AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ತೊರೆದ ಕೇರಳದ ಹಿರಿಯ ನಾಯಕ ಪಿ.ಸಿ.ಚಾಕೊ ಎನ್​ಸಿಪಿ ಪಕ್ಷಕ್ಕೆ ಸೇರ್ಪಡೆ

Kerala Assembly Elections 2021: ಕಾಂಗ್ರೆಸ್ ಪಕ್ಷ ತೊರೆದು ಎನ್​ಸಿಪಿ ಪಕ್ಷ ಸೇರಿರುವ ಪಿ.ಸಿ ಚಾಕೊ ಎಲ್​​ಡಿಎಫ್​ನ ಅಂಗವಾಗಿ ಕೆಲಸ ಮಾಡಲಿದ್ದೇನೆ ಎಂದು ಸಿಪಿಎಂ ನಾಯಕ ಸೀತಾರಾಂ ಯೆಚೂರಿ ಜತೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ತೊರೆದ ಕೇರಳದ ಹಿರಿಯ ನಾಯಕ ಪಿ.ಸಿ.ಚಾಕೊ ಎನ್​ಸಿಪಿ ಪಕ್ಷಕ್ಕೆ ಸೇರ್ಪಡೆ
ಸುದ್ದಿಗೋಷ್ಠಿಯಲ್ಲಿ ಪಿ.ಸಿ. ಚಾಕೊ- ಸೀತಾರಾಂ ಯೆಚೂರಿ
ರಶ್ಮಿ ಕಲ್ಲಕಟ್ಟ
|

Updated on: Mar 16, 2021 | 7:27 PM

Share

ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಕೇರಳದ ಹಿರಿಯ ನಾಯಕ ಪಿ.ಸಿ.ಚಾಕೊ ಎನ್​ಸಿಪಿಗೆ ಸೇರಿದ್ದಾರೆ. ಕಾಂಗ್ರೆಸ್ ನಂತೆಯೇ ಇರುವ ಎನ್​ಸಿಪಿ ಪಕ್ಷಕ್ಕೆ ನಾನು ಸೇರುತ್ತೇನೆ. ಬಿಜೆಪಿ, ಕಮ್ಯೂನಿಸ್ಟ್ ಪಕ್ಷಕ್ಕೆ ಸೇರಲು ನನಗೆ ಇಷ್ಟವಿಲ್ಲ ಎಂದು ಚಾಕೊ ಹೇಳಿದ್ದಾರೆ.  ಕಾಂಗ್ರೆಸ್ ಪಕ್ಷದಲ್ಲಿ ಗುಂಪುಗಳು ಭಿನ್ನಾಭಿಪ್ರಾಯಗಳನ್ನು ಹೊಂದಿದೆ. ಕೇರಳದಲ್ಲಿ ಕಾಂಗ್ರೆಸ್ ಪಕ್ಷವೆಂಬುದು ಇಲ್ಲ. ಉಮ್ಮನ್ ಚಾಂಡಿ ಮತ್ತು ರಮೇಶ್ ಚೆನ್ನಿತ್ತಲ ಅವರ ನೇತೃತ್ವದಲ್ಲಿರುವ ಗುಂಪುಗಳಷ್ಟೇ ಅಲ್ಲಿರುವುದು ಎಂದು ಚಾಕೊ ಹೇಳಿದ್ದರು. ಕೆ.ಕರಣಾಕರನ್ ಅವರ ಕಾಲದಲ್ಲಿಯೂ ಗುಂಪುಗಳಿದ್ದರೂ ಈಗಿನಂತೆ ಇರಲಿಲ್ಲ ಎಂದಿದ್ದಾರೆ ಚಾಕೊ.

ಗುಂಪು ಆಧರಿಸಿ ಸೀಟು ಹಂಚಿಕೆ ವಿಷಯದಲ್ಲಿ ತನಗೆ ಅಸಮಾಧಾನವಿದೆ ಎಂದು ಬಹಿರಂಗವಾಗಿಯೇ ಪಿ.ಸಿ.ಚಾಕೊ ಹೇಳಿಕೊಂಡಿದ್ದರು. ಮಾರ್ಚ್  10ರಂದು ಕಾಂಗ್ರೆಸ್  ಪಕ್ಷಕ್ಕೆ ರಾಜೀನಾಮೆ ಕೊಟ್ಟ ನಂತರ ಮಾತನಾಡಿದ್ದ ಅವರು, ಕೇರಳದಲ್ಲಿ ನಿರ್ಣಾಯಕವಾದ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಧಿಕಾರಕ್ಕೇರಬೇಕು ಎಂದು ಜನರು ಬಯಸುತ್ತಿದ್ದಾರೆ. ಆದರೆ ಕಾಂಗ್ರೆಸ್ ನೇತಾರರ ನಡುವೆ ಗುಂಪುಗಾರಿಕೆ ನಡೆಯುತ್ತಿದೆ. ಈ ಗುಂಪುಗಾರಿಕೆ ನಿಲ್ಲಬೇಕು ಎಂದು ನಾನು ಹೈಕಮಾಂಡ್ ಜತೆ ವಾಗ್ವಾದ ಮಾಡಿದ್ದೇನೆ. ಆದರೆ ಹೈಕಮಾಂಡ್ ಕೂಡಾ ಈ ಎರಡು ಗುಂಪುಗಳು ಮುಂದಿರಿಸಿದ ಪ್ರಸ್ತಾವಗಳನ್ನೇ ಸ್ವೀಕರಿಸಿದೆ ಎಂದು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹೆಸರು ಉಲ್ಲೇಖಿಸದೆಯೇ  ಆರೋಪಿಸಿದ್ದರು.

ಉಮ್ಮನ್ ಚಾಂಡಿ, ರಮೇಶ್ ಚೆನ್ನಿತ್ತಲ ಮತ್ತು ಅವರಿಗೆ ಬೆಂಬಲ ನೀಡುವ ಗುಂಪಿನ ನಾಯಕರ ಇಷ್ಟಾನುಸಾರ ಸೀಟು ಹಂಚಿಕೆ ನಡೆದಿದೆ. ಈ ಎರಡೂ ಗುಂಪುಗಳನ್ನು ಜತೆಯಾಗಿ ಕರೆದೊಯ್ಯುವ ಕೆಲಸವನ್ನಷ್ಟೇ ಕೆಪಿಸಿಸಿ ಮತ್ತು ಹೈಕಮಾಂಡ್  ಮಾಡುತ್ತಿರುವುದು. ರಾಷ್ಟ್ರೀಯ ಮಟ್ಟದಲ್ಲಿಯೂ ಕಾಂಗ್ರೆಸ್ ಬೆಳೆಯುವುದಿಲ್ಲ ಎಂದು ಪಿ.ಸಿ.ಚಾಕೊ  ಹೇಳಿದ್ದಾರೆ.  74ರ ಹರೆಯದ ಚಾಕೊ ಕೇರಳದ ತ್ರಿಶ್ಶೂರ್ ಚುನಾವಣಾ ಕ್ಷೇತ್ರದ ಮಾಜಿ ಸಂಸದರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಇವರು ಕಾರ್ಯ ನಿರ್ವಹಿಸಿದ್ದರು.

ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ಚಾಕೊ ಅವರು ಪಕ್ಷ ತೊರೆದಿರುವುದು ಕಾಂಗ್ರೆಸ್ ಪಕ್ಷಕ್ಕೆ ಹೊಡೆತ ನೀಡಿದೆ. ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯೇ ಕೇರಳದಲ್ಲಿ ಸ್ಟಾರ್ ಪ್ರಚಾರಕರಾಗಿರುವಾಗ ಕಾಂಗ್ರೆಸ್ ಪಕ್ಷದಲ್ಲಿನ ಹಿರಿಯ ನಾಯಕ ಹೊರನಡೆದಿರುವುದು ಪಕ್ಷಕ್ಕೆ ಮುಜುಗರವುಂಟು ಮಾಡಿದೆ. ಗಾಂಧಿ ಕುಟುಂಬಕ್ಕೆ ನಿಷ್ಠರಾಗಿರುವ ನಾಯಕರ ಪೈಕಿ ಚಾಕೊ ಕೂಡಾ ಒಬ್ಬರಾಗಿದ್ದಾರೆ.

ಯೆಚೂರಿ ಜತೆ ಸುದ್ದಿಗೋಷ್ಠಿ ಕಾಂಗ್ರೆಸ್ ಪಕ್ಷ ತೊರೆದು ಎನ್​ಸಿಪಿ ಪಕ್ಷ ಸೇರಿರುವ ಚಾಕೊ ಎಲ್​​ಡಿಎಫ್​ನ ಅಂಗವಾಗಿ ಕೆಲಸ ಮಾಡಲಿದ್ದೇನೆ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಜತೆ ಮಾತುಕತೆ ನಡೆಸಿದ ನಂತರ ಇಬ್ಬರೂ ಜಂಟಿಯಾಗಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಮಂಗಳವಾರ ಎನ್​ಸಿಪಿ ರಾಷ್ಟ್ರೀಯ ಅಧ್ಯಕ್ಷ ಶರತ್ ಪವಾರ್ ಜತೆ ಮಾತುಕತೆ ನಡೆಸಿದ್ದ ಚಾಕೊ ಸಂಜೆ ಯೆಚೂರಿ ಅವರನ್ನು ಭೇಟಿ ಮಾಡಿದ್ದರು.

ಚೆಂಙನ್ನೂರ್​ನಲ್ಲಿ ಬಿಜೆಪಿ ಮತ್ತು ಸಿಪಿಎಂ ಡೀಲ್ ಮಾಡಿಕೊಂಡಿದೆ ಎಂದು ಆರ್ ಎಸ್ಎಸ್ ನಾಯಕ ಆರ್. ಬಾಲಶಂಕರ್ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಯೆಚೂರಿ ಅವರಲ್ಲಿ ಕೇಳಿದಾಗ,ಬಿಜೆಪಿ ಜತೆ ಯಾರು ಡೀಲ್ ಮಾಡುತ್ತಿದ್ದಾರೆ , ಯಾರು ಬಿಜೆಪಿಗೆ ಹೋಗುತ್ತಿದ್ದಾರೆ ಎಂಬುದು ಎಲ್ಲರಿಗೂ ಗೊತ್ತಿದೆ. ಬಿಜೆಪಿಗೆ ಸೇರಿದ ಕಾಂಗ್ರೆಸ್ ನಾಯಕರನ ಬಗ್ಗೆ ಎಣಿಕೆ ಮಾಡಿ ನೋಡಿ. ಇಲ್ಲಿ ಏನು ನಡೆಯುತ್ತಿದೆ ಎಂಬುದು ಜನರಿಗೆ ತಿಳಿದಿದೆ ಎಂದು ಉತ್ತರಿಸಿದ್ದಾರೆ.

ಇದನ್ನೂ ಓದಿ:  ಕಾಂಗ್ರೆಸ್ ಪಕ್ಷ ತನ್ನನ್ನು ಕಡೆಗಣಿಸಿದೆ ಎಂದು ಆರೋಪಿಸಿ ಪಕ್ಷ ತೊರೆದ ಕೇರಳದ ಹಿರಿಯ ನಾಯಕ ಪಿ.ಸಿ.ಚಾಕೊ

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು