Sign In

By signing in or creating an account, you agree with Associated Broadcasting Company's Terms & Conditions and Privacy Policy.

Kirit Somaiya ಕೊಲ್ಹಾಪುರ ಭೇಟಿಗೆ ಮುನ್ನ ಕಿರೀಟ್ ಸೋಮಯ್ಯ ಪೊಲೀಸ್ ವಶಕ್ಕೆ; ಠಾಕ್ರೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಕೆಲ ದಿನಗಳ ಹಿಂದೆ ಸೋಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕೊಲ್ಹಾಪುರದ ಕಾಗಲ್‌ನ ಶಾಸಕ ಮುಶ್ರೀಫ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಸಂಬಂಧಿಕರ ಹೆಸರಿನಲ್ಲಿ "ಬೇನಾಮಿ" ಘಟಕಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಆದಾಗ್ಯೂ, ಮುಶ್ರಿಫ್ ಈ ಆರೋಪಗಳನ್ನು ತಳ್ಳಿಹಾಕಿದರು

Kirit Somaiya ಕೊಲ್ಹಾಪುರ ಭೇಟಿಗೆ ಮುನ್ನ ಕಿರೀಟ್ ಸೋಮಯ್ಯ ಪೊಲೀಸ್ ವಶಕ್ಕೆ; ಠಾಕ್ರೆ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಕಿರೀಟ್ ಸೋಮಯ್ಯ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Sep 20, 2021 | 1:05 PM

ಮುಂಬೈ: ಭಾರತೀಯ ಜನತಾ ಪಕ್ಷದ (BJP) ಹಿರಿಯ ನಾಯಕ ಮತ್ತು ಮಾಜಿ ಲೋಕಸಭಾ ಸದಸ್ಯ ಕಿರೀಟ್ ಸೋಮಯ್ಯ (Kirit Somaiya) ಅವರನ್ನು ಸೋಮವಾರ ಮುಂಜಾನೆ ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಕರಾಡ್ ರೈಲ್ವೇ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ಅಲ್ಲಿಂದ ಸರ್ಕ್ಯೂಟ್ ಹೌಸ್‌ಗೆ ಕರೆದೊಯ್ಯಲಾಯಿತು. ಸೋಮಯ್ಯ ಕೊಲ್ಹಾಪುರಕ್ಕೆ ಹೋಗುತ್ತಿದ್ದರು.  ಮಹಾರಾಷ್ಟ್ರ ಸಚಿವ ಹಸನ್ ಮುಶ್ರಿಫ್ ಅವರ ವಿರುದ್ಧ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಭದ್ರತಾ ಕಾರಣಗಳಿಗಾಗಿ ಜಿಲ್ಲಾ ಅಧಿಕಾರಿಗಳು ಸೋಮಯ್ಯ ಅವರಿಗೆ ಪ್ರವೇಶವನ್ನು ನಿಷೇಧಿಸಿದ್ದಾರೆ.

ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡಿದ ಸೋಮಯ್ಯ ಅವರು “ನಿಷೇಧಿತ ಆದೇಶದ ಅಡಿಯಲ್ಲಿ ಪೊಲೀಸರು ನನ್ನನ್ನು ಕರಾಡ್‌ನಲ್ಲಿ ತಡೆದರು. ಕರಡ್ ಸರ್ಕ್ಯೂಟ್ ಹೌಸ್ ನಲ್ಲಿ ಬೆಳಿಗ್ಗೆ 9 ಗಂಟೆಗೆ ಪತ್ರಿಕಾಗೋಷ್ಠಿ ಇದೆ. ನಾನು ಹಾಸನ್ ಮುಶ್ರಿಫ್ ಅವರ ಮತ್ತೊಂದು ಹಗರಣವನ್ನು ನಾನು ಬಹಿರಂಗಪಡಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಜಿಲ್ಲಾ ಪೊಲೀಸ್ ತಂಡವು ಕರಾಡ್ ತಲುಪಿತು. ಸೋಮಯ್ಯ ಅವರನ್ನು ಅಲ್ಲಿನ ರೈಲ್ವೇ ನಿಲ್ದಾಣದಲ್ಲಿ ತಡೆ ಹಿಡಿದು ನಿಷೇಧಿತ ಆದೇಶದ ಪ್ರತಿಯನ್ನು ನೀಡಿದೆವು. “ಸೋಮಯ್ಯ ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ನಾವು ಹೇಳಿದ ನಂತರ, ಅವರು ಸಹಕರಿಸಿದರು ಮತ್ತು ಈಗ ಕರಾಡ್​​ನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಂತರ ಅವರು ಹಿಂತಿರುಗುತ್ತಾರೆ” ಎಂದು ಕೊಲ್ಹಾಪುರ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಬಾಲ್ಕಾವ್ಡೆ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಕೆಲ ದಿನಗಳ ಹಿಂದೆ ಸೋಮಯ್ಯ ಅವರು ಗ್ರಾಮೀಣಾಭಿವೃದ್ಧಿ ಸಚಿವ ಮತ್ತು ಕೊಲ್ಹಾಪುರದ ಕಾಗಲ್‌ನ ಶಾಸಕ ಮುಶ್ರೀಫ್ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಅವರ ಸಂಬಂಧಿಕರ ಹೆಸರಿನಲ್ಲಿ “ಬೇನಾಮಿ” ಘಟಕಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿದ್ದರು. ಆದಾಗ್ಯೂ, ಮುಶ್ರಿಫ್ ಈ ಆರೋಪಗಳನ್ನು ತಳ್ಳಿಹಾಕಿದರು.

ಸೋಮಯ್ಯ ಅವರು ಸೆಪ್ಟೆಂಬರ್ 19 ರಂದು ಕೊಲ್ಹಾಪುರ ಜಿಲ್ಲಾಧಿಕಾರಿ ರಾಹುಲ್ ರೇಖಾವಾರ್ ಹೊರಡಿಸಿದ ಆದೇಶವನ್ನು ಪ್ರದರ್ಶಿಸಿದರು. ಅವರ ಭೇಟಿಯಿಂದಾಗಿ ಜೀವಕ್ಕೆ ಅಪಾಯ ಮತ್ತು ಕಾನೂನು-ಸುವ್ಯವಸ್ಥೆಯ ಹದಗೆಡುವ ದೃಷ್ಟಿಯಿಂದ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 144 ರ ಅಡಿಯಲ್ಲಿ ಜಿಲ್ಲೆಗೆ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಗಣಪತಿ ವಿಸರ್ಜನೆಗೆ ಪೋಲಿಸರನ್ನು ನಿಯೋಜಿಸುತ್ತಿರುವುದರಿಂದ ಸೋಮಯ್ಯಗೆ ಭದ್ರತೆ ನೀಡಲು ಸಾಧ್ಯವಿಲ್ಲ ಎಂದು ಆದೇಶದಲ್ಲಿ ಹೇಳಲಾಗಿದೆ.

ಮುಂಬೈನ ನವಘರ್ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸುನೀಲ್ ಕಾಂಬ್ಳೆ ಕೂಡ ಕೊಲ್ಹಾಪುರ ಆಡಳಿತದ ಆದೇಶವನ್ನು ಪಾಲಿಸುವಂತೆ ಸೋಮಯ್ಯ ಅವರಿಗೆ ನೋಟಿಸ್ ನೀಡಿದರು. ಸೋಮಯ್ಯನ ಮುಲುಂಡ್ ನಿವಾಸವು ನವಘರ್ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುತ್ತದೆ.

ಸೋಮಯ್ಯ ಟ್ವೀಟ್ ನಲ್ಲಿ ಈ ಬೆಳವಣಿಗೆಯನ್ನು ಉದ್ಧವ್ ಠಾಕ್ರೆ ಸರ್ಕಾರದ “ದಾದಾಗಿರಿ” ಎಂದು ಕರೆದಿದ್ದರು. ಏತನ್ಮಧ್ಯೆ, ಮಹಾರಾಷ್ಟ್ರ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಈ ಕ್ರಮವನ್ನು “ಸರ್ವಾಧಿಕಾರಿ” ಎಂದು ಕರೆದರು. ಠಾಕ್ರೆ ಸರ್ಕಾರಕ್ಕೆ ಸೋಮಯ್ಯ ಅವರ ಧ್ವನಿಯನ್ನು ನಿಗ್ರಹಿಸಲು ಸಾಧ್ಯವಾಗುವುದಿಲ್ಲ ಎಂದು ಹೇಳಿದರು. ಬಿಜೆಪಿ ಮತ್ತು ಸೋಮಯ್ಯ ಈ ಭ್ರಷ್ಟಾಚಾರ ಪ್ರಕರಣಗಳನ್ನು ತಮ್ಮ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತಾರೆ ಎಂದು ಅವರು ಹೇಳಿದರು. ಮಹಾ ವಿಕಾಸ ಅಘಡಿ (ಎಂವಿಎ) ಸರ್ಕಾರವು “ಭ್ರಷ್ಟ” ಮಂತ್ರಿಗಳನ್ನು ಬಹಿರಂಗಪಡಿಸುವ ಸೋಮಯ್ಯನ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ ಎಂದು ಪಾಟೀಲ್ ಹೇಳಿದರು.

ಮಾಜಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರು ಸೋಮಯ್ಯ ಅವರಿಗೆ ಬೆಂಬಲ ವ್ಯಕ್ತಪಡಿಸಿದರು ಮತ್ತು ಯಾವುದೇ ವಿವರಣೆಯಿಲ್ಲದೆ ಅವರನ್ನು ಬಂಧಿಸಲಾಗಿದೆ ಎಂದು ಹೇಳಿದರು. “ಮಹಾರಾಷ್ಟ್ರವು ಅಘೋಷಿತ ತುರ್ತು ಪರಿಸ್ಥಿತಿಗೆ ಸಾಕ್ಷಿಯಾಗಿದೆ. ಮಹಾ ವಿಕಾಸ ಅಘಾಡಿ ಸರ್ಕಾರವು ಮಹಾರಾಷ್ಟ್ರದ ಆಡಳಿತವನ್ನು ತೆಗೆದುಕೊಂಡ ನಂತರ ಜನರು ಕಿರುಕುಳಕ್ಕೆ ಒಳಗಾಗುತ್ತಾರೆ. ಸರ್ಕಾರದ ತಪ್ಪು ನಿರ್ಧಾರವನ್ನು ಪ್ರಶ್ನಿಸುವ ಅಥವಾ ಭ್ರಷ್ಟಾಚಾರವನ್ನು ಸೂಚಿಸುವ ಯಾರನ್ನಾದರೂ ಬಂಧಿಸಿ ಜೈಲಿಗೆ ಹಾಕಲಾಗುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: Charanjit Singh Channi ಪಂಜಾಬ್‌ ಮುಖ್ಯಮಂತ್ರಿಯಾಗಿ ಚರಣ್‌ಜಿತ್ ಸಿಂಗ್ ಛನ್ನಿ ಪ್ರಮಾಣ ವಚನ ಸ್ವೀಕಾರ

ಇದನ್ನೂ ಓದಿ: ‘ಸಿಧು ನೇತೃತ್ವದಲ್ಲಿ ಪಂಜಾಬ್ ಚುನಾವಣೆ’ ಹರೀಶ್ ರಾವತ್ ಟ್ವೀಟ್ ಪ್ರಶ್ನಿಸಿದ ಕಾಂಗ್ರೆಸ್ ಹಿರಿಯ ನಾಯಕ ಸುನಿಲ್ ಜಾಖಡ್

(Ahead of Kolhapur visit Senior BJP leader Kirit Somaiya detained at Karad railway station)

ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ