AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆಯಲ್ಲಿ ಪತ್ನಿಯನ್ನು ದರ ದರನೆ ಎಳೆದೊಯ್ದು ಎಂಟು ಬಾರಿ ಚಾಕುವಿನಿಂದ ಇರಿದ ಪತಿ

ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್​ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ, ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ರಸ್ತೆಯಲ್ಲಿ ಪತ್ನಿಯನ್ನು ದರ ದರನೆ ಎಳೆದೊಯ್ದು ಎಂಟು ಬಾರಿ ಚಾಕುವಿನಿಂದ ಇರಿದ ಪತಿ
ಕ್ರೈಂ
ನಯನಾ ರಾಜೀವ್
|

Updated on: Nov 05, 2025 | 8:10 AM

Share

ನಿಕೋಲ್, ನವೆಂಬರ್ 05: ವ್ಯಕ್ತಿಯೊಬ್ಬ ರಸ್ತೆಯಲ್ಲೇ ಪತ್ನಿಗೆ ಚಾಕುವಿನಿಂದ ಎಂಟು ಬಾರಿ ಇರಿದಿರುವ ಭಯಾನಕ ಘಟನೆ ಅಹಮದಾಬಾದಿನ ನಿಕೋಲ್ನಲ್ಲಿ ನಡೆದಿದೆ. ಸೋಮವಾರ ಸಂಜೆ ಹಾಡಹಗಲೇ ವ್ಯಕ್ತಿಯೊಬ್ಬ ತನ್ನ ಹೆಂಡತಿ(Wife)ಯನ್ನು ಎಂಟು ಬಾರಿ ಇರಿದಿದ್ದಾನೆ.ತನ್ನ ಸಹೋದರನ ಆತ್ಮಹತ್ಯೆಗೆ ಅವಳೇ ಕಾರಣ ಎಂದು ಆರೋಪಿಸಿದ್ದಾನೆ. ಕೂಡಲೇ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಪವಾಡಸದೃಶವಾಗಿ ಬದುಕುಳಿದಿದ್ದಾರೆ, ನಂತರ ಆಕೆಯ ಪತಿ ಮತ್ತು ಅತ್ತೆಯ ವಿರುದ್ಧ ದೂರು ದಾಖಲಿಸಿದ್ದಾರೆ.

ನಿಕೋಲ್ ಪೊಲೀಸರ ಪ್ರಕಾರ, ಸಂತ್ರಸ್ತೆ ಕೃಷ್ಣನಗರದ ವಿಷ್ಣು ಪಾರ್ಕ್‌ನ ಮಾಯಾಂಕ್ ಪಟೇಲ್ ಅವರನ್ನು ಸುಮಾರು ಒಂದು ವರ್ಷದ ಹಿಂದೆ ಮದುವೆಯಾಗಿದ್ದರು. ಆರಂಭದಲ್ಲಿ, ಆಕೆಯ ವೈವಾಹಿಕ ಜೀವನವು ಶಾಂತಿಯುತವಾಗಿತ್ತು, ಆದರೆ ಕೆಲವೇ ತಿಂಗಳುಗಳಲ್ಲಿ, ಆಕೆಯ ಪತಿ ಮತ್ತು ಅತ್ತೆ-ಮಾವಂದಿರು ಮನೆಯ ಕ್ಷುಲ್ಲಕ ವಿಷಯಗಳಿಗೆ ಕಿರುಕುಳ ಮತ್ತು ಹಲ್ಲೆ ಮಾಡಲು ಪ್ರಾರಂಭಿಸಿದ್ದರು ಎಂದು ಆಕೆ ತಿಳಿಸಿದ್ದಾರೆ.

ಮಯಾಂಕ್ ಅವರ ಕಿರಿಯ ಸಹೋದರ ಯಾವುದೋ ಕಾರಣಗಳಿಂದಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಾಗ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿತು. ಅದಕ್ಕೂ ಈಕೆಯೇ ಕಾರಣ ಎಂದು ಮನೆಯಲ್ಲಿ ಎಲ್ಲರೂ ದೂರಿದ್ದರು.ಪದೇ ಪದೇ ನಡೆದ ವಾದಗಳು ಮತ್ತು ಹಲ್ಲೆಗಳ ನಂತರ, ಮಹಿಳೆಯನ್ನು ತನ್ನ ಮನೆಯಿಂದ ಹೊರಗೆ ಹಾಕಲಾಯಿತು ಮತ್ತು ಆಕೆ ತನ್ನ ಹೆತ್ತವರೊಂದಿಗೆ ಇದ್ದರು.

ಮತ್ತಷ್ಟು ಓದಿ:  ಪತ್ನಿ ಮೇಲೆ ಸಂಶಯ: ಲೇಡಿ ಕಂಡಕ್ಟರ್​​ಗೆ ಮೂರು ಬಾರಿ ಇರಿದು ಕೊಲೆ ಮಾಡಿದ ಪೊಲೀಸಪ್ಪ

ಸೋಮವಾರ ಸಂಜೆ, ಮಹಿಳೆ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಖೋಡಿಯಾರ್‌ನಗರ ದೂಧ್‌ಸಾಗರ್ ಸೊಸೈಟಿ ಬಳಿ ಬಂದಾಗ, ಮಾಯಾಂಕ್ ಆಕೆಯ ಎದುರು ಬಂದು ನಿಂತಿದ್ದ. ತನ್ನ ಸಹೋದರ ಆತ್ಮಹತ್ಯೆ ಮಾಡಿಕೊಳ್ಳಲು ಅವಳೇ ಕಾರಣ ಎಂದು ಎಲ್ಲರೆದುರು ಕೂಗಾಡಿದ್ದಾನೆ. ಆಕೆ ಸಹಾಯಕ್ಕಾಗಿ ಕೂಗುತ್ತಿರುವಾಗ ರಸ್ತೆಯಲ್ಲಿ ಆಕೆಯನ್ನು ಎಳೆದುಕೊಂಡು ಹೋಗಲು ಪ್ರಾರಂಭಿಸಿದ್ದ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಕೆಲವು ಕ್ಷಣಗಳ ನಂತರ, ಮಾಯಾಂಕ್ ಹರಿತವಾದ ಚಾಕುವಿನಿಂದ ಮಹಿಳೆಗೆ ಎಂಟು ಬಾರಿ ಇರಿದಿದ್ದಾನೆ.ಆಕೆಯ ಕುತ್ತಿಗೆ ಮತ್ತು ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ. ಆಕೆಯ ಕಿರುಚಾಟ ಕೇಳಿ, ಅಲ್ಲಿದ್ದವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸಂತ್ರಸ್ತೆಯ ಸಹಾಯಕ್ಕೆ ಧಾವಿಸಿದ್ದರು. ಅವರು ಗಾಯಗೊಂಡ ಮಹಿಳೆಯನ್ನು ಸಿವಿಲ್ ಆಸ್ಪತ್ರೆಗೆ ಕರೆದುಕೊಂಡು ಹೋದರು. ನಿಕೋಲ್ ಪೊಲೀಸರು ಆಕೆಯ ಪತಿ ಮಾಯಾಂಕ್ ಪಟೇಲ್ ಮತ್ತು ಅತ್ತೆ ಭಾವನಾ ಪಟೇಲ್ ವಿರುದ್ಧ ದೂರು ದಾಖಲಿಸಿಕೊಂಡು ಮುಂದಿನ ತನಿಖೆ ಆರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ