AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ!

ಆಗ್ರಾದಲ್ಲಿ ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯನ್ನು ಕೊಂದು, ಆಕೆಯ ದೇಹವನ್ನು ತುಂಡು ಮಾಡಿ ಎಸೆದ ಘಟನೆ ನಡೆದಿದೆ. ಮೃತ ಮಹಿಳೆ ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಜೊತೆ ಆಕೆ ಸಂಬಂಧ ಹೊಂದಿದ್ದರು. ಅವರಿಬ್ಬರೂ ಪ್ರೀತಿ ಮಾಡುತ್ತಿದ್ದರೂ ಆ ಮಹಿಳೆ ಆತನನ್ನು ಮದುವೆಯಾಗಲು ಸಿದ್ಧವಿರಲಿಲ್ಲ.

ಪ್ರೇಯಸಿಯನ್ನು ಕೊಂದು ಆಕೆಯ ತಲೆ ಕತ್ತರಿಸಿ ಕಾಲುವೆಗೆ ಎಸೆದ ಪ್ರೇಮಿ!
Representative Image
ಸುಷ್ಮಾ ಚಕ್ರೆ
|

Updated on:Jan 27, 2026 | 10:56 PM

Share

ಆಗ್ರಾ, ಜನವರಿ 27: ಉತ್ತರ ಪ್ರದೇಶದ ಆಗ್ರಾದಲ್ಲಿ 30 ವರ್ಷದ ವ್ಯಕ್ತಿಯೊಬ್ಬ ತನ್ನ ಪ್ರಿಯತಮೆಯನ್ನು ಕೊಂದು, ಆಕೆಯ ದೇಹವನ್ನು ತುಂಡರಿಸಿ, ಆಕೆಯ ತಲೆಯನ್ನು ಪ್ಯಾಕೆಟ್‌ನಲ್ಲಿ ಹಾಕಿ ಕಾಲುವೆಗೆ ಎಸೆದಿದ್ದಾನೆ. ಈ ಘಟನೆ ದೇಶವನ್ನು ಬೆಚ್ಚಿ ಬೀಳಿಸಿದೆ. ಈಗಾಗಲೇ ಕೊಲೆಗಾರನನ್ನು (Killer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತ ಮಹಿಳೆಯನ್ನು ಮಿಂಕಿ ಶರ್ಮಾ ಎಂದು ಗುರುತಿಸಲಾಗಿದೆ. ಅವರು ಆಗ್ರಾದಲ್ಲಿರುವ ಖಾಸಗಿ ಕಂಪನಿಯೊಂದರ ಕಚೇರಿಯಲ್ಲಿ ಹೆಚ್​ಆರ್​ ಆಗಿ ಕೆಲಸ ಮಾಡುತ್ತಿದ್ದರು. ಅದೇ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ವಿನಯ್ ಜೊತೆ ಸಂಬಂಧ ಹೊಂದಿದ್ದರು. ಅವರಿಬ್ಬರ ನಡುವೆ ಮದುವೆಯ ವಿಷಯಕ್ಕೆ ಜಗಳ ನಡೆಯುತ್ತಿತ್ತು. ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ. ಆದರೆ ಆಕೆ ಅದಕ್ಕೆ ನಿರಾಕರಿಸಿದ್ದರಿಂದ ಅವರ ನಡುವೆ ಜಗಳ ಉಂಟಾಗಿದೆ. ಇದೇ ಕೋಪದಿಂದ ಆತ ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಇಬ್ಬರೂ ಸಾಯೋಣ ಎಂದು ಯುವತಿಯನ್ನು ನಂಬಿಸಿ ಕೊಂದ ಹಂತಕ!

ಜಗಳದ ನಂತರ ತೆಂಗಿನಕಾಯಿ ಕತ್ತರಿಸಲು ಬಳಸುವ ಚಾಕುವಿನಿಂದ ವಿನಯ್ ಪದೇ ಪದೇ ಆಕೆಯ ಮೇಲೆ ಹಲ್ಲೆ ಮಾಡಿ, ಆಕೆಯ ಕುತ್ತಿಗೆಯನ್ನು ಕತ್ತರಿಸಿದ್ದಾನೆ. ನಂತರ ಅವನು ಆಕೆಯ ದೇಹವನ್ನು ತುಂಡು ಮಾಡಿ, ಪ್ಲಾಸ್ಟಿಕ್ ಚೀಲದಲ್ಲಿ ಪ್ಯಾಕ್ ಮಾಡಿ ಪಾರ್ಸೆಲ್ ಟೇಪ್‌ನಿಂದ ಮುಚ್ಚಿದ್ದಾನೆ. ಆಕೆಯ ತಲೆಯನ್ನು ಬೇರೆ ಚೀಲದಲ್ಲಿ ಹಾಕಿ ಎಸೆದಿದ್ದಾನೆ. ಆ ತಲೆ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಅದಕ್ಕಾಗಿ ಹುಡುಕಾಟ ನಡೆಯುತ್ತಿದೆ.

ಜನವರಿ 24ರ ರಾತ್ರಿ ಕೊಲೆಯ ನಂತರ, ಅವನು ದೇಹವನ್ನು ಚೀಲದಲ್ಲಿ ಹಾಕಿ ಯಮುನಾ ನದಿಗೆ ಎಸೆಯಲು ಹೊರಟಿದ್ದನು. ಆದರೆ ಅದನ್ನು ಸೇತುವೆಯ ಮೇಲೆ ಬಿಟ್ಟು ಪರಾರಿಯಾಗಿದ್ದನು. ತುಂಡರಿಸಿದ ತಲೆಯನ್ನು ಕಪ್ಪು ಪ್ಯಾಕೆಟ್‌ನಲ್ಲಿ ಇರಿಸಲಾಗಿತ್ತು. ಅದನ್ನು ಕಾಲುವೆಯಲ್ಲಿ ಎಸೆದಿದ್ದ. ಅದನ್ನು ಪತ್ತೆಹಚ್ಚಲು ಡೈವರ್‌ಗಳಿಗೆ ಸೂಚಿಸಲಾಗಿದೆ. ಅಪರಾಧಕ್ಕೆ ಬಳಸಲಾಗಿದೆ ಎನ್ನಲಾದ ಚಾಕು, ಸ್ಕೂಟರ್ ಮತ್ತು ಬಟ್ಟೆಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:56 pm, Tue, 27 January 26

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!