AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ, ತನಿಖೆಗೆ ಸಮಿತಿ ರಚನೆ

ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ವಿಮಾನದಲ್ಲಿ ಇದ್ದವರಷ್ಟೇ ಅಲ್ಲದೆ, ವೈದ್ಯಕೀಯ ಕಾಲೇಜು ಹಾಸ್ಟೆಲ್​ನಲ್ಲಿ ಇದ್ದವರು ಮತ್ತು ಸ್ಥಳೀಯ ನಿವಾಸಿಗಳು ಸಹ ಸಾವನ್ನಪ್ಪಿದ್ದಾರೆ. ಸದ್ಯ, ಕಾರಣ ಪತ್ತೆಗಾಗಿ ತನಿಖೆ ಮುಂದುವರಿದಿದ್ದು ಒಂದು ಬ್ಲ್ಯಾಕ್ ಬಾಕ್ಸ್ ಪತ್ತೆಹಚ್ಚಲಾಗಿದೆ. ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ.

ಅಹಮದಾಬಾದ್ ವಿಮಾನ ದುರಂತ: ಮೃತರ ಸಂಖ್ಯೆ 274ಕ್ಕೆ ಏರಿಕೆ, ತನಿಖೆಗೆ ಸಮಿತಿ ರಚನೆ
ಅಹಮದಾಬಾದ್ ವಿಮಾನ ದುರಂತImage Credit source: PTI
Ganapathi Sharma
|

Updated on: Jun 14, 2025 | 9:40 AM

Share

ನವದೆಹಲಿ, ಜೂನ್ 14: ಗುಜರಾತ್​​ನ ಅಹಮದಾಬಾದ್​ನಲ್ಲಿ ಸಂಭವಿಸಿದ ಏರ್ ಇಂಡಿಯಾ ವಿಮಾನ ದುರಂತದಲ್ಲಿ  (Ahmedabad plane crash) ಮೃತಪಟ್ಟವರ ಸಂಖ್ಯೆ 274ಕ್ಕೆ ಏರಿಕೆಯಾಗಿದೆ. ಈ ಪೈಕಿ 241 ಮಂದಿ ವಿಮಾನದಲ್ಲಿ ಇದ್ದವರಾಗಿದ್ದರೆ, ಇನ್ನುಳಿದವರು ವೈದ್ಯಕೀಯ ಕಾಲೇಜು ಹಾಸ್ಟೆಲ್​​ನಲ್ಲಿ ಇದ್ದವರು ಹಾಗೂ ಸ್ಥಳೀಯ ನಿವಾಸಿಗಳು ಎಂಬುದು ತಿಳಿದು ಬಂದಿದೆ. ಗುರುವಾರ ಮಧ್ಯಾಹ್ನ ಅಹಮದಾಬಾದ್​​ನಿಂದ ಲಂಡನ್​ನ ಗ್ಯಾಟ್ವಿಕ್​​ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಮೇಘನಾನಿ ನಗರದಲ್ಲಿ ವೈದ್ಯಕೀಯ ಕಾಲೇಜು ಹಾಸ್ಟೆಲ್ ಮೇಲೆ ಪತನವಾಗಿ ಘನಘೋರ ದುರಂತ ಸಂಭವಿಸಿತ್ತು. ವಿಮಾನದಲ್ಲಿದ್ದ ಏಕೈಕ ಭಾರತೀಯ ಮೂಲದ ಬ್ರಿಟಿಷ್ ಪ್ರಜೆ ವಿಶ್ವಾಸ್ ಕುಮಾರ್ ಮಾತ್ರ ಪವಾಡಸದೃಶವಾಗಿ ಬದುಕುಳಿದಿದ್ದರು. ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಪ್ರಯಾಣಿಕರಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕೂಡ ಸೇರಿದ್ದಾರೆ.

ಏತನ್ಮಧ್ಯೆ, ವಿಮಾನ ಪತನದ ಕಾರಣಗಳನ್ನು ಪತ್ತೆಹಚ್ಚಲು ತನಿಖೆ ತ್ವರಿತಗತಿಯಲ್ಲಿ ಸಾಗುತ್ತಿದೆ. ತನಿಖೆಯಲ್ಲಿ ಮಹತ್ವದ ಪಾತ್ರವಹಿಸಲಿರುವ ನಿರ್ಣಾಯಕ ಸಾಧನವಾಗಿದ್ದ ಒಂದು ಬ್ಲ್ಯಾಕ್ ಬಾಕ್ಸ್​​ ಅನ್ನು ಗುರುವಾರ ರಾತ್ರಿ ಪತ್ತೆಹಚ್ಚಿ ವಶಪಡಿಸಿಕೊಳ್ಳಲಾಗಿದೆ. ಎರಡನೇ ಬ್ಲ್ಯಾಕ್ ಬಾಕ್ಸ್​​ ಮತ್ತು ಡಿಜಿಟಲ್ ವಿಡಿಯೋ ರೆಕಾರ್ಡರ್​​ಗಾಗಿ (ಡಿವಿಆರ್) ಶೋಧ ಕಾರ್ಯ ಮುಂದುವರೆದಿದ್ದು, ಇವುಗಳು ಪ್ರಮುಖ ಸುಳಿವುಗಳನ್ನು ನೀಡಲಿವೆ.

ಏರ್ ಇಂಡಿಯಾ ವಿಮಾನ ಪತನ ತನಿಖೆಗೆ ಸಮಿತಿ ರಚನೆ

ವಿಮಾನ ಅಪಘಾತಕ್ಕೆ ಕಾರಣವೇನು ಎಂಬುದನ್ನು ಪತ್ತೆಹಚ್ಚುವುದಕ್ಕಾಗಿ ನಾಗರಿಕ ವಿಮಾನಯಾನ ಸಚಿವಾಲಯವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಈ ಸಮಿತಿಯು ಏರ್ ಇಂಡಿಯಾ ವಿಮಾನ AI-171 ಅಪಘಾತದ ಕಾರಣಗಳನ್ನು ಪತ್ತೆ ಮಾಡುವುದಷ್ಟೇ ಅಲ್ಲದೆ, ಭವಿಷ್ಯದಲ್ಲಿ ಇಂತಹ ಘಟನೆಗಳನ್ನು ಎದುರಿಸಲು ಅಸ್ತಿತ್ವದಲ್ಲಿರುವ ಎಸ್​​ಒಪಿಗಳಲ್ಲಿ ಮಾಡಬೇಕಾದ ಬದಲಾವಣೆಗಳು ಮತ್ತು ಸಮಗ್ರ ಮಾರ್ಗಸೂಚಿಗಳನ್ನು ಸೂಚಿಸಲಿದೆ.

ಇದನ್ನೂ ಓದಿ
Image
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
Image
ಅಪಘಾತ ನಡೆದ ಹಾಸ್ಟೆಲ್ ಮೇಲ್ಭಾಗದಲ್ಲಿ ವಿಮಾನದ 1 ಬ್ಲಾಕ್ ಬಾಕ್ಸ್ ಪತ್ತೆ
Image
ಅಹಮದಾಬಾದ್ ವಿಮಾನ ದುರಂತ; 200 ಡಿಎನ್‌ಎ ಮಾದರಿಗಳ ಸಂಗ್ರಹ
Image
ಬದುಕುಳಿದ ಏಕೈಕ ಪ್ರಯಾಣಿಕ ಮೋದಿ ಬಳಿ ಹೇಳಿದ್ದೇನು? ಇಲ್ಲಿದೆ ವಿವರ

ವಿಮಾನ ಪತನ: ತನಿಖಾ ಸಮಿತಿಯಲ್ಲಿ ಯಾರೆಲ್ಲ?

ಕೇಂದ್ರ ಗೃಹ ಕಾರ್ಯದರ್ಶಿ, ಗೃಹ ಸಚಿವಾಲಯ ಮತ್ತು ಭಾರತ ಸರ್ಕಾರದ ನೇತೃತ್ವದಲ್ಲಿ ಈ ಸಮಿತಿ ಕಾರ್ಯಾಚರಿಸಲಿದೆ. ಇದರಲ್ಲಿ ನಾಗರಿಕ ವಿಮಾನಯಾನ ಸಚಿವಾಲಯದ ಕಾರ್ಯದರ್ಶಿ, ಗುಜರಾತ್ ಗೃಹ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಗುಜರಾತ್ ಸರ್ಕಾರದ ಪ್ರತಿನಿಧಿ, ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಗುಜರಾತ್ ಸರ್ಕಾರದ ಪ್ರತಿನಿಧಿ, ಅಹಮದಾಬಾದ್ ಪೊಲೀಸ್ ಆಯುಕ್ತರು, ಭಾರತೀಯ ವಾಯುಪಡೆಯ ಮಹಾನಿರ್ದೇಶಕರು, ನಾಗರಿಕ ವಿಮಾನಯಾನ ಭದ್ರತಾ ಬ್ಯೂರೋ/ಡಿಜಿ ಬಿಸಿಎಎಸ್, ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ/ಡಿಜಿ ಡಿಜಿಸಿಎ, ಐಬಿಯ ವಿಶೇಷ ನಿರ್ದೇಶಕರು, ಭಾರತ ಸರ್ಕಾರದ ವಿಧಿವಿಜ್ಞಾನ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಇರಲಿದ್ದಾರೆ.

ಇದನ್ನೂ ಓದಿ: ಏರ್​ ಇಂಡಿಯಾ ವಿಮಾನ ಬಿದ್ದ ರಭಸಕ್ಕೆ ಅಹಮದಾಬಾದ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ

ಸ್ಥಳ ಪರಿಶೀಲನೆ, ಎಟಿಸಿ ಮತ್ತು ಸಂಬಂಧಿತ ಸಿಬ್ಬಂದಿಯ ವಿಚಾರಣೆಯನ್ನೂ ಸಮಿತಿ ನಡೆಸಲಿದೆ. ಸಮಗ್ರ ತನಿಖೆ ನಡೆಸಿ ಮೂರು ತಿಂಗಳೊಳಗೆ ವರದಿಯನ್ನು ಸಲ್ಲಿಸಲಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ