AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Agnipath Protests: ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ

ವಿವಿಧ ರಾಜ್ಯಗಳ ಪೊಲೀಸರು ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡ ಸುಮಾರು 1,000 ಮಂದಿಯನ್ನು ಬಂಧಿಸಿದ್ದಾರೆ.

Agnipath Protests: ಅಗ್ನಿಪಥ್ ವಿರೋಧಿಸಿ ಪ್ರತಿಭಟನೆ: ದೇಶದ ವಿವಿಧೆಡೆ 1000 ಮಂದಿ ಬಂಧನ
ಬಿಹಾರದ ಭೋಜ್​ಪುರ ಜಿಲ್ಲೆಯಲ್ಲಿ ಅಗ್ನಿಪಥ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ರೈಲು ನಿಲ್ದಾಣದಲ್ಲಿದ್ದ ವಸ್ತುಗಳಿಗೆ ಬೆಂಕಿ ಹಚ್ಚಲಾಗಿದೆ.
TV9 Web
| Edited By: |

Updated on:Jun 20, 2022 | 8:51 AM

Share

ದೆಹಲಿ: ಮಿಲಿಟರಿ ನೇಮಕಾತಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ಅಗ್ನಿಪಥ್ ಯೋಜನೆ (Agnipath Scheme) ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ತೀವ್ರಗೊಂಡಿವೆ. ವಿವಿಧ ರಾಜ್ಯಗಳ ಪೊಲೀಸರು ಹಿಂಸಾತ್ಮಕ ಪ್ರತಿಭಟನೆಗಳಲ್ಲಿ ತೊಡಗಿಸಿಕೊಂಡ ಸುಮಾರು 1,000 ಮಂದಿಯನ್ನು ಬಂಧಿಸಿದ್ದಾರೆ. ಬಿಹಾರದಲ್ಲಿಯೇ (Bihar) ಹೆಚ್ಚಿನ ಸಂಖ್ಯೆಯ ಜನರನ್ನು ಬಂಧಿಸಲಾಗಿದೆ. ಪ್ರತಿಭಟನೆಯ ವಿಡಿಯೊ ಫೂಟೇಜ್​ಗಳನ್ನು ಗಮನಿಸಿ, ಹಿಂಸಾಚಾರ ಎಸಗಿದವರನ್ನು ಪೊಲೀಸರು ಗುರುತಿಸುತ್ತಿದ್ದಾರೆ. ಅಗ್ನಿಪಥ್ ಯೋಜನೆ ವಿರೋಧಿಸಿ ನಡೆದ ಪ್ರತಿಭಟನೆಗಳ ತೀವ್ರತೆ ಬಿಹಾರದಲ್ಲಿ ಹೆಚ್ಚಾಗಿದೆ. ಹಲವು ಜಿಲ್ಲೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಲಾಗಿದೆ. ರೈಲುಗಳಿಗೂ ಬೆಂಕಿ ಹಚ್ಚಲಾಗಿದೆ. ಬಿಹಾರದ 805 ಮಂದಿಯ ವಿರುದ್ಧ 148 ಎಫ್​ಐಆರ್​ ದಾಖಲಾಗಿದೆ.

ಪ್ರತಿಭಟನೆಯ ಹೆಸರಿನಲ್ಲಿ ಸಾರ್ವಜನಿಕ ಆಸ್ತಿ ಹಾಳು ಮಾಡುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು. ಇಂಥವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಬಿಹಾರದ ಹೆಚ್ಚುವರಿ ಗೃಹ ಕಾರ್ಯದರ್ಶಿ ಚೈತನ್ಯ ಪ್ರಸಾದ್ ಹೇಳಿದರು. ದುಷ್ಕೃತ್ಯ ಎಸಗಿದವರನ್ನು ಗುರುತಿಸಿ, ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ತಾರೆಗಾಣ ರೈಲು ನಿಲ್ದಾಣದಲ್ಲಿ ಕಲ್ಲುತೂರಾಟ ನಡೆಸಿದ ಆರೋಪದ ಮೇಲೆ ಮಸೌರ್​ಹಿ ಪಟ್ಟಣದ ಕೋಚಿಂಗ್ ಕೇಂದ್ರಗಳ ಮೇಲೆ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಹಿಂಸಾಚಾರ ಎಸಗಿದ ಆರೋಪದ ಮೇಲೆ ಪೊಲೀಸರು ಜಿಲ್ಲೆಯಲ್ಲಿ 191 ಮಂದಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಹೇಳಿದ್ದಾರೆ.

ತೆಲಂಗಾಣದ ಸಿಕಂದರಾಬಾದ್ ರೈಲು ನಿಲ್ದಾಣದಲ್ಲಿ ನಡೆದ ಪ್ರತಿಭಟನೆ ಮತ್ತು ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ಮಾಡಿದ ಪ್ರಕರಣದ ತನಿಖೆಯನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಹಿಂಸಾಚಾರದಲ್ಲಿ ಹೊರಗಿನವರ ಕೈವಾಡವಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ‘ಪ್ರತಿಭಟನೆಯನ್ನು ಯಾವುದೇ ಬಾಹ್ಯ ಸಮಾಜಘಾತುಕ ಶಕ್ತಿ ಪ್ರೇರೇಪಿಸಿಲ್ಲ. ಸೇನೆಯಲ್ಲಿ ಕೆಲಸ ಬಯಸಿದ್ದ ಆಕಾಂಕ್ಷಿಗಳು ಕೋಚಿಂಗ್ ಕೇಂದ್ರಗಳ ಮುಖ್ಯಸ್ಥರು ನೀಡಿದ ತಪ್ಪು ಮಾಹಿತಿಯಿಂದ ದಾರಿ ತಪ್ಪಿ ಹಿಂಸಾಚಾರಕ್ಕೆ ಇಳಿದಿದ್ದರು ಎಂದು ರೈಲ್ವೆ ರಕ್ಷಣಾ ದಳದ ಎಡಿಜಿಪಿ ರಣದೀಪ್ ಶಾಂಡಿಲ್ಯ ಹೇಳಿದರು.

ಕೋಚಿಂಗ್ ಕೇಂದ್ರವೊಂದರ ನಿರ್ದೇಶಕ ಈ ಪ್ರತಿಭಟನೆಯ ಪ್ರಧಾನ ಸೂತ್ರಧಾರ ಎಂದು ಶಂಕಿಸಲಾಗಿದ್ದು, ಆತನನ್ನು ಪೊಲೀಸರು ಈಗಾಗಲೇ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಸಿಕಂದರಾಬಾದ್ ರೈಲ್ವೆ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಈವರೆಗೆ 46 ಮಂದಿಯನ್ನು ಬಂಧಿಸಿದ್ದಾರೆ. ಪ್ರಸ್ತುತ ಇವರೆಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಇತರರನ್ನು ಗುರುತಿಸುವ ಕೆಲಸ ಆರಂಭವಾಗಿದೆ.

ಉತ್ತರ ಪ್ರದೇಶದಲ್ಲಿ ಈವರೆಗೆ 387 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ 145 ಮಂದಿಯ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 151ನೇ ವಿಧಿಯ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಇತರ 242 ಆರೋಪಿಗಳ ಮೇಲೆ ಸಾರ್ವಜನಿಕ ಆಸ್ತಿಗೆ ಧಕ್ಕೆ ತಂದ ಆರೋಪ ಹೊರಿಸಲಾಗಿದೆ. ಪ್ರತಿಭಟನಾಕಾರರ ವಿರುದ್ಧ ಭಾನುವಾರದವರೆಗೆ ಒಟ್ಟು 34 ಎಫ್​ಐಆರ್​ಗಳನ್ನು ದಾಖಲಿಸಾಗಿದೆ ಎಂದು ಉತ್ತರ ಪ್ರದೇಶ ಪೊಲೀಸ್ ಇಲಾಖೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಪ್ರಶಾಂತ್ ಕುಮಾರ್ ಹೇಳಿದರು.

ಅಗ್ನಿಪಥ್ ಯೋಜನೆಯ ವಿರುದ್ಧ ಹೋರಾಟ ಅರಂಭಿಸಲೆಂದು ಪೊಲೀಸರಿಂದ ಅನುಮತಿ ಪಡೆಯದೇ ಗುಂಪು ಸೇರಿದ್ದ ಆರೋಪದ ಮೇಲೆ 14 ಮಂದಿಯನ್ನು ಗುಜರಾತ್​ನ ಅಹಮದಾಬಾದ್​ನಲ್ಲಿ ಪೊಲೀಸರು ಬಂಧಿಸಿದ್ದಾರೆ. ನಗರದ ಮೆಘಾನಿನಗರ ಪ್ರದೇಶದಲ್ಲಿ ಸುಮಾರು 100 ಮಂದಿ ಗುಂಪುಗೂಡಿದ್ದರು. ಪೊಲೀಸರ ಕ್ರಮವನ್ನು ಗುಜರಾತ್​ನ ಪ್ರತಿಭಟನಾಕಾರರು ವಿರೋಧಿಸಿದ್ದಾರೆ. ‘ನಾವು ಗಾಂಧಿಯವರ ಮಾರ್ಗದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದೆವು. ಆದರೆ ಎರಡು ನಿಮಿಷ ಕುಳಿತುಕೊಳ್ಳಲೂ ನಮಗೆ ಪೊಲೀಸರು ಅವಕಾಶ ನೀಡಲಿಲ್ಲ. ಈ ಯೋಜನೆಯನ್ನು ಹಿಂಪಡೆದಿರುವುದಾಗಿ ಕೇಂದ್ರ ಸರ್ಕಾರ ಘೋಷಿಸುವವರೆಗೆ ಪ್ರತಿಭಟನೆ ನಡೆಸಬೇಕು ಎಂದು ನಾವು ಇಚ್ಛಿಸಿದ್ದೆವು. ಆದರೆ ಅದು ಸಾಧ್ಯವಾಗಲಿಲ್ಲ’ ಎಂದು ಪ್ರತಿಭಟನಾಕಾರರೊಬ್ಬರು ಬೇಸರ ವ್ಯಕ್ತಪಡಿಸಿದರು.

ತೊಕೊನಿಯಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ನಡೆಸಿದ ಸುಮಾರು 400 ಮಂದಿಯನ್ನು ಉತ್ತರಾಖಂಡ ಪೊಲೀಸರು ಬಂಧಿಸಿದ್ದಾರೆ. ಹಿಂಸಾಚಾರಕ್ಕಿಳಿದ ಯುವ ಪ್ರತಿಭಟನಾಕಾರರು, ಪೊಲೀಸರೊಂದಿಗೆ ವಾಗ್ವಾದ ಆರಂಭಿಸಿದರು. ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯುಂಟು ಮಾಡಿದರು ಎಂದು ಪೊಲೀಸರು ಹೇಳಿದ್ದಾರೆ.

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:49 am, Mon, 20 June 22

Follow Us
TV9 Web
TV9 Web

TV9 Kannada

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್