ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ತೀರ್ಪು: ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರಿಗೆ ಗೃಹ ಬಂಧನ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿವಾದಾತ್ಮಕ ನಿರ್ಧಾರದ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಪಿಡಿಪಿಯ ಮುಖ್ಯಸ್ಥೆ ಮೆಹಬೂಬಾ ಮುಫ್ತಿ(Mehbooba Mufti) ಸೇರಿದಂತೆ ಹಲವು ನಾಯಕರನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ತೀರ್ಪು: ಮೆಹಬೂಬಾ ಮುಫ್ತಿ ಸೇರಿದಂತೆ ಹಲವು ನಾಯಕರಿಗೆ ಗೃಹ ಬಂಧನ
ಮೆಹಬೂಬಾ ಮುಫ್ತಿ
Follow us
ನಯನಾ ರಾಜೀವ್
|

Updated on:Dec 11, 2023 | 10:57 AM

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ವಿವಾದಾತ್ಮಕ ನಿರ್ಧಾರದ ಕುರಿತು ಸುಪ್ರೀಂಕೋರ್ಟ್​ ಇಂದು ಮಹತ್ವದ ತೀರ್ಪು ಪ್ರಕಟಿಸಲಿದ್ದು, ಈ ಹಿನ್ನೆಲೆಯಲ್ಲಿ ಪಿಡಿಪಿಯ ಮುಖ್ಯಸ್ಥೆ ಮೆಹಬೂಬಾ ಮುಫ್ತಿ(Mehbooba Mufti) ಸೇರಿದಂತೆ ಹಲವು ನಾಯಕರನ್ನು ಗೃಹಬಂಧನದಲ್ಲಿರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಒಮರ್ ಅಬ್ದುಲ್ಲಾ ಅವರನ್ನು ಕೂಡ ಗೃಹಬಂಧನದಲ್ಲಿಡಲಾಗಿದೆ.

ಕಾಶ್ಮೀರ ಕಣಿವೆಯಲ್ಲಿ ಶಾಂತಿ ಕಾಪಾಡಲು ಪೊಲೀಸ್ ಇಲಾಖೆ ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದೆ. ಹಿಂದಿನ ಜಮ್ಮು ಮತ್ತು ಕಾಶ್ಮೀರಕ್ಕೆ 270ನೇ ವಿಧಿ ಅಡಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ 2019ರ ಆಗಸ್ಟ್​ 5 ರಂದು ರದ್ದುಪಡಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಸಂವಿಧಾನ ಪೀಠವು 16 ದಿನಗಳ ಕಾಲ ವಾದ, ಪ್ರತಿವಾದ ಆಲಿಸಿ ಸೆ.5 ರಂದು ತೀರ್ಪು ಕಾಯ್ದಿರಿಸಿತ್ತು.

ಕೇಂದ್ರ ಸರ್ಕಾರದ ನಿರ್ಧಾರ ಸಮರ್ಥಿಸಿ ಅಟಾರ್ನಿ ಜನರಲ್ ಆರ್​ ವೆಂಕಟರಮಣಿ, ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಹಿರಿಯ ವಕೀಲರಾದ ಹರೀಶ್ ಸಾಳ್ವೆ, ರಾಕೇಶ್​ ದ್ವಿವೇದಿ, ವಿ. ಗಿರಿ ಮತ್ತು ಇತರರು ವಾದ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:44 am, Mon, 11 December 23