ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ; ಸುದ್ದಿ ತಿಳಿಯುತ್ತಿದ್ದಂತೆ ಭಾರತಕ್ಕೆ ಎಚ್ಚರಿಕೆ ರವಾನಿಸಿದ ಪಾಕಿಸ್ತಾನ

ಕಾಶ್ಮೀರದ ವಿಚಾರದಲ್ಲಿ ಮೊದಲಿನಿಂದಲೂ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ. ಅದರಲ್ಲೂ ಪ್ರಧಾನಿ ಮೋದಿ ಸರ್ಕಾರ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಅದನ್ನೆರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸದ ಬಳಿಕವಂತೂ ಹೆಜ್ಜೆಹೆಜ್ಜೆಗೂ ಆಕ್ರೋಶ ವ್ಯಕ್ತಪಡಿಸುತ್ತಿದೆ.

ಕಾಶ್ಮೀರದ ರಾಜಕೀಯ ನಾಯಕರೊಂದಿಗೆ ಪ್ರಧಾನಿ ಮೋದಿ ಸಭೆ; ಸುದ್ದಿ ತಿಳಿಯುತ್ತಿದ್ದಂತೆ ಭಾರತಕ್ಕೆ ಎಚ್ಚರಿಕೆ ರವಾನಿಸಿದ ಪಾಕಿಸ್ತಾನ
ಶಾ ಮಹಮ್ಮದ್​ ಖುರೇಷಿ
Follow us
TV9 Web
| Updated By: Lakshmi Hegde

Updated on:Jun 20, 2021 | 11:31 AM

ಕಾಶ್ಮೀರದಲ್ಲಿ ಭಾರತ ಒಂದು ಸಣ್ಣ ಹೆಜ್ಜೆ ಮುಂದಿಟ್ಟರೂ ಸಾಕು, ಅತ್ತ ಪಾಕಿಸ್ತಾನ ಕೋಪದಿಂದ ಉರಿದುಕೊಳ್ಳುವುದು ಸಹಜ. ಹಾಗೇ ಈಗಲೂ ಸಹ ಪ್ರಧಾನಮಂತ್ರಿ ನರೇಂದ್ರ ಮೋದಿ ಜೂ.24ರಂದು ಜಮ್ಮು-ಕಾಶ್ಮೀರದಲ್ಲಿ ಸರ್ವಪಕ್ಷಗಳ ಸಭೆ ನಡೆಸಲಿದ್ದಾರೆ ಎಂಬುದು ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಅತ್ತ ಪಾಕಿಸ್ತಾನ ಎಚ್ಚರಿಕೆ ನೀಡಿದೆ. ಕಾಶ್ಮೀರದ ಜನಸಂಖ್ಯಾ ಶಾಸ್ತ್ರದಲ್ಲಿ ಯಾವುದೇ ವಿಭಜನೆ ಮತ್ತು ಬದಲಾವಣೆ ಮಾಡುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಹೇಳಿದೆ. ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಇಲಾಖೆ ಸಚಿವ ಶಾಹ್​ ಮಹಮ್ಮದ್​ ಖುರೇಷಿ, ಕಾಶ್ಮೀರದಲ್ಲಿ ಭಾರತದ ಯಾವುದೇ ಕಾನೂನು ಬಾಹಿರ ಕ್ರಮ, ಚಟುವಟಿಕೆಗಳನ್ನೂ ನಾವು ಸಹಿಸುವುದಿಲ್ಲ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಜೂ.24ರಂದು ಜಮ್ಮು-ಕಾಶ್ಮೀರದ ಪ್ರಮುಖ 14 ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಈ ಸಂಬಂಧ ಎಲ್ಲ ಪಕ್ಷಗಳ ಮುಖಂಡರಿಗೂ ಕೇಂದ್ರ ಸರ್ಕಾರ ಆಹ್ವಾನ ಕೊಡುತ್ತಿದೆ. ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಸಂಬಂಧಿತ ನಕ್ಷೆ, ಯೋಜನೆ ರೂಪಿಸಲು ಈ ಸಭೆ ಕರೆಯಲಾಗಿದೆ ಎಂದು ಮೂಲಗಳು ತಿಳಿಸಿದ್ದಾಗಿ ಭಾರತದ ಮಾಧ್ಯಮಗಳಲ್ಲಿ ವರದಿಯಾದ ಬೆನ್ನಲ್ಲೇ ಪಾಕಿಸ್ತಾನ ಈ ಎಚ್ಚರಿಕೆಯನ್ನು ನೀಡಿದೆ.

ಕಾಶ್ಮೀರದ ವಿಚಾರದಲ್ಲಿ ಪಾಕಿಸ್ತಾನ ಸದಾ ಮೂಗು ತೂರಿಸುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಭಾರತದೊಂದಿಗಿನ ಪಾಕಿಸ್ತಾನದ ವೈರತ್ವಕ್ಕೆ ಇತಿಹಾಸವೇ ಇದೆ. 2019ರ ಆಗಸ್ಟ್​ 5ರಂದು ಆರ್ಟಿಕಲ್​ 370 (ವಿಶೇಷ ಸ್ಥಾನಮಾನ)ನ್ನು ರದ್ದುಗೊಳಿಸಿದಾಗಲೂ ಪಾಕಿಸ್ತಾನ ಭಾರತದ ವಿರುದ್ಧ ಕಿಡಿಕಾರಿತ್ತು. ಅಂತಾರಾಷ್ಟ್ರೀಯ ಸಮಾವೇಶಗಳ ವೇದಿಕೆಯಲ್ಲೂ ಈ ಬಗ್ಗೆ ಧ್ವನಿ ಎತ್ತಿತ್ತು. ಆದರೆ ಬಹುತೇಕ ರಾಷ್ಟ್ರಗಳು ಅದು ಭಾರತಕ್ಕೆ ಸಂಬಂಧಪಟ್ಟ ವಿಚಾರ ಎಂದು ಹೇಳಿ, ಪಾಕ್​ ಪರ ನಿಂತಿರಲಿಲ್ಲ. ವಿಶ್ವಸಂಸ್ಥೆಯ ಗಮನಕ್ಕೆ ತಂದರೂ ಹೆಚ್ಚೇನೂ ಪ್ರಭಾವ ಬೀರಲಿಲ್ಲ.

ಕಾಶ್ಮೀರದ ವಿಚಾರದಲ್ಲಿ ಮೊದಲಿನಿಂದಲೂ ಪಾಕಿಸ್ತಾನ ಕ್ಯಾತೆ ತೆಗೆಯುತ್ತಲೇ ಇದೆ. ಅದರಲ್ಲೂ ಪ್ರಧಾನಿ ಮೋದಿ ಸರ್ಕಾರ ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿ, ಅದನ್ನೆರಡು ಕೇಂದ್ರಾಡಳಿತ ಪ್ರದೇಶವನ್ನಾಗಿ ವಿಭಜಿಸದ ಬಳಿಕವಂತೂ ಹೆಜ್ಜೆಹೆಜ್ಜೆಗೂ ಆಕ್ರೋಶ ವ್ಯಕ್ತಪಡಿಸುತ್ತಿದೆ. ಹಾಗೇ, ಭಾರತವಂತೂ ಖಡಕ್​ ಆಗಿ ಹೇಳಿಬಿಟ್ಟಿದೆ. ಆರ್ಟಿಕಲ್​ 370 ಇಡುವುದು, ರದ್ದುಗೊಳಿಸುವುದು ನಮ್ಮ ಆಂತರಿಕ ವಿಚಾರವಾಗಿತ್ತು. ಇದರಲ್ಲಿ ಪಾಕಿಸ್ತಾನದ ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಎಚ್ಚರಿಕೆಯನ್ನೂ ಈಗಾಗಲೇ ನೀಡಿದೆ.

ಇದನ್ನೂ ಓದಿ: School Fees: ನಾಳೆ ಖಾಸಗಿ ಶಾಲೆಗಳ ಫೀಸ್ ವಿಚಾರಣೆ; ಹೈಕೋರ್ಟ್​ನಿಂದ ದಿನಾಂಕ ನಿಗದಿ

Published On - 11:25 am, Sun, 20 June 21

ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಭೈರತಿ ರಣಗಲ್: ಶಿವಮೊಗ್ಗದಲ್ಲಿ ಫ್ಯಾನ್ಸ್ ಜತೆ ಸಂಭ್ರಮಿಸಿದ ಶಿವರಾಜ್​ಕುಮಾರ್
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಬಿಜೆಪಿ ಸೋಲಿಗೆ ಯತ್ನಾಳ್​ನ ಹರಕು ಬಾಯಿ ಕಾರಣ: ರೇಣುಕಾಚಾರ್ಯ ವಾಗ್ದಾಳಿ
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಸುದೀಪ್​ ಹೇಳಿದ ಒಂದೇ ಮಾತಿಗೆ ಉಗ್ರಂ ಮಂಜು, ಗೌತಮಿ ನಡುವಿನ ಸ್ನೇಹ ಕಟ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಅಂಬರೀಶ್ ಪುಣ್ಯಸ್ಮರಣೆ, ಸಮಾಧಿಗೆ ಪೂಜೆ ಮಾಡಿದ ಸುಮಲತಾ ಅಂಬರೀಶ್
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಮೊಮ್ಮಗ ನಿಖಿಲ್ ಸೋಲಿನ ಬಗ್ಗೆ ದೇವೇಗೌಡರ ಮೊದಲ ಪ್ರತಿಕ್ರಿಯೆ ಹೇಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ಸಮುದ್ರಕ್ಕೆ ಹಾರಿದ ಯುವತಿ, ರೋಚಕ ರಕ್ಷಣಾ ಕಾರ್ಯಾಚರಣೆ ಹೀಗಿತ್ತು ನೋಡಿ
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ನಾಥನ್ ಲಿಯಾನ್ ಹೆಣೆದ ಬಲೆಗೆ ಬಿದ್ದ ರಿಷಭ್ ಪಂತ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಆಸ್ಟ್ರೇಲಿಯಾ ಪಾಲಿಗೆ ದುಬಾರಿಯಾದ ಖ್ವಾಜಾ ಕೈಬಿಟ್ಟ ಕ್ಯಾಚ್
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಮಹಾರಾಷ್ಟ್ರ: ಸ್ವತಂತ್ರ ಅಭ್ಯರ್ಥಿಯ ವಿಜಯೋತ್ಸವದ ವೇಳೆ ಅಗ್ನಿ ಅವಘಡ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ
ಸಂಭಾಲ್ ಜಾಮಾ ಮಸೀದಿ ಸಮೀಕ್ಷೆ ವೇಳೆ ಕಲ್ಲು ತೂರಾಟ