ಎನ್‌ಡಿಎ ಸಭೆ ಬಳಿಕ ರಾಷ್ಟ್ರಪತಿ ಬಳಿ ಹೋಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮೋದಿ ತೀರ್ಮಾನ

ಪ್ರಧಾನಿ ಮೋದಿ ಅವರು ಇಂದು ಎನ್‌ಡಿಎ ಸಭೆಯ ನಂತರ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಎನ್‌ಡಿಎ ಸಭೆ ಬಳಿಕ ರಾಷ್ಟ್ರಪತಿ ಬಳಿ ಹೋಗಿ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಮೋದಿ ತೀರ್ಮಾನ
ಪ್ರಧಾನಿ ನರೇಂದ್ರ ಮೋದಿ
Follow us
ಅಕ್ಷಯ್​ ಪಲ್ಲಮಜಲು​​
|

Updated on:Jun 05, 2024 | 5:12 PM

ದೆಹಲಿ, ಜೂ.5: ಪ್ರಧಾನಿ ಮೋದಿ (Narendra Modi) ಅವರು ಇಂದು ಎನ್‌ಡಿಎ ಸಭೆಯ ನಂತರ ರಾಷ್ಟ್ರಭವನಕ್ಕೆ ತೆರಳಿ ರಾಷ್ಟ್ರಪತಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ. ಎನ್​​ಡಿಎ ಸಭೆಯ ನಂತರ ಎಲ್ಲರ ತಿರ್ಮಾನದಂತೆ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಹಕ್ಕು ಮಂಡನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕೂ ಮುನ್ನ ಪ್ರಧಾನಿ ಮೋದಿ ಅವರು ಸಚಿವ ಸಂಪುಟ ಸಭೆಯನ್ನು ನಡೆಸಿ, ಪ್ರಧಾನಿ ಸ್ಥಾನ ಹಾಗೂ ಎಲ್ಲ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು. ಆದರೆ ಹೊಸ ಸರ್ಕಾರ ರಚನೆ ಆಗುವವರೆಗೆ ಹಂಗಾಮಿ ಪ್ರಧಾನಿಯಾಗಿ ಹಾಗೂ ಹೀಗಿನ ಸಚಿವ ಸಂಪುಟವೇ ಮುಂದುವರಿಯುವಂತೆ ಹೇಳಿದ್ದಾರೆ.

ಇದಕ್ಕೂ ಮುನ್ನ ಸರ್ಕಾರ ರಚನೆ ಮಾಡಲು ಮೋದಿ, ಅಮಿತ್​​ ಶಾ ಸೇರಿದಂತೆ ಅನೇಕ ಹಿರಿಯ ನಾಯಕರು ರಾಷ್ಟ್ರಪತಿ ಜತೆಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಕಡಿಮೆ ಸ್ಥಾನ ಪಡೆದ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಎನ್​​ಡಿಎ ಸಂಸದರ ಬಹುಮತದೊಂದಿಗೆ ಮೋದಿ ಹೊಸ ಸರ್ಕಾರವನ್ನು ರಚನೆ ಮಾಡಬೇಕಿದೆ. ಅದಕ್ಕಾಗಿ ಎನ್​​ಡಿಎ ಸಂಸದರ ಸಭೆ ನಡೆಸಿ ಅಲ್ಲಿ ಒಂದು ತಿರ್ಮಾನವನ್ನು ತೆಗೆದುಕೊಂಡು ನಂತರ ಸರ್ಕಾರ ರಚನೆ ಮಾಡಲಿದ್ದಾರೆ. ಈಗಾಗಲೇ ಎನ್​​ಡಿಎ ಸಭೆ ನಡೆಯುತ್ತಿದ್ದು, ಎಲ್ಲ ಆಯಾಗಳಲ್ಲೂ ಮೋದಿ ನೇತೃತ್ವದಲ್ಲಿ ಸರ್ಕಾರ ರಚನೆ ಆಗಲಿದೆ ಎಂಬುದನ್ನು ಮೂಲಗಳು ತಿಳಿಸಿದೆ.

ಇದನ್ನೂ ಓದಿ: ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ

ಇನ್ನು ಈ ಎನ್​​ಡಿಎ ಒಕ್ಕೂಟದಲ್ಲಿ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಮತ್ತು ಜನತಾ ದಳದ ನಿತೀಶ್ ಕುಮಾರ್ ಕೂಡ ಸೇರಿದ್ದಾರೆ. ಸರ್ಕಾರ ರಚನೆಗೆ ಅವರ ಬೆಂಬಲ ಅಗತ್ಯವಾಗಿದ್ದು, ಅವರನ್ನು ಎನ್​​​ಡಿಎಗೆ ಬೆಂಬಲ ನೀಡುವಂತೆ ಮೋದಿ ಹಾಗೂ ಅಮಿತ್​​ ಶಾ ಕೇಳಿಕೊಂಡಿದ್ದಾರೆ. ಆಂಧ್ರ ಪ್ರದೇಶದ ಲೋಕಸಭೆಯಲ್ಲಿ 28 ಸ್ಥಾನಗಳನ್ನು ಪಡೆದಿರುವ ಚಂದ್ರಬಾಬು ನಾಯ್ಡು ಅವರ ಪಕ್ಷ ಹಾಗೂ ಬಿಹಾರದಲ್ಲಿ 17 ಸ್ಥಾನಗಳನ್ನು ಪಡೆದಿರುವ ನಿತೀಶ್ ಕುಮಾರ್ ಅವರ ಬೆಂಬಲ ಎನ್​​​ಡಿಎಗೆ ಅಗತ್ಯವಾಗಿದೆ. ಇದೀಗ ಈ ಇಬ್ಬರು ಕಿಂಗ್​​​​​ಮೇಕರ್​​​ ಆಗಿದ್ದಾರೆ ಎಂದು ಹೇಳಲಾಗಿದೆ. ಮತ್ತೊಂದು ಕಡೆ ಇಂಡಿಯಾ ಒಕ್ಕೂಟ ಕೂಡ ಈ ಇಬ್ಬರಿಗಾಗಿ ಹೊಂಚು ಹಾಕಿದೆ. ಅಲ್ಲಿಯೂ  ಸರ್ಕಾರ ರಚನೆ ಮಾಡಲು ಇವರು ಪ್ರಮುಖ ಪಾತ್ರವಹಿಸುತ್ತಾರೆ.

ಲೋಕಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Wed, 5 June 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ