ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ; ಕರ್ನಾಟಕದ ನಾಯಕರು ಭಾಗಿ

| Updated By: ರಶ್ಮಿ ಕಲ್ಲಕಟ್ಟ

Updated on: Dec 12, 2022 | 6:53 PM

Mallikarjun kharge ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ,ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮೊದಲಾದವರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಮಹತ್ವದ ಸಭೆ; ಕರ್ನಾಟಕದ ನಾಯಕರು ಭಾಗಿ
ಸಭೆಯಲ್ಲಿ ಮಲ್ಲಿಕಾರ್ಜುನ ಖರ್ಗೆ
Follow us on

ದೆಹಲಿಯ ಎಐಸಿಸಿ (AICC) ಕಚೇರಿಯಲ್ಲಿ ಮಹತ್ವದ ಸಭೆ ಆರಂಭವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ರಾಜ್ಯ ಕಾಂಗ್ರೆಸ್​​ ಉಸ್ತುವಾರಿ ರಣದೀಪ್​ ಸಿಂಗ್ ಸುರ್ಜೇವಾಲ,ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವನಾರಾಯಣ, ಈಶ್ವರ್ ಖಂಡ್ರೆ, ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ, ಸಲೀಂ ಅಹ್ಮದ್, ಕೆ.ಹೆಚ್.ಮುನಿಯಪ್ಪ, ದಿನೇಶ್ ಗುಂಡೂರಾವ್, ಕೆ.ಜೆ.ಜಾರ್ಜ್,ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಸಭೆಯಲ್ಲಿ ಭಾಗಿಾಗಿದ್ದಾರೆ.

ಎಐಸಿಸಿ ಕಚೇರಿಯಲ್ಲಿ ಅಧ್ಯಕ್ಷರಾದ  ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರ ಸಭೆ ನಡೆಸಲಾಯಿತು. ಪಕ್ಷದ ಬಲವರ್ಧನೆ ಮತ್ತು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಮತ್ತಿತರ ವಿಚಾರವಾಗಿ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು ಎಂದು ಗದಗ ಶಾಸಕ ಎಚ್ ಕೆ ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯಿಂದ ಬುಲಾವ್, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ದೆಹಲಿಗೆ ದೌಡು!

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:19 pm, Mon, 12 December 22