ಅಹಮದಾಬಾದ್​ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್

Ahmedabad Plane Crash: ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಸಿಬ್ಬಂದಿ ಸೇರಿದಂತೆ 241 ಮಂದಿ ಪ್ರಯಾಣಿಕರು ಮೃತಪಟ್ಟದ್ದಾರೆ. ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ ಒಂದು ಕೋಟಿ ರೂಪಾಯಿ ಪರಿಹಾರ ಘೋಷಿಸಿದೆ. ವಿಮಾನ ಅಪಘಾತದಲ್ಲಿ ಬಹುತೇಕ ಪ್ರಯಾಣಿಕರು ಮೃತಪಟ್ಟಿದ್ದು, ಒಬ್ಬರು ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದಾರೆ.​

ಅಹಮದಾಬಾದ್​ ವಿಮಾನ ಪತನ: ಮೃತರ ಕುಟುಂಬಕ್ಕೆ 1 ಕೋಟಿ ರೂ. ಪರಿಹಾರ ಘೋಷಿಸಿದ ಟಾಟಾ ಗ್ರೂಪ್
ಟಾಟಾ, ವಿಮಾನ ಪತನ

Updated on: Jun 12, 2025 | 9:31 PM

ನವದೆಹಲಿ, ಜೂನ್​ 12: ಗುಜರಾತನ ಅಹಮದಾಬಾದ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ (Ahmedabad Plane Crash) ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ (TATA Group)​ ತಲಾ 1 ಕೋಟಿ ರೂ. ಪರಿಹಾರ ಘೋಷಿಸಿದೆ. ಅಹಮದಾಬಾದ್​ನಿಂದ ಲಂಡನ್​ಗೆ ಹೊರಟಿದ್ದ ಏರ್​ ಇಂಡಿಯಾ ವಿಮಾನ ಗುರುವಾರ (ಜೂ.12) ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಪತನಗೊಂಡಿತು. ವಿಮಾನದಲ್ಲಿದ್ದ 242 ಪ್ರಯಾಣಿಕರಲ್ಲಿ ಓರ್ವ ಪವಾಡ ಸದೃಶ್ಯವಾಗಿ ಬದುಕುಳಿದ್ದು, ಮತ್ತೆಲ್ಲರೂ ಮೃತಪಟ್ಟಿದ್ದಾರೆ.

ಈ ದುರಂತಕ್ಕೆ ಟಾಟಾ ಗ್ರೂಪ್​​ನ ಅಧ್ಯಕ್ಷ ಎನ್ ಚಂದ್ರಶೇಖರನ್​​​ ಅವರು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂತಾಪ ಸೂಚಿಸಿದ್ದಾರೆ. “ಈ ದುರಂತ ಘಟನೆಯಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ನಮ್ಮ ಆಲೋಚನೆಗಳು ಮತ್ತು ಪ್ರಾರ್ಥನೆಗಳು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಮತ್ತು ಗಾಯಗೊಂಡವರೊಂದಿಗೆ ಇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಭೀಕರ ವಿಮಾನ ದುರಂತ; ಯಶ್, ರಾಧಿಕಾ ಪಂಡಿತ್, ರಮ್ಯಾ, ರಶ್ಮಿಕಾ ಮಂದಣ್ಣ ಸಂತಾಪ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಭಾರತವನ್ನು ಬೆಚ್ಚಿ ಬೀಳಿಸಿದ 8 ಭಯಾನಕ ವಿಮಾನ ದುರಂತಗಳಿವು

ಟ್ವಿಟರ್​ ಪೋಸ್ಟ್​

“ಈ ದುರಂತದಲ್ಲಿ ಮೃತರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಹಾಗೂ ಗಾಯಗೊಂಡವರ ವೈದ್ಯಕೀಯ ವೆಚ್ಚವನ್ನು ಸಹ ಭರಿಸುತ್ತೇವೆ ಮತ್ತು ಅವರಿಗೆ ಅಗತ್ಯವಿರುವ ಎಲ್ಲಾ ಆರೈಕೆ ಮತ್ತು ಬೆಂಬಲ ದೊರೆಯುವಂತೆ ನೋಡಿಕೊಳ್ಳುತ್ತೇವೆ. ವಿಮಾನ ಪತನಗೊಂಡ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ನ ಪುನರ್​ನಿರ್ಮಾಣಕ್ಕೆ ನೆರವು ನೀಡುತ್ತೇವೆ” ಎಂದು ಟ್ವೀಟ್​ ಮಾಡಿದ್ದಾರೆ.

ದುರಂತ ನಡೆದ ಸಂಭವಿಸಿದ ಬಿಜೆ ವೈದ್ಯಕೀಯ ಕಾಲೇಜಿನ ಹಾಸ್ಟೆಲ್​ನಲ್ಲಿ ವಿದ್ಯಾರ್ಥಿಗಳು ಇದ್ದರು. ಇವರಲ್ಲಿ ಮೂವರು ಮೃತಪಟ್ಟಿದ್ದಾರೆ. ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಹಮದಾಬಾದ್‌ ವಿಮಾನ ಪತನ: ಕರ್ನಾಟಕ ಮೂಲದ ಕೋ ಪೈಲಟ್ ಸಾವು

ಲಂಡನ್ ಗ್ಯಾಟ್ವಿಕ್‌ಗೆ ತೆರಳುತ್ತಿದ್ದ ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನ AI171, ಅಹಮದಾಬಾದ್‌ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೇಲವೇ ನಿಮಿಷಗಳಲ್ಲಿ ಪತನವಾಯಿತು. ವಿಮಾನದಲ್ಲಿ 230 ಮಂದಿ ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿ ಇದ್ದರು.

ವಿಮಾನ ದುರಂತದ ಕ್ಷಣ ಕ್ಷಣದ ಮಾಹಿತಿ ತಿಳಿಯಲು ಇಲ್ಲಿ ಕ್ಲಿಕ್​ ಮಾಡಿ 

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:17 pm, Thu, 12 June 25