Agnipath Scheme: ಅಗ್ನಿಪಥ್ ಯೋಜನೆ ವಿರೋಧಿಸಿ ಹೆಚ್ಚಿದ ಹಿಂಸಾಚಾರ; ಮತ್ತಷ್ಟು ವಿನಾಯಿತಿ ಘೋಷಿಸಿದ ಸರ್ಕಾರ
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 'ಅಗ್ನಿವೀರ್'ಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ಸರ್ಕಾರ ಇಂದು ಪ್ರಕಟಿಸಿದೆ.
ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ್ (Agnipath) ಹೊಸ ಸೇನಾ ನೇಮಕಾತಿ ಯೋಜನೆಯ ವಿರುದ್ಧದ ಪ್ರತಿಭಟನೆಗಳು ಎಂಟು ರಾಜ್ಯಗಳಿಗೆ ಹರಡಿದೆ. ನಿನ್ನೆಯೇ ಕೇಂದ್ರ ಸರ್ಕಾರ ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದು ಅಗ್ನಿವೀರರ (Agniveer) ಗರಿಷ್ಠ ವಯೋಮಿತಿಯನ್ನು 21ರಿಂದ 23ಕ್ಕೆ ಏರಿಕೆ ಮಾಡಿತ್ತು. ಇದೀಗ ಸರ್ಕಾರ ಅಗ್ನಿಪಥ್ ಯೋಜನೆಯಲ್ಲಿ ಇನ್ನೊಂದಿಷ್ಟು ಬದಲಾವಣೆಗಳನ್ನು ತಂದಿದೆ.
ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ ‘ಅಗ್ನಿವೀರ್’ಗಳಿಗೆ ಶೇ. 10ರಷ್ಟು ಮೀಸಲಾತಿಯನ್ನು ಸರ್ಕಾರ ಇಂದು ಪ್ರಕಟಿಸಿದೆ. ಎರಡು ಅರೆಸೇನಾ ಪಡೆಗಳಲ್ಲಿ ನೇಮಕಾತಿಗಾಗಿ ಅಗ್ನಿವೀರ್‌ಗಳಿಗೆ ನಿಗದಿತ ಗರಿಷ್ಠ ವಯಸ್ಸಿನ ಮಿತಿ ಸಡಿಲಿಕೆಯನ್ನು ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ. ಅಗ್ನಿವೀರ್‌ನ ಮೊದಲ ಬ್ಯಾಚ್ ನಿಗದಿತ ಗರಿಷ್ಠ ವಯಸ್ಸಿನ ಮಿತಿಯನ್ನು ಮೀರಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
The MHA also decides to give 3 years age relaxation beyond the prescribed upper age limit to Agniveers for recruitment in CAPFs & Assam Rifles. Further, for the first batch of Agniveer, the age relaxation will be for 5 years beyond the prescribed upper age limit.
— गृहमंत्री कार्यालय, HMO India (@HMOIndia) June 18, 2022
CAPFಗಳಲ್ಲಿ ಅಗ್ನಿವೀರರಿಗೆ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ ಈ ಘೋಷಣೆ ಕೇಳಿಬಂದಿದೆ. ಹೊಸ ಸೇನಾ ನೇಮಕಾತಿ ಯೋಜನೆಯ ವಯೋಮಿತಿಯನ್ನು 21ರಿಂದ 23ಕ್ಕೆ ಹೆಚ್ಚಿಸುವುದಾಗಿ ಕೇಂದ್ರವು ಈಗಾಗಲೇ ಘೋಷಿಸಿದೆ. ಕಳೆದ ಎರಡು ವರ್ಷಗಳಿಂದ ಯಾವುದೇ ನೇಮಕಾತಿ ನಡೆಯದ ಕಾರಣ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: Agnipath Protest: ಅಗ್ನಿಪಥ್ ಯೋಜನೆಗೆ ವಿರೋಧ; ಬಿಹಾರದಲ್ಲಿ 2 ರೈಲು ಬೋಗಿಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
ಪ್ರಸ್ತುತ, ಅರೆಸೈನಿಕ ಪಡೆಗಳ ಐದು ವಿಭಾಗಗಳಲ್ಲಿ 73,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಗಡಿ ಭದ್ರತಾ ಪಡೆ (BSF), ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP), ಶಾಸ್ತ್ರ ಸೀಮಾ ಬಾಲ್ (SSB), ಮತ್ತು ಕೇಂದ್ರ ಕೈಗಾರಿಕಾ ಭದ್ರತೆ ಫೋರ್ಸ್ (ಸಿಐಎಸ್ಎಫ್)ಯ ಹುದ್ದೆಗಳು ಖಾಲಿ ಇವೆ. ಸಿಎಪಿಎಫ್ ಮತ್ತು ಅಸ್ಸಾಂ ರೈಫಲ್ಸ್‌ನಲ್ಲಿ 73,219 ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಗೃಹ ಸಚಿವಾಲಯದ ಅಂಕಿಅಂಶಗಳು ಸೂಚಿಸುತ್ತವೆ. ಅಲ್ಲದೆ, ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೊಲೀಸ್ ಪಡೆಗಳಲ್ಲಿ 18,124 ಹುದ್ದೆಗಳು ಖಾಲಿ ಇವೆ. (Source)
ತೆಲಂಗಾಣದಲ್ಲಿ ಪ್ರತಿಭಟನೆ ವೇಳೆ ಜನರ ಗುಂಪು ರೈಲುಗಳಿಗೆ ಬೆಂಕಿ ಹಚ್ಚಿ ಆಸ್ತಿಪಾಸ್ತಿಗಳನ್ನು ಹಾನಿಗೊಳಿಸಿದ್ದರಿಂದ ಪೊಲೀಸರ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ. ಉತ್ತರ ಪ್ರದೇಶ, ಹರಿಯಾಣ, ಪಂಜಾಬ್ ಮತ್ತು ಮಧ್ಯಪ್ರದೇಶದಲ್ಲೂ ಹಿಂಸಾಚಾರ ನಡೆದಿದೆ. ಬಿಹಾರದಲ್ಲಿ ಪ್ರತಿಭಟನೆಯ ನಡುವೆಯೇ ಉಪಮುಖ್ಯಮಂತ್ರಿ ರೇಣುದೇವಿ ಅವರ ಮನೆ ಮೇಲೆ ದಾಳಿ ನಡೆದಿದೆ. ಪ್ರತಿಭಟನಕಾರರು ಹೊಸ ನೇಮಕಾತಿ ಯೋಜನೆಯಲ್ಲಿನ ಬದಲಾವಣೆಗಳ ಬಗ್ಗೆ ಅತೃಪ್ತಿ ಹೊಂದಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:34 pm, Sat, 18 June 22