ಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧದಂತೆ ಬಳಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್(MK Stalin) ಕಿಡಿಕಾರಿದ್ದಾರೆ. ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್ಕಾಸ್ಟ್ನಲ್ಲಿ ಮಾತನಾಡಿರುವ ಅವರು, ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಉರಿಯುತ್ತಿರುವ ಜ್ವಾಲೆಯಲ್ಲಿ ತಾವು ಬೆಚ್ಚಗಿರಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯು ಏಕತೆಯ ಪ್ರಜ್ಞೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಕಠುವಾಗಿ ನುಡಿದಿದ್ದಾರೆ.
ಮಣಿಪುರ ಮತ್ತು ಹರಿಯಾಣದ ವಿಚಾರವನ್ನು ಪ್ರಸ್ತಾಪಿಸಿದ ಸಿಎಂ ಸ್ಟಾಲಿನ್, ಮಣಿಪುರದಲ್ಲಿ ಹೊತ್ತಿಕೊಂಡ ಮತೀಯ ಬೆಂಕಿಯು ರಾಜ್ಯವನ್ನು ಸುಟ್ಟುಹಾಕಿತು ಮತ್ತು ಹರಿಯಾಣದಲ್ಲಿ ಧಾರ್ಮಿಕ ಮತಾಂಧತೆಯ ಬೆಂಕಿ ಅಮಾಯಕರ ಜೀವ ಮತ್ತು ಆಸ್ತಿಯನ್ನು ತೆಗೆದುಕೊಳ್ಳುತ್ತಿದೆ ಎಂದು ಹೇಳಿದರು.
2024 ರ ಚುನಾವಣೆಯು ಯಾರು ಅಧಿಕಾರಕ್ಕೆ ಬರಬೇಕು ಎಂಬುದಕ್ಕಿಂತ ಯಾರು ಅಧಿಕಾರಕ್ಕೆ ಬರಬಾರದು ಎಂಬುದಾಗಿದೆ ಎಂದು ಸ್ಟಾಲಿನ್ ಎಂದರು.
ಮತ್ತಷ್ಟು ಓದಿ: ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ ಎಂದು ಕರೆದ ಸ್ಟಾಲಿನ್ ಪುತ್ರ ಉದಯನಿಧಿ
ಎಂಕೆ ಸ್ಟಾಲಿನ್ ಪುತ್ರ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು, ಈ ರೋಗಿಗಳ ವಿರುದ್ಧ ಹೋರಾಡಿದರೆ ಸಾಲದು ಅದನ್ನು ಬುಡಸಮೇತ ಹೇಗೆ ನಿರ್ಮೂಲನೆ ಮಾಡಬೇಕೋ ಹಾಗೆಯೇ ಸನಾತನ ಧರ್ಮವನ್ನು ಕೂಡ ನಿರ್ಮೂಲನೆ ಮಾಡಬೇಕೆಂದು ಹೇಳಿಕೆ ನೀಡಿದ್ದರು.
ಸನಾತನ ಧರ್ಮವನ್ನು ಅನುಸರಿಸುವ ಜನರ ನರಮೇಧಕ್ಕೆ ನಾನು ಎಂದಿಗೂ ಕರೆ ನೀಡಿಲ್ಲ . ಸನಾತನ ಧರ್ಮವು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಜನರನ್ನು ವಿಭಜಿಸುವ ತತ್ವವಾಗಿದೆ. ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ.
ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ.ಸನಾತನ ಧರ್ಮದಿಂದ ಬಳಲುತ್ತಿರುವ ತುಳಿತಕ್ಕೊಳಗಾದ ಮತ್ತು ಅಂಚಿನಲ್ಲಿರುವವರ ಪರವಾಗಿ ಮಾತನಾಡಿದ್ದೇನೆ ಎಂದು ಸಮರ್ಥಿಸಿಕೊಂಡರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:54 am, Mon, 4 September 23