ಅಹ್ಮದ್​ನಗರ-ಕಲ್ಯಾಣ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸಾವು

|

Updated on: Jan 24, 2024 | 9:20 AM

ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಧವಲ್ಪುರಿ ಫಾಟಾ ಬಳಿ ಮುಂಜಾನೆ 2.30ಕ್ಕೆ ಈ ಘಟನೆ ನಡೆದಿದೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಅಹ್ಮದ್​ನಗರ-ಕಲ್ಯಾಣ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ, 6 ಮಂದಿ ಸಾವು
ಅಪಘಾತ
Image Credit source: News 9
Follow us on

ಪುಣೆ ಜಿಲ್ಲೆಯ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ಟ್ರಕ್, ಸರ್ಕಾರಿ ಬಸ್ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಧವಲ್ಪುರಿ ಫಾಟಾ ಬಳಿ ಮುಂಜಾನೆ 2.30ಕ್ಕೆ ಈ ಘಟನೆ ನಡೆದಿದೆ. ಅಪಘಾತದ ನಂತರ ಆರು ಜನರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಐವರನ್ನು ಪಾರ್ನರ್ ಗ್ರಾಮಾಂತರ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದರೆ, ಒಬ್ಬರನ್ನು ಅಹ್ಮದ್‌ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ವೇಳೆ ಆರು ಮಂದಿ ಸಾವನ್ನಪ್ಪಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡವು ಸ್ಥಳಕ್ಕೆ ಆಗಮಿಸಿ ಗಾಯಗೊಂಡವರನ್ನು ಆಸ್ಪತ್ರೆಗೆ ತಲುಪಿಸಲು ಸಹಾಯ ಮಾಡಿದ್ದಾರೆ.
ಮೃತರ ಗುರುತು ಪತ್ತೆ ಮಾಡಲಾಗುತ್ತಿದ್ದು, ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಅಪಘಾತದಲ್ಲಿ ಸಾವನ್ನಪ್ಪಿದ ಎಲ್ಲರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಮತ್ತಷ್ಟು ಓದಿ: ಹುಬ್ಬಳ್ಳಿ: ಮುಂಬೈ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ, ನಾಲ್ವರ ಸಾವು

ಡಿಸೆಂಬರ್‌ನಲ್ಲಿ ಅಹಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಇದೇ ರೀತಿಯ ಅಪಘಾತ
ಕಳೆದ ತಿಂಗಳು ಪುಣೆಯ ಜುನ್ನಾರ್ ತಾಲೂಕಿನ ಅಹ್ಮದ್‌ನಗರ-ಕಲ್ಯಾಣ ಹೆದ್ದಾರಿಯಲ್ಲಿ ಪಿಕಪ್ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದರು. ಪಿಕ್‌ಅಪ್ ವಾಹನವು ಅಹಮದ್‌ನಗರದಿಂದ ಥಾಣೆ ಜಿಲ್ಲೆಯ ಕಲ್ಯಾಣ್ ಕಡೆಗೆ ಹೋಗುತ್ತಿದ್ದಾಗ ಪಿಂಪಲ್‌ಗಾಂವ್ ಜೋಗಾದ ಪೆಟ್ರೋಲ್ ಪಂಪ್ ಬಳಿ ಆಟೋ ರಿಕ್ಷಾ ವಿರುದ್ಧ ದಿಕ್ಕಿನಿಂದ ಬರುತ್ತಿತ್ತು. ಅಪಘಾತದಲ್ಲಿ ಪಿಕಪ್ ಟ್ರಕ್‌ನಲ್ಲಿ ಪ್ರಯಾಣಿಸುತ್ತಿದ್ದ ಐವರು ಮತ್ತು ಆಟೋರಿಕ್ಷಾದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಎಂಟು ಮೃತರ ಪೈಕಿ ನಾಲ್ವರು ಒಂದೇ ಕುಟುಂಬದವರಾಗಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ