ಹೆಚ್ಚಿದ ಕೊರೊನಾ ಪ್ರಕರಣ; ಅಹಮದಾಬಾದ್​ನಲ್ಲಿ ಮಾಲ್​, ಚಿತ್ರಮಂದಿರಗಳು ಬಂದ್​

ಇಂದಿನಿಂದ (ಮಾರ್ಚ್​ 19) ಅಹಮದಾಬಾದ್​ನಲ್ಲಿ ರಾತ್ರಿ 9ರಿಂದ ಮುಂಜಾನೆ 6ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ. ಈ ಮೂಲಕ ಕೊರೊನಾ ನಿಯಂತ್ರಣ ಮಾಡಲು ಸ್ಥಳೀಯ ಸರ್ಕಾರ ಪ್ರಯತ್ನ ಮಾಡುತ್ತಿದೆ.

ಹೆಚ್ಚಿದ ಕೊರೊನಾ ಪ್ರಕರಣ; ಅಹಮದಾಬಾದ್​ನಲ್ಲಿ ಮಾಲ್​, ಚಿತ್ರಮಂದಿರಗಳು ಬಂದ್​
ಸಾಂದರ್ಭಿಕ ಚಿತ್ರ
Follow us
ರಾಜೇಶ್ ದುಗ್ಗುಮನೆ
|

Updated on: Mar 19, 2021 | 6:36 PM

ಗುಜರಾತ್​: ದೇಶದಲ್ಲಿ ಕೊರೊನಾ ವೈರಸ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಇದು ಕೊರೊನಾದ ಎರಡನೇ ಅಲೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಈ ಮಧ್ಯೆ, ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಈಗ  ಅಹಮದಾಬಾದ್​ನಲ್ಲಿ ವೀಕೆಂಡ್​ ಅವಧಿಯಲ್ಲಿ ಸಿನಿಮಾ ಹಾಲ್​ಗಳನ್ನು ಮುಚ್ಚಲು ನಿರ್ಧರಿಸಲಾಗಿದೆ. ಇಂದಿನಿಂದ (ಮಾರ್ಚ್​ 19) ಅಹಮದಾಬಾದ್​ನಲ್ಲಿ ರಾತ್ರಿ 9ರಿಂದ ಮುಂಜಾನೆ 6ರವರೆಗೆ ಲಾಕ್​ಡೌನ್​ ಜಾರಿಯಲ್ಲಿರಲಿದೆ. ಈ ಮೂಲಕ ಕೊರೊನಾ ನಿಯಂತ್ರಣ ಮಾಡಲು ಸ್ಥಳೀಯ ಸರ್ಕಾರ ಪ್ರಯತ್ನ ಮಾಡುತ್ತಿದೆ. ಇನ್ನು ಶನಿವಾರ ಮತ್ತು ಭಾನುವಾರ ಮಾಲ್​ ಹಾಗೂ ಚಿತ್ರಮಂದಿರಗಳು ಮುಚ್ಚಿರಲಿವೆ.

ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಅಹಮದಾಬಾದ್​, ವಡೋದರ, ಸೂರತ್​ ಮತ್ತು ರಾಜ್​ಕೋಟ್​ನಲ್ಲಿ ಕೊರೊನಾ ಪ್ರಕರಣಗಳು ಮಿತಿ ಮೀರಿ ಹೆಚ್ಚುತ್ತಿದೆ. ಹೀಗಾಗಿ, ಈ ಭಾಗದಲ್ಲಿ ನೈಟ್​ ಕರ್ಫ್ಯೂ ವಿಧಿಸಲು ಸರ್ಕಾರ ಸೂಚಿಸಿತ್ತು. ಮಾರ್ಚ್​ 31ರವರೆಗೂ ಇದೇ ನಿಯಮ ಜಾರಿಯಲ್ಲಿರಲಿದೆ ಎಂದು ಸರ್ಕಾರ ಹೇಳಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಹಾಗೂ ಇಂಗ್ಲೆಡ್​ ನಡುವೆ ಟಿ20 ಸರಣಿ ನಡೆಯುತ್ತಿದೆ. ಕೊರೊನಾ ಹೆಚ್ಚುತ್ತಿರುವುದರಿಂದ ಚಿತ್ರಮಂದಿರಕ್ಕೆ ಪ್ರೇಕ್ಷಕರು ಬಾರದಂತೆ ನಿಷೇಧ ಹೇರಲಾಗಿದೆ.

ರಾಜ್ಯದಲ್ಲಿ ಚಿತ್ರಮಂದಿರಗಳ ಹೌಸ್​ಫುಲ್​ ಪ್ರದರ್ಶನಕ್ಕಿಲ್ಲ ಅಡ್ಡಿ:

ಬೆಂಗಳೂರು ಸೇರಿ ರಾಜ್ಯಾದ್ಯಂತ ಕೊರೊನಾ ಪ್ರಕರಣ ಹೆಚ್ಚುತ್ತಿದೆ. ಇದು ಸರ್ಕಾರವನ್ನು ಮತ್ತಷ್ಟು ಆತಂಕಕ್ಕೆ ಈಡು ಮಾಡಿದೆ. ಇತ್ತೀಚೆಗೆ ಸುದ್ದಿಗೋಷ್ಠಿ ಕರೆದಿದ್ದ ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ಕಡ್ಡಾಯವಾಗಿ ಮಾಸ್ಕ್​ ಧರಿಸುವಂತೆ ಕೋರಿದ್ದರು. ಈ ಮಧ್ಯೆ, ಬೃಹತ್​ ಬೆಂಗಳೂರು  ನಗರ ಪಾಲಿಕೆ ಬೆಂಗಳೂರಲ್ಲಿ ಚಿತ್ರಮಂದಿರದಲ್ಲಿ ಆಸನ ವ್ಯವಸ್ಥೆಯನ್ನು ಶೇ.50ಕ್ಕೆ ಇಳಿಸಬೇಕು ಎಂದು ಸರ್ಕಾರದ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ, ಈ ಪ್ರಸ್ತಾಪವನ್ನು ಸರ್ಕಾರ ನಿರಕಾರಿಸಿದೆ. ರಾಜ್ಯದಲ್ಲಿ ಸಿನಿಮಾ ಮಂದಿರಗಳಲ್ಲಿ ಶೇ. 50ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡುವ ಯಾವ ಪ್ರಸ್ತಾಪವೂ ಸರ್ಕಾರದ ಮುಂದಿಲ್ಲ. ಪ್ರೇಕ್ಷಕರು ಮತ್ತು ಥಿಯೇಟರ್ ಮಾಲೀಕರು ಎಲ್ಲಾ ಆವಶ್ಯಕ ಮುಂಜಾಗ್ರತಾ ಕ್ರಮಗಳನ್ನು ತಪ್ಪದೇ ಪಾಲಿಸಿ, ಕೊರೋನಾ ನಿಯಂತ್ರಣಕ್ಕೆ ಸರ್ಕಾರದೊಂದಿಗೆ ಸಹಕರಿಸಿ ಎಂದು ಯಡಿಯೂರಪ್ಪ ಟ್ವೀಟ್​ ಮಾಡಿ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಸಿನಿ ಪ್ರಿಯರಿಗೆ ಗುಡ್​ ನ್ಯೂಸ್​; ಚಿತ್ರಮಂದಿರಗಳಲ್ಲಿ ಹೌಸ್​ ಫುಲ್​ ಪ್ರದರ್ಶನಕ್ಕಿಲ್ಲ ಅಡ್ಡಿ, ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ