ಬೆಂಗಳೂರು: ಹಡಗು ನಿರ್ಮಾಣಕ್ಕೆ AI ಸಹಾಯ, ಒಪ್ಪಂದ ಮಾಡಿಕೊಂಡ ಐಐಎಸ್‌ಸಿ, ಜಿಎಸ್‌ಎಲ್

ಭಾರತೀಯ ವಿಜ್ಞಾನ ಸಂಸ್ಥೆ ಮತ್ತು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ಸಹಯೋಗದಲ್ಲಿ ಹಡಗು ನಿರ್ಮಾಣಕ್ಕೆ ಸಹಾಯ ಮಾಡಲು ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ಎಂಒಯುಗೆ ಸಹಿ ಹಾಕಿದೆ.

ಬೆಂಗಳೂರು: ಹಡಗು ನಿರ್ಮಾಣಕ್ಕೆ AI ಸಹಾಯ, ಒಪ್ಪಂದ ಮಾಡಿಕೊಂಡ ಐಐಎಸ್‌ಸಿ, ಜಿಎಸ್‌ಎಲ್
ಸಾಂದರ್ಭಿಕ ಚಿತ್ರ
Follow us
ಅಕ್ಷಯ್​ ಪಲ್ಲಮಜಲು​​
|

Updated on:Aug 04, 2023 | 10:44 AM

ಬೆಂಗಳೂರು, ಆ.4: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಮತ್ತು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ (ಜಿಎಸ್‌ಎಲ್) ಸಹಯೋಗದಲ್ಲಿ ಹಡಗು ನಿರ್ಮಾಣಕ್ಕೆ ಸಹಾಯ ಮಾಡಲು ಕೃತಕ ಬುದ್ಧಿಮತ್ತೆ (ಎಐ) ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲು ಎಂಒಯುಗೆ (Memorandum of understanding) ಸಹಿ ಹಾಕಿದೆ. ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಕಾರ, ಈ ಸಹಯೋಗದ ಮೂಲಕ ಹಡಗು ನಿರ್ಮಾಣ ಉದ್ಯಮದಲ್ಲಿ ಬರುವ ಹಲವಾರು ಸವಾಲುಗಳನ್ನು ನಿಭಾಯಿಸಲು ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಭಾರತೀಯ ವಿಜ್ಞಾನ ಸಂಸ್ಥೆಯು ಈ ತಂತ್ರವನ್ನು ತರುತ್ತಿದೆ. ಜೊತೆಗೆ ಹಡಗು ನಿರ್ಮಾಣದ ಸಮಯವನ್ನು ಕಡಿಮೆ ಮಾಡಲು ಈ ಕಾರ್ಯವನ್ನು ಅನುಸರಿಸಲಾಗಿದೆ ಎಂದು ವರದಿ ಹೇಳಿದೆ. ಇನ್ನು ಈ ಪಾಲುದಾರಿಕೆಯು ಭಾರತದ ಹಡಗು ನಿರ್ಮಾಣದ ಉತ್ಪಾದನಾ ಸಾಮರ್ಥ್ಯಗಳನ್ನು ಹೆಚ್ಚಿಸಲು ಹಾಗೂ ವಿಶೇಷವಾಗಿ ರಕ್ಷಣಾ ವಲಯದಲ್ಲಿ ಇಂತಹ ತಂತ್ರಜ್ಞಾನಗಳ ಬಳಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ.

ಶಿಪ್‌ಯಾರ್ಡ್ ಲಿಮಿಟೆಡ್ ಮತ್ತು ಫೌಂಡೇಶನ್ ಫಾರ್ ಸೈನ್ಸ್ ಇನ್ನೋವೇಶನ್ ಹಾಗೂ ಡೆವಲಪ್‌ಮೆಂಟ್, ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಸೇರಿ, ಶಿಪ್ ಬಿಲ್ಡಿಂಗ್ ಮತ್ತು ಡಿಫೆನ್ಸ್ ಅಪ್ಲಿಕೇಶನ್‌ ಕ್ಷೇತ್ರದಲ್ಲಿ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲು ಮತ್ತು ಅನುಷ್ಠಾನಗೊಳಿಸಲು ಜಂಟಿಯಾಗಿ MOU ಗೆ ಸಹಿ ಹಾಕಲಾಗಿದೆ ಎಂದು ಗೋವಾ ಶಿಪ್‌ಯಾರ್ಡ್ ಲಿಮಿಟೆಡ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಡಿಜಿಟಲ್ ನಾಗರಿಕರಿಗೆ ಹಾನಿಯಾಗದಂತೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್​​ನ್ನು ನಿಯಂತ್ರಿಸುತ್ತೇವೆ: ರಾಜೀವ್ ಚಂದ್ರಶೇಖರ್

ರಕ್ಷಣಾ ವಲಯದ ಹಡಗು ನಿರ್ಮಾಣದಲ್ಲಿ AI ಬಳಕೆಯ ಮೂಲಕ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ ಸುರಕ್ಷತೆಯನ್ನು ಕೂಡ ಸುಧಾರಿಸುತ್ತದೆ, ಇದರ ಜತೆಗೆ ನಿರ್ಮಾಣ ಸಮಯವನ್ನು ಕಡಿಮೆ ಮಾಡುವುದು ಮತ್ತು ಹಡಗು ನಿರ್ಮಾಣ ಪ್ರಕ್ರಿಯೆಯನ್ನು ಸುಗಮಗೊಳಿಸಬಹುದು. ಇದೀಗ AI ಸಿಸ್ಟಮ್‌ಗಳನ್ನು ಹಡಗುಗಳಲ್ಲಿ ಅಳವಡಿಸುವ ಕಾರ್ಯ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಭಾರತದಲ್ಲಿ ಇಂತಹ ತಂತ್ರಜ್ಞಾನಗಳನ್ನು ಬಳಸಿಕೊಂಡು ಅತಿ ವೇಗವಾಗಿ ಕೆಲಸ ಮಾಡುವ ಸಾಹಯವಾಗಬಹುದು ಎಂದು ವರದಿ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:43 am, Fri, 4 August 23

ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ