ಆಗ್ರಾ ರಸ್ತೆ ಅಪಘಾತ: ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಕಾರು, 5 ಸಾವು, 3 ಜನರಿಗೆ ಗಾಯ
ಆಗ್ರಾದ ನಾಗ್ಲಾ ಬುಧಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಟಾಟಾ ನೆಕ್ಸಾನ್ ಕಾರು ನಿಯಂತ್ರಣ ತಪ್ಪಿ ಬೈಕ್, ಡಿವೈಡರ್ ಹಾಗೂ ರಸ್ತೆಬದಿಯಲ್ಲಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ಅಪಘಾತಕ್ಕೆ ಕಾರಣನಾದ ಚಾಲಕನನ್ನು ಬಂಧಿಸಲಾಗಿದ್ದು, ಆತ ಮದ್ಯಪಾನ ಮಾಡಿದ್ದ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆಗ್ರಾ, ಅ.25: ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಸಾವನ್ನಪ್ಪಿದ್ದು, ಮೂರು ಜನ ಗಾಯಗೊಂಡಿದ್ದಾರೆ. ಈ ಘಟನೆ ಶುಕ್ರವಾರ ರಾತ್ರಿ ಉತ್ತರ ಪ್ರದೇಶದ (Uttar Pradesh) ಆಗ್ರಾದ ನಾಗ್ಲಾ ಬುಧಿ ಪ್ರದೇಶದ ಬಳಿ ನಡೆದಿದೆ. ಪೊಲೀಸ್ ಅಧಿಕಾರಿಗಳು ತಿಳಿಸಿರುವಂತೆ ಟಾಟಾ ನೆಕ್ಸಾನ್ ಕಾರು ಮೊದಲು ಬೈಕ್‌ಗೆ ಡಿಕ್ಕಿ ಹೊಡೆದು ನಂತರ ಡಿವೈಡರ್ಗೆ ಡಿಕ್ಕಿ ಹೊಡದು ರಸ್ತೆ ಪಕ್ಕಾದಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಎಂದು ಹೇಳಿದ್ದಾರೆ.
ಮೃತರನ್ನು ಬಬ್ಲಿ (33), ಭಾನು ಪ್ರತಾಪ್ (25), ಕಮಲ್ (23), ಕೃಷ್ಣ (20) ಮತ್ತು ಬಂತೇಶ್ (21) ಎಂದು ಗುರುತಿಸಲಾಗಿದೆ . ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಯೊಬ್ಬರು ಘಟನೆಯ ಬಗ್ಗೆ ವಿವರಿಸಿದ್ದಾರೆ. ತಮ್ಮ ಅಂಗಡಿಯಲ್ಲಿ ಕುಳಿತಿದ್ದಾಗ ವೇಗವಾಗಿ ಬರುತ್ತಿದ್ದ ಕಾರನ್ನು ನೋಡಿದೆ. ನಂತರ ಒಂದು ದೊಡ್ಡ ಶಬ್ದ ಬಂತು. ಹತ್ತಿರ ಹೋಗಿ ನೋಡಿದಾಗ ಕಾರಿನ ಕೆಳಗೆ ಹಲವಾರು ಜನರು ಸಿಲುಕಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಿ ಆಸ್ಪತ್ರೆ ವೈದ್ಯೆ ಆತ್ಮಹತ್ಯೆ ಕೇಸ್ಗೆ ಟ್ವಿಸ್ಟ್: ನಾಲ್ಕು ಪುಟಗಳ ಡೆತ್ನೋಟ್ನಲ್ಲಿ ಸಂಸದನ ಹೆಸರು!
ಇನ್ನು ಕಾರಿನ ಕೆಳಗೆ ಸಿಲುಕಿಕೊಂಡಿದ ಜನರನ್ನು ಹೊರತೆಗೆದು, ಹಾಗೂ ಗಾಯಗಳ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ಕೆರದುಕೊಂಡು ಹೋಗಲಾಗಿದೆ. ಅಪಘಾತಕ್ಕೆ ಕಾರಣನಾಗಿದ್ದ ಕಾರು ಚಾಲಕನ್ನು ಪೊಲೀಸರು ಬಂಧಿಸಲು ಸ್ಥಳಕ್ಕೆ ಬಂದಿದ್ದಾರೆ. ಈ ವೇಳೆ ಅಲ್ಲಿದ್ದ ಕೆಲವು ಜನ ಚಾಲಕನಿಗೆ ಥಳಿಸಿದ್ದಾರೆ. ಅಲ್ಲಿಯ ಜನ ಹೇಳುವ ಪ್ರಕಾರ ಕಾರು ಚಾಲಕ ವಿಪರೀತ ಕುಡಿದ್ದ ಎಂದು ಹೇಳಿದ್ದಾರೆ. ಆದರೆ ಈ ಬಗ್ಗೆ ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.
ದೇಶ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




