Delhi Mayor Election: ಫೆ.16ರಂದು ದೆಹಲಿ ಮೇಯರ್ ಚುನಾವಣೆ

ದೆಹಲಿಯಲ್ಲಿ ಕೇಂದ್ರದ ಪ್ರತಿನಿಧಿಯಾಗಿರುವ ವಿಕೆ ಸಕ್ಸೇನಾ ಅವರು ನಾಮನಿರ್ದೇಶನ ಮಾಡಿದ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕುಗಳನ್ನು ಎಎಪಿ ತೀವ್ರವಾಗಿ ವಿರೋಧಿಸಿದೆ. ಈ ಸದಸ್ಯರು ಬಿಜೆಪಿಯನ್ನು ಬೆಂಬಲಿಸಲು ಒಲವು ತೋರುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ.

Delhi Mayor Election: ಫೆ.16ರಂದು ದೆಹಲಿ ಮೇಯರ್ ಚುನಾವಣೆ
ದೆಹಲಿ ಕಾರ್ಪೊರೇಷನ್
Follow us
|

Updated on: Feb 12, 2023 | 2:38 PM

ದೆಹಲಿ: ಆಮ್ ಆದ್ಮಿ ಪಕ್ಷ (AAP) ಮತ್ತು ಬಿಜೆಪಿ (BJP) ನಡುವಿನ ಜಗಳದ ನಡುವೆ ಮೂರು ವಿಫಲ ಪ್ರಯತ್ನಗಳ ನಂತರ ಮೇಯರ್ (Mayor Election) ಆಯ್ಕೆಗಾಗಿ ದೆಹಲಿಯ ನಾಗರಿಕ ಸಂಸ್ಥೆ ಗುರುವಾರ ಸಭೆ ಸೇರಲಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಫೆಬ್ರವರಿ 16 ರಂದು ಮೇಯರ್ ಚುನಾವಣೆ ನಡೆಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಪಕ್ಷದ ಪ್ರಸ್ತಾವನೆಯನ್ನು ಸ್ವೀಕರಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ ಎಂದು ಎನ್​​ಡಿಟಿವಿ ವರದಿ ಮಾಡಿದೆ. ಲೆಫ್ಟಿನೆಂಟ್ ಗವರ್ನರ್ ನಾಮನಿರ್ದೇಶನ ಮಾಡಿದ 10 ಎಂಸಿಡಿ ಸದಸ್ಯರಿಗೆ ಮತ ಚಲಾಯಿಸಲು ಅವಕಾಶ ನೀಡಿದ ನಂತರ ಬಿಜೆಪಿ ಮತ್ತು ಎಎಪಿಯ ಪ್ರತಿಭಟನೆಯಿಂದಾಗಿ ಜನವರಿ 6 ಮತ್ತು 24 ಮತ್ತು ಫೆಬ್ರವರಿ 6 ರಂದು ಕೌನ್ಸಿಲರ್‌ಗಳು ಸಭೆ ಸೇರಿದಾಗ ಮೇಯರ್ ಅನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ.

ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಕಾಯಿದೆಯು ನಾಮನಿರ್ದೇಶಿತ ಸದಸ್ಯರು ಅಥವಾ ಆಲ್ಡರ್ ಮೆನ್ ಸಭೆಗಳಲ್ಲಿ ಮತ ಚಲಾಯಿಸುವಂತಿಲ್ಲ ಎಂದು ಹೇಳುತ್ತದೆ.

ಇದನ್ನೂ ಓದಿ: Malfeasance: ಸದಾ ನೆಹರು ಹೆಸರನ್ನು ಹೇಳುವ ಬಿಜೆಪಿಯ ಗೀಳಿಗೆ ಹೊಸ ಪದ ಪರಿಚಯಿಸಿದ ಶಶಿ ತರೂರ್

ದೆಹಲಿಯಲ್ಲಿ ಕೇಂದ್ರದ ಪ್ರತಿನಿಧಿಯಾಗಿರುವ ವಿಕೆ ಸಕ್ಸೇನಾ ಅವರು ನಾಮನಿರ್ದೇಶನ ಮಾಡಿದ ಆಲ್ಡರ್‌ಮೆನ್‌ಗಳಿಗೆ ಮತದಾನದ ಹಕ್ಕುಗಳನ್ನು ಎಎಪಿ ತೀವ್ರವಾಗಿ ವಿರೋಧಿಸಿದೆ. ಈ ಸದಸ್ಯರು ಬಿಜೆಪಿಯನ್ನು ಬೆಂಬಲಿಸಲು ಒಲವು ತೋರುತ್ತಿದ್ದಾರೆ ಎಂದು ಪಕ್ಷ ಆರೋಪಿಸಿದೆ.

ಇತ್ತೀಚೆಗೆ ನಡೆದ ನಾಗರಿಕ ಸಂಸ್ಥೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗಿಂತ ಹೆಚ್ಚಿನ ಸ್ಥಾನಗಳನ್ನು ಎಎಪಿ ಗೆದ್ದಿದ್ದರೂ, ಮೇಯರ್ ಸ್ಥಾನಕ್ಕೆ ಬಿಜೆಪಿ ನಾಯಕನನ್ನು ಆಯ್ಕೆ ಮಾಡುವ ಮೂಲಕ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅನ್ನು ವಶಪಡಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆಪ್ ಹೇಳಿದೆ.

ಡಿಸೆಂಬರ್‌ನಲ್ಲಿ ನಡೆದ ಎಂಸಿಡಿ ಚುನಾವಣೆಯಲ್ಲಿ ಎಎಪಿ ಗೆದ್ದು ಬೀಗಿತ್ತು. ಎಎಪಿ 134 ವಾರ್ಡ್‌ಗಳನ್ನು ಗೆದ್ದು ನಾಗರಿಕ ಸಂಸ್ಥೆಯಲ್ಲಿ ಬಿಜೆಪಿಯ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿತ್ತು. ಬಿಜೆಪಿ 104 ವಾರ್ಡ್‌ಗಳನ್ನು ಗೆದ್ದು ಎರಡನೇ ಸ್ಥಾನ ಗಳಿಸಿದರೆ, ಕಾಂಗ್ರೆಸ್ ಒಂಬತ್ತು ಸ್ಥಾನಗಳನ್ನು ಗೆದ್ದಿದೆ.

ದೆಹಲಿ ಮೇಯರ್ ಹುದ್ದೆಯು ಸರದಿಯ ಮೇಲೆ ಐದು ಬಾರಿ ಒಂದು ವರ್ಷದ ಅವಧಿಯನ್ನು ಒಬ್ಬೊಬ್ಬರಿಗೆ ನೀಡಲಾಗುತ್ತದೆ. ಮೊದಲ ವರ್ಷ ಮಹಿಳೆಯರಿಗೆ, ಎರಡನೆಯದು ಮುಕ್ತ ವರ್ಗಕ್ಕೆ, ಮೂರನೆಯದು ಮೀಸಲು ವರ್ಗಕ್ಕೆ ಮತ್ತು ಉಳಿದ ಎರಡು ಮುಕ್ತ ವರ್ಗಕ್ಕೆ ಮೀಸಲಾಗಿದೆ. ಹೀಗಾಗಿ ದೆಹಲಿಗೆ ಈ ವರ್ಷ ಮಹಿಳಾ ಮೇಯರ್ ಸಿಗಲಿದ್ದಾರೆ.

ಕಳೆದ ವರ್ಷ ಪಾಲಿಕೆಯ ಮೂರು ವಿಭಾಗಗಳ ವಿಲೀನದ ನಂತರ 10 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ನಗರಕ್ಕೆ ಮೇಯರ್ ಆಯ್ಕೆಯಾಗಿ ಬರಲಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು