೇ ಒಳಗೆ ನುಗ್ಗಿದ ದುಷ್ಕರ್ಮಿಗಳು ರಂಜಿತ್ ಶ್ರೀನಿವಾಸ್ ಅವರ ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದಾರೆ.

ಕೇರಳದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯದರ್ಶಿ ಕೆಎಸ್ ಶಾನ್ ಅವರ ಮೇಲೆ ಕೇರಳದ ಕೊಚ್ಚಿಯಲ್ಲಿ ಅಪರಿಚಿತ ಗ್ಯಾಂಗ್ ದಾಳಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ರಂಜಿತ್ ಶ್ರೀನಿವಾಸ್ ಅವರ ಕೊಲೆ ಸಂಭವಿಸಿದೆ. ಈ ಘಟನೆಯ ಹಿಂದೆ ಯಾರ ಕೈವಾಡವಿದೆ ಎಂಬುದರ ತನಿಖೆ ಇನ್ನು ನಡೆಯಬೇಕಿದೆ.

ಶನಿವಾರ ಕೆ.ಎಸ್. ಶಾನ್ ತಮ್ಮ ಮನೆಗೆ ತೆರಳುತ್ತಿದ್ದ ವೇಳೆ ಅವರ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿತ್ತು. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ಮಧ್ಯರಾತ್ರಿ 12.45ಕ್ಕೆ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಎಸ್‌ಡಿಪಿಐ ಅಧ್ಯಕ್ಷ ಎಂ.ಕೆ. ಫೈಝಿ, ಕೆ.ಎಸ್.ಶಾನ್ ಅವರನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದರು.

ಅದರ ಬೆನ್ನಲ್ಲೇ ಇಂದು ಮುಂಜಾನೆ ಬಿಜೆಪಿ ನಾಯಕನ ಹತ್ಯೆ ನಡೆದಿರುವುದು ಕೇರಳದಲ್ಲಿ ಆತಂಕ ಹೆಚ್ಚಿಸಿದೆ. ರಂಜಿತ್ ಶ್ರೀನಿವಾಸ್ 2016ರ ವಿಧಾನಸಭಾ ಚುನಾವಣೆಯಲ್ಲಿ ಅಲಪ್ಪುಳ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದರು. ರಂಜಿತ್ ಶ್ರೀನಿವಾಸ್ ವೃತ್ತಿಯಲ್ಲಿ ವಕೀಲರಾಗಿದ್ದರು.

ಇದನ್ನೂ ಓದಿ: Bird flu ಕೇರಳದಲ್ಲಿ ಹೆಚ್ಚಿದ ಹಕ್ಕಿ ಜ್ವರ ಭೀತಿ; ಕೋಟ್ಟಯಂ, ಆಲಪ್ಪುಳದಲ್ಲಿ ಬಾತುಕೋಳಿಗಳ ಹತ್ಯೆ

ಮಗಳ ಕ್ಷೇಮಕ್ಕಾಗಿ ಪಾಲಕರು ನೀಡುವ ಉಡುಗೊರೆ ವರದಕ್ಷಿಣೆ ಅಲ್ಲ: ಕೇರಳ ಹೈಕೋರ್ಟ್

ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್