
ಮುಜಫರ್ಪುರ, ಜ.2: ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಯ ಹೆಸರು, ಧ್ವನಿಗಳು, ಫೋಟೋವನ್ನು ಬಳಸಿಕೊಂಡು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ನಕಲಿ ವೀಡಿಯೊವನ್ನು ರಚಿಸಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊರ್ವನನ್ನು ಮುಜಫರ್ಪುರ ಪೊಲೀಸರು ಬಂಧಿಸಿದ್ದಾರೆ. ಜನವರಿ 2, 2026 ರಂದು, ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿ ಅವರ AI ವೀಡಿಯೊಗಳನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾನೆ. ಈ ಕೃತ್ಯವನ್ನು ಮಾಡಿದ ವ್ಯಕ್ತಿಯನ್ನು ಪ್ರಮೋದ್ ಕುಮಾರ್ ಎಂದು ಗುರುತಿಸಲಾಗಿದೆ. ಭಾರತದ ರಾಷ್ಟ್ರಪತಿ ಹಾಗೂ ಪ್ರಧಾನಿ ಮಂತ್ರಿಯನ್ನು ಹೋಲಿಕೆಯಾಗುವಂತೆ ಧ್ವನಿಯನ್ನು ಬಳಸಿಕೊಂಡು ಎಐ ಮೂಲಕ ಡೀಪ್ಪೇಕ್ ಮಾಡಲಾಗಿದೆ.
ಮುಜಫರ್ಪುರ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಬಿಡುಗಡೆ ಮಾಡಿದ ಪ್ರಕಟಣೆ ಪ್ರಕಾರ, ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಬಳಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಪ್ರಧಾನಿ ಹಾಗೂ ರಾಷ್ಟ್ರಪತಿ ಅವರ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಇದು ಸಾರ್ವಜನಿಕರನ್ನು ದಾರಿತಪ್ಪಿಸುವ ಮತ್ತು ದೇಶದ ಅತ್ಯುನ್ನತ ಹುದ್ದೆಯಲ್ಲಿರುವವರ ಘನತೆ, ಪ್ರತಿಷ್ಠೆ, ವಿಶ್ವಾಸಕ್ಕೆ ಹಾನಿ ಮಾಡಿದೆ ಎಂದು ಹೇಳಿದ್ದಾರೆ.
ಈ ಮೂಲಕ ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸುವುದು, ಹಾಗೂ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ಅಪನಂಬಿಕೆಯನ್ನು ಬರುವಂತೆ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಷ್ಟ್ರವಿರೋಧಿ ಭಾವನೆ, ವದಂತಿಗಳನ್ನು, ಸಾಮಾಜಿಕ ಅಶಾಂತಿಯನ್ನು ಸೃಷ್ಟಿಸುವ ಕೆಲಸವನ್ನು ಮಾಡಬಾರದು ಎಂದು ಹೇಳಿದ್ದಾರೆ. ಜತೆಗೆ ಇಂತಹ ಕೃತ್ಯ ಮಾಡಿದವರ ಮೇಲೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುವುದು.
ಇದನ್ನೂ ಓದಿ: ನಮ್ಮ ಬೆಂಬಲ ಭಾರತಕ್ಕೆ: ಚೀನಾ-ಪಾಕ್ ಸಂಬಂಧ ಬಲಗೊಳ್ಳುತ್ತಿದೆ, ಭಾರತಕ್ಕೆ ಎಚ್ಚರಿಕೆ ನೀಡಿದ ಬಲೂಚಿಸ್ತಾನ
ಇನ್ನು ಇಂತಹ ಪ್ರಕರಣಗಳನ್ನು ತಡೆಯಲು ಹಾಗೂ ಇದರ ತನಿಖೆಯನ್ನು ಮಾಡಲು ವಿಶೇಷ ತನಿಖೆ ತಂಡವನ್ನು ರಚನೆ ಮಾಡುವಂತೆ ಮುಜಪ್ಪುರದ ಎಸ್ಎಸ್ಪಿ ನಿರ್ದೇಶನ ನೀಡಿದೆ. ಇನ್ನು ಪ್ರಧಾನಿ, ರಾಷ್ಟ್ರಪತಿ ಅವರ ಎಐ ವಿಡಿಯೋ ಮಾಡಿರುವ ವ್ಯಕ್ತಿಯಿಂದ ಮೊಬೈಲ್ನ್ನು ವಶಪಡಿಸಿಕೊಳ್ಳಲಾಗಿದೆ. 01/26ರಂತೆ ಪ್ರಕರಣ ದಾಖಲಾಗಿದ್ದು, ಪ್ರಮೋದ್ ಕುಮಾರ್ನ ಕ್ರಿಮಿನಲ್ ಹಿನ್ನಲೆಗಳ ಬಗ್ಗೆ ಪರಿಶೀಲನೆ ಮಾಡಲಾಗಿದೆ.
ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ