AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ

275 ಜನರನ್ನು ಬಲಿ ಪಡೆದಿದ್ದ ಏರ್ ಇಂಡಿಯಾ ವಿಮಾನ ಪತನಕ್ಕೆ ಕಾರಣವೇನು ಎಂಬುದು ಕೊನೆಗೂ ಪತ್ತೆಯಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಸಲ್ಲಿಸಿದ್ದು, ಆಘಾತಕಾರಿ ಮಾಹಿತಿ ಅದರಲ್ಲಿದೆ. ಜತೆಗೆ ಪೈಟಲ್​​ಗಳ ನಡುವಣ ಕೊನೆಯ ಸಂಭಾಷಣೆಯ ಮಾಹಿತಿಯೂ ಇದೆ. ಎಲ್ಲ ವಿವರಗಳು ಇಲ್ಲಿವೆ.

ಅಹಮದಾಬಾದ್ ಏರ್ ಇಂಡಿಯಾ ವಿಮಾನ ಪತನಕ್ಕೆ ಕೊನೆಗೂ ಕಾರಣ ಪತ್ತೆ: ಪ್ರಾಥಮಿಕ ವರದಿಯಲ್ಲಿ ಆಘಾತಕಾರಿ ಅಂಶ
ಏರ್ ಇಂಡಿಯಾ ವಿಮಾನ ಪತನದ ಸಂಗ್ರಹ ಚಿತ್ರ
Ganapathi Sharma
|

Updated on:Jul 12, 2025 | 10:53 AM

Share

ನವದೆಹಲಿ, ಜುಲೈ 12: ಅಹಮದಾಬಾದ್‌ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ (Air India Plane Crash) ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಸಲ್ಲಿಸಿರುವ 15 ಪುಟಗಳ ಪ್ರಾಥಮಿಕ ತನಿಖಾ ವರದಿಯಲ್ಲಿ ಹಲವು ಆಘಾತಕಾರಿ ಮಾಹಿತಿ ಬಹಿರಂಗವಾಗಿದೆ. ವರದಿಯ ಪ್ರಕಾರ, ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ವಿಮಾನದ ಎರಡೂ ಎಂಜಿನ್‌ಗಳು ಸ್ಥಗಿತಗೊಂಡವು. ಆ ನಂತರ ವಿಮಾನ ಪತನವಾಗಿದೆ.

ವಿಮಾನದ ಎಂಜಿನ್‌ಗೆ ಇಂಧನ ಪೂರೈಕೆ ಸ್ಥಗಿತಗೊಂಡಿರುವುದು ಸೇರಿದಂತೆ ಹಲವಾರು ಪ್ರಮುಖ ವಿಷಯಗಳನ್ನು ಎಎಐಬಿ ಗಮನಸೆಳೆದಿದೆ. ಆದಾಗ್ಯೂ, ತನಿಖಾ ಬ್ಯೂರೋ, ಈ ವರದಿ ಪ್ರಾಥಮಿಕ ಎಂದು ಹೇಳಿದೆ. ಪ್ರಸ್ತುತ, ಅಪಘಾತದ ವಿವರವಾದ ತನಿಖೆ ನಡೆಯುತ್ತಿದೆ.

ಎಂಜಿನ್​ಗಳಿಗೆ ಇಂಧನ ಪೂರೈಕೆ ಸ್ಥಗಿತ

ಎಎಐಬಿ ಪ್ರಾಥಮಿಕ ವರದಿಯ ಪ್ರಕಾರ, ಟೇಕಾಫ್ ನಂತರ ಎಂಜಿನ್‌ಗಳ ಇಂಧನ ಸ್ವಿಚ್‌ಗಳು ಇದ್ದಕ್ಕಿದ್ದಂತೆ RUN ನಿಂದ CUTOFF ಗೆ ಬದಲಾದವು. ಈ ಘಟನೆ ಕೇವಲ 1 ಸೆಕೆಂಡ್ ಅಂತರದಲ್ಲಿ ಸಂಭವಿಸಿದೆ. ಈ ಸಮಯದಲ್ಲಿ, ಎಂಜಿನ್‌ಗಳಿಗೆ ಇಂಧನ ಬರುವುದನ್ನು ನಿಂತುಹೋಗಿದೆ.

ಇದನ್ನೂ ಓದಿ
Image
ಏರ್ ಇಂಡಿಯಾ ಅಪಘಾತದಲ್ಲಿ 275 ಮಂದಿ ಸಾವು; ಸರ್ಕಾರದಿಂದ ಅಧಿಕೃತ ಘೋಷಣೆ
Image
ಏರ್ ಇಂಡಿಯಾ ವಿಮಾನಾಪಘಾತಕ್ಕೆ ಮೊದಲು ಸಿಇಒಗೆ ಸಂಬಳ ಹೆಚ್ಚಳ?
Image
ಏರ್ ಇಂಡಿಯಾ ದುರಂತ; ಮೃತರ ಕುಟುಂಬಕ್ಕೆ 6 ಕೋಟಿ ನೆರವು ನೀಡಿದ ಯುಎಇ ವೈದ್ಯ
Image
ಇಂಡಿಗೋ ವಿಮಾನದಲ್ಲಿ ಮೇಡೇ ಘೋಷಿಸಿದ ಪೈಲಟ್; ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ

ಪೈಲಟ್‌ಗಳ ನಡುವೆ ಆತಂಕದ ಸಂಭಾಷಣೆ

ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ನಡುವೆ ನಡೆದ ಸಂಭಾಷಣೆಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ (CVR) ಪ್ರಕಾರ, ಒಬ್ಬ ಪೈಲಟ್ ಮತ್ತೊಬ್ಬ ಪೈಲಟ್ ಬಳಿ, ‘‘ನೀವು ಏಕೆ ಕಡಿತಗೊಳಿಸಿದ್ದೀರಿ’’ ಎಂದು ಕೇಳಿದ್ದಾರೆ. ಆಗ ಮತ್ತೊಬ್ಬ ಪೈಟಲ್, ‘‘ನಾನು ಏನೂ ಮಾಡಿಲ್ಲ’’ ಎಂದು ಹೇಳಿದ್ದಾರೆ. ಇಬ್ಬರು ಪೈಲಟ್‌ಗಳ ನಡುವಿನ ಈ ಸಂಭಾಷಣೆ ಗಮನಿಸಿದರೆ, ಯಾರೂ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಕಡಿತಗೊಳಿಸಿಲ್ಲ ಎಂಬುದು ಸ್ಪಷ್ಟವಾಗುತ್ತದೆ.

ತುರ್ತು ಪರಿಸ್ಥಿತಿ ಅರಿವಿಗೆ ಬರುತ್ತಿದ್ದಂತೆಯೇ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯನ್ನು ಸಕ್ರಿಯಗೊಳಿಸಲು ಪ್ರಯತ್ನಿಸಲಾಯಿತು. ಆದಾಗ್ಯೂ, ರಾಮ್ ಏರ್ ಟರ್ಬೈನ್ (RAT) ಅಂದರೆ, ತುರ್ತು ಫ್ಯಾನ್ ಮತ್ತು ಎಪಿಯುನಂತಹ ವ್ಯವಸ್ಥೆಗಳನ್ನು ಸಕ್ರಿಯಗೊಳಿಸಿದ ನಂತರವೂ, ವಿಮಾನವನ್ನು ಅಪಘಾತದಿಂದ ರಕ್ಷಿಸಲು ಪೈಟಲ್​ಗಳಿಗೆ ಸಾಧ್ಯವಾಗಲಿಲ್ಲ. ವಿಮಾನದಲ್ಲಿ ವಿದ್ಯುತ್ ಸರಬರಾಜಿನಲ್ಲಿ ಸಮಸ್ಯೆ ಇದ್ದಾಗ ಮಾತ್ರ ರಾಮ್ ಏರ್ ಟರ್ಬೈನ್ ಸಕ್ರಿಯವಾಗುತ್ತದೆ. ಇದರರ್ಥ, ಎಂಜಿನ್ ಸ್ಥಗಿತಗೊಂಡಿದ್ದು ವಿಮಾನದ ವಿದ್ಯುತ್ ಪೂರೈಕೆ ಮೇಲೂ ಪರಿಣಾಮ ಬೀರಿತ್ತು.

ಏನಿದು ರಾಮ್ ಏರ್ ಟರ್ಬೈನ್?

ಎರಡೂ ಎಂಜಿನ್‌ಗಳು ಅಥವಾ ವಿದ್ಯುತ್ ಸರಬರಾಜು ನಿಂತಾಗ ಅಥವಾ ಹೈಡ್ರಾಲಿಕ್ ವೈಫಲ್ಯ ಉಂಟಾದಾಗ ರಾಮ್ ಏರ್ ಟರ್ಬೈನ್ ಸ್ವಯಂಚಾಲಿತವಾಗಿ ಸಕ್ರಿಯಗೊಳ್ಳುತ್ತದೆ. ಇದು ವಿಮಾನವು ಎತ್ತರವನ್ನು ಕಾಯ್ದುಕೊಳ್ಳಲು ಸಹಾಯ ಮಾಡುತ್ತದೆ. ಇದು ವಿದ್ಯುತ್ ಉತ್ಪಾದಿಸಲು ಗಾಳಿಯ ವೇಗವನ್ನು ಬಳಸುತ್ತದೆ.

ಇದನ್ನೂ ಓದಿ: ವಿಮಾನ ಪತನಕ್ಕೂ ಆರು ತಿಂಗಳ ಮುನ್ನವೇ ಭವಿಷ್ಯ ನುಡಿದಿದ್ದ ಜ್ಯೋತಿಷಿ ಶರ್ಮಿಷ್ಠ; ವಿಶೇಷ ಪಾಡ್‌ಕ್ಯಾಸ್ಟ್ ಇಲ್ಲಿದೆ ನೋಡಿ

ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ಜೂನ್ 12 ರಂದು ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹೊರಟ ಸ್ವಲ್ಪ ಸಮಯದ ನಂತರ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ ಆವರಣಕ್ಕೆ ಅಪ್ಪಳಿಸಿತ್ತು. ವಿಮಾನದಲ್ಲಿದ್ದ 241 ಪ್ರಯಾಣಿಕರು ಸೇರಿದಂತೆ 275 ಜನರು ಸಾವನ್ನಪ್ಪಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Published On - 7:32 am, Sat, 12 July 25

ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ಪಾರ್ಕಿಂಗ್​ಗಾಗಿ ಪೂರ್ತಿ ರಸ್ತೆಯನ್ನೇ ಕಬಳಿಸಿರುವುದು ಮೂರ್ಖತನದ ಪರಮಾವಧಿ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ರಾಯಚೂರು: ಎದೆಯತ್ತರದ ನೀರಲ್ಲೇ ಮೃತದೇಹ ಹೊತ್ತು ಸಾಗಿದ ಗ್ರಾಮಸ್ಥರು; ವಿಡಿಯೋ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವರಮಹಾಲಕ್ಷ್ಮೀ ಹಬ್ಬ: ಕೆಆರ್ ಮಾರುಕಟ್ಟೆಯಲ್ಲಿ ಖರೀದಿಗೆ ಮುಗಿಬಿದ್ದ ಜನ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ
ವಿಡಿಯೋ: ಚಿಕ್ಕಮಗಳೂರು ಶೃಂಗೇರಿ ರಾಜ್ಯ ಹೆದ್ದಾರಿಯಲ್ಲಿ ಕಾಡಾನೆಗಳ ಸಂಚಾರ