Video: ಬಾಯ್‌ಫ್ರೆಂಡ್‌ ಜತೆ ಜಗಳ, ಪ್ರಿಯಕರನ್ನು ಹೆದರಿಸಲು  ರೈಲ್ವೆ  ಟ್ರ್ಯಾಕ್‌ ಮೇಲೆ ಜಿಗಿದು ಪ್ರಾಣ ಕಳೆದುಕೊಂಡ ಮಹಿಳೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಇಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದಲ್ಲಿ ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು ಆತನನ್ನು ಹೆದರಿಸಲುವ ಸಲುವಾಗಿ ರೈಲ್ವೆ ಟ್ರ್ಯಾಕ್‌ ಮೇಲೆ ಜಿಗಿದು, ದುರಾದೃಷ್ಟವಶಾತ್‌ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಆಘಾತಕಾರಿ ಘಟನೆಯ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

Video: ಬಾಯ್‌ಫ್ರೆಂಡ್‌ ಜತೆ ಜಗಳ, ಪ್ರಿಯಕರನ್ನು ಹೆದರಿಸಲು  ರೈಲ್ವೆ  ಟ್ರ್ಯಾಕ್‌ ಮೇಲೆ ಜಿಗಿದು ಪ್ರಾಣ ಕಳೆದುಕೊಂಡ ಮಹಿಳೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:May 29, 2024 | 11:59 AM

ಪ್ರೇಮಿಗಳ ನಡುವೆ ಸಣ್ಣಪುಟ್ಟ ಜಗಳ ಇದ್ದಿದ್ದೆ. ಕೆಲವೊಬ್ಬರ ಜಗಳ, ಮನಸ್ಥಾಪಗಳು ತಾರಕಕ್ಕೇರಿ ಅದು ಸಾವಿನಲ್ಲಿ ಕೊನೆಯಾಗುವುದು ಕೂಡಾ ಉಂಟು. ಇದೀಗ ಅಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ನಾನು ರೈಲಿನಡಿ ಬಿದ್ದು ಸಾಯುತ್ತೇನೆ ಎಂದು ಪ್ರಿಯಕರನನ್ನು ಹೆದರಿಸಲು ಹೋಗಿ, ದುರಾದೃಷ್ಟವಶಾತ್‌ ರೈಲಿನಡಿ ಸಿಲುಕಿ ತನ್ನ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿನ ಆಗ್ರಾದ ರಾಜಾ ಕಿ ಮಂಡಿ ರೈಲು ನಿಲ್ದಾಣದಲ್ಲಿ ನಡೆದಿದ್ದು, ಪ್ರಿಯಕರನೊಂದಿಗೆ ಜಗಳವಾಡಿದ ಮಹಿಳೆಯೊಬ್ಬರು, ಸಿಟ್ಟಿನಿಂದ ರೈಲ್ವೆ ಹಳಿಗೆ ಹಾರಿ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವನ್ನಪ್ಪಿದ ಮಹಿಳೆಯನ್ನು  ಲೋಹಾ ಮಂಡಿಯ ಭಾರತಿ ಧರ್ಮೇಂದ್ರ ಎಂದು ಗುರುತಿಸಲಾಗಿದೆ. ಭಾರತಿ ಅವರಿಗೆ ಪೂನಂ ಮತ್ತು ಕೃಷ್ಣ ಎಂಬ ಇಬ್ಬರು ಮಕ್ಕಳಿದ್ದು, ಕೆಲ ವರ್ಷಗಳ ಹಿಂದೆ ಆಕೆಯ ಪತಿ ಧರ್ಮೇಂದ ಮೃತಪಟ್ಟಿದ್ದರು. ಕಳೆದ ಎರಡು ವರ್ಷಗಳಿಂದ ಭಾರತಿ ತನ್ನ ಪ್ರೇಮಿ ಕಿಶೋರ್‌ ಜೊತೆ ಲಿವ್‌ ಇನ್‌ ರಿಲೇಶನ್‌ಶಿಪ್‌ನಲ್ಲಿದ್ದರು. ಕುಡಿತದ ವಿಷಯದಲ್ಲಿ ಇಬ್ಬರ ನಡುವೆ ಜಗಳ ಏರ್ಪಟ್ಟಿದ್ದು, ಆಕೆ  ರೈಲ್ವೆ ನಿಲ್ದಾಣದ ಬಳಿ ಬಂದು ತಾನು ಸಾಯುವುದಾಗಿ ಪ್ರಿಯಕರನನ್ನು ಹೆದರಿಸುತ್ತಾರೆ. ನಂತರ ರೈಲ್ವೆ ಹಳಿಯ ಮೇಲೆ ಜಿಗಿದಿದ್ದಾರೆ. ಅಷ್ಟರಲ್ಲಿ ವೇಗವಾಗಿ ಬಂದ ಕೇರಳ ಎಕ್ಸ್‌ಪ್ರೆಸ್‌ ರೈಲು ಆಕೆಗೆ ಡಿಕ್ಕಿ ಹೊಡೆದಿದೆ, ಈ ಅಪಘಾತ ಸಂಭವಿಸುತ್ತಿದ್ದಂತೆ ಪ್ರಿಯಕರ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಈ ದೃಶ್ಯಾವಳಿ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ರೈಲಿನಡಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಭಾರತಿ ಅವರನ್ನು ಕೂಡಲೇ ಸರೋಜಿನಿ ನಾಯ್ಡು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಮಗುವಿನ ಮೇಲೆ ಅಟ್ಯಾಕ್‌ ಮಾಡಲು ಬಂದ ದೈತ್ಯ ಹದ್ದು, ಸ್ವಲ್ಪದರಲ್ಲಿ ಪಾರಾದ ಕಂದಮ್ಮ

ಈ ಕುರಿತ ವಿಡಿಯೋವನ್ನು ಹರಿಕಾಂತ್‌ ಶರ್ಮಾ (@harikanthsharmaG) ಎಂಬವರು ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಭೀಕರ ಅಪಘಾತದ ದೃಶ್ಯವನ್ನು ಕಂಡು ನೆಟ್ಟಿಗರು ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:03 am, Wed, 29 May 24

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!