ತೇಜಸ್ವಿ ಯಾದವ್ ಸುಳಿವಿನ ಬೆನ್ನಲ್ಲೇ ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ನಿತೀಶ್ ಕುಮಾರ್

|

Updated on: Jun 03, 2024 | 7:16 PM

ಲೋಕಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಅಂದರೆ ಜೂನ್ 4ರ ಬಳಿಕ ನಿತೀಶ್ ಕುಮಾರ್ ಮಹತ್ವದ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಭವಿಷ್ಯ ನುಡಿದಿದ್ದರು. ಈ ಹಿನ್ನೆಲೆಯಲ್ಲಿ ಇಂದಿನ ಸಿಎಂ ನಿತೀಶ್ ಕುಮಾರ್ ಹಾಗೂ ಪಿಎಂ ನರೇಂದ್ರ ಮೋದಿ ಅವರ ಭೇಟಿ ಕುತೂಹಲ ಮೂಡಿಸಿದೆ.

ತೇಜಸ್ವಿ ಯಾದವ್ ಸುಳಿವಿನ ಬೆನ್ನಲ್ಲೇ ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ನಿತೀಶ್ ಕುಮಾರ್
ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ನಿತೀಶ್ ಕುಮಾರ್
Follow us on

ನವದೆಹಲಿ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿಯು ದೆಹಲಿಯಿಂದ ಬಿಹಾರದವರೆಗೆ ಊಹಾಪೋಹಗಳನ್ನು ಹೆಚ್ಚಿಸಿದೆ. ನಿತೀಶ್ ಕುಮಾರ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ (Lok Sabha Elections 2024) ಎನ್‌ಡಿಎ ಸಾಧಿಸಲಿರುವ ಭರ್ಜರಿ ಯಶಸ್ಸಿಗೆ ಮುಂಚಿತವಾಗಿ ಪ್ರಧಾನಿ ಮೋದಿಯನ್ನು ಅಭಿನಂದಿಸಿದ್ದಾರೆ. ಜೂನ್ 4ರಂದು ಎನ್​ಡಿಎ ಸರ್ಕಾರ ರಚನೆಯಾದರೆ ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಯುಗೆ ಸ್ಥಾನ ಸಿಗಬಹುದು ಎಂಬ ಚರ್ಚೆಯೂ ನಡೆಯುತ್ತಿದೆ.

ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮೊದಲು ನಿತೀಶ್ ಕುಮಾರ್ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಎನ್‌ಡಿಎ ಪಡೆಯಲಿರುವ ದೊಡ್ಡ ಯಶಸ್ಸಿಗೆ ಅವರು ಮುಂಚಿತವಾಗಿ ಅವರನ್ನು ಅಭಿನಂದಿಸಿದರು.

ಇದನ್ನೂ ಓದಿ: ಬಿಜೆಪಿ ಜತೆ ನಿತೀಶ್ ಕುಮಾರ್ ಮೈತ್ರಿ ಸರಿ ಇಲ್ಲ, ಚುನಾವಣೆ ನಂತರ ಮಹತ್ವವಾದುದು ಸಂಭವಿಸುತ್ತದೆ: ತೇಜಸ್ವಿ ಯಾದವ್

ಮುಖ್ಯಮಂತ್ರಿ ನಿತೀಶ್ ಕುಮಾರ್ ಭಾನುವಾರ ದೆಹಲಿಗೆ ಬಂದಿದ್ದರು. ಈ ಹಿಂದೆ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಈ ಬಗ್ಗೆ ಸುಳಿವು ನೀಡಿದ್ದು, ಜೂನ್ 4ರ ನಂತರ ನಿತೀಶ್ ಕುಮಾರ್ ದೊಡ್ಡ ನಿರ್ಧಾರವೊಂದನ್ನು ತೆಗೆದುಕೊಳ್ಳುತ್ತಾರೆ ಎಂದಿದ್ದರು. ಆದರೆ, ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡುವ ಅವರ ಕಾರ್ಯಕ್ರಮ ಈಗಾಗಲೇ ನಿಗದಿಯಾಗಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರದ ನಂತರ ಉದ್ಧವ್ ಠಾಕ್ರೆ ನರೇಂದ್ರ ಮೋದಿ ಜತೆ ಕೈ ಜೋಡಿಸಲಿದ್ದಾರೆ: ರವಿ ರಾಣಾ

ಇತ್ತೀಚೆಗಷ್ಟೇ ಚುನಾವಣಾ ಪ್ರಚಾರದ ವೇಳೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪಾಟ್ನಾದಲ್ಲಿ ಪ್ರಧಾನಿಯವರ ರೋಡ್‌ಶೋನಲ್ಲಿ ಪಾಲ್ಗೊಂಡಿದ್ದರು. ಇದಲ್ಲದೇ ಪ್ರಧಾನಿಯವರ ಕೆಲವು ಸಭೆಗಳಲ್ಲಿ ನಿತೀಶ್ ಕುಮಾರ್ ಕೂಡ ಪಾಲ್ಗೊಂಡಿದ್ದರು. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಜೆಡಿಯು ಪಾಲ್ಗೊಳ್ಳಲಿದೆ ಎಂಬ ಗುಸುಗುಸು ಇದೆ. ಈ ಸುದ್ದಿ ಮೊದಲಿನಿಂದಲೂ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ