Agnipath Scheme: ಅಗ್ನಿಪಥ್ ಯೋಜನೆ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ದೆಹಲಿ ಹೈಕೋರ್ಟ್‌ಗೆ ವರ್ಗಾವಣೆ
ಅಗ್ನಿಪಥ್ ಯೋಜನೆ ನಿಷೇಧ, ಪರಿಶೀಲನೆ, ರದ್ದು ಕೋರಿ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ ಸಲ್ಲಿಸಲಾಗಿತ್ತು. ಆ ಎಲ್ಲಾ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು (Agnipath Scheme) ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಆ ಎಲ್ಲಾ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ (Delhi High Court) ವರ್ಗಾಯಿಸಿದೆ. ಅಗ್ನಿಪಥ್ ಯೋಜನೆ ನಿಷೇಧ, ಪರಿಶೀಲನೆ, ರದ್ದು ಕೋರಿ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ನಲ್ಲಿ (Supreme Court) ಸಲ್ಲಿಸಲಾಗಿತ್ತು. ಆ ಎಲ್ಲಾ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಿದೆ. ಕೇರಳ, ಪಾಟ್ನಾ, ಪಂಜಾಬ್, ಹರಿಯಾಣ ಮತ್ತು ಉತ್ತರಾಖಂಡದ ಹೈಕೋರ್ಟ್‌ಗಳಲ್ಲಿ ಬಾಕಿ ಇರುವ ಎಲ್ಲಾ ರೀತಿಯ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ ಮಧ್ಯಸ್ಥಿಕೆ ಅರ್ಜಿಗಳಾಗಿ ಸಲ್ಲಿಸಬಹುದು. ಹಾಗೇ, ಅರ್ಜಿದಾರರು ತಮ್ಮ ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ಗೆ ವರ್ಗಾಯಿಸಬಹುದು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.
Supreme Court transfers various pleas challenging ‘Agnipath’ scheme to Delhi High Court
Court directs Registrar General to transfer these matters to Delhi HC. pic.twitter.com/kDYCJuonzb
— ANI (@ANI) July 19, 2022
ಹೈಕೋರ್ಟ್‌ಗಳಲ್ಲಿ ಅಗ್ನಿಪಥ್ ಯೋಜನೆಯ ಕುರಿತು ಸಲ್ಲಿಕೆಯಾಗುವ ಎಲ್ಲ ಹೊಸ ಅರ್ಜಿಗಳಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದೇ ರೀತಿಯ ವಿಷಯಗಳು ಬಾಕಿ ಉಳಿದಿರುವ ಹೈಕೋರ್ಟ್‌ಗಳ ರಿಜಿಸ್ಟ್ರಾರ್‌ಗೆ ಆದೇಶವನ್ನು ತಿಳಿಸುವಂತೆ ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್‌ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಅಗ್ನಿಪಥ್ ಯೋಜನೆ ದೇಶದಲ್ಲಿ ತರಬೇತಿ ಪಡೆದ ಉಗ್ರರನ್ನು ಹೊಂದುವಂತೆ ಮಾಡುತ್ತದೆ: ರಾಜಸ್ಥಾನದ ಸಚಿವ
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿವೈ ಚಂದ್ರಚೂಡ ಮತ್ತು ಎಎಸ್ ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿದೆ. ಜುಲೈ 4ರಂದು ವಕೀಲರಾದ ಕುಮುದ್ ಲತಾ ಅವರು ಹರ್ಷ್ ಅಜಯ್ ಸಿಂಗ್ ಪರವಾಗಿ ಸಲ್ಲಿಸಿದ್ದ ಅರ್ಜಿಯನ್ನು ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇನ್ನೊಬ್ಬರು ಅರ್ಜಿದಾರರಾದ ಎಂ.ಎಲ್. ಶರ್ಮಾ ಅಗ್ನಿಪಥ್ ಯೋಜನೆಯ ಸಿಂಧುತ್ವವನ್ನು ಪ್ರಶ್ನಿಸಿದ್ದರು.
Published On - 11:51 am, Tue, 19 July 22