2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ

2021ರ ಮೇ ತಿಂಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ತಮಿಳುನಾಡು ರಾಜಕೀಯದಲ್ಲಿ ಮಹತ್ತರ ಬದಲಾವಣೆಗಳನ್ನು ತರುವ ಸೂಚನೆ ದಟ್ಟವಾಗುತ್ತಿದೆ. ಎಐಎಡಿಎಂಕೆ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಬದಲಾವಣೆಗಳಾಗುವ ಸಂಭವ ದಿನೇ ದಿನೇ ಹೆಚ್ಚುತ್ತಿದೆ.

2021 ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದ ಎಐಎಡಿಎಂಕೆ ಸಂಸದ
ತಮಿಳುನಾಡು ಉಪ ಮುಖ್ಯಮಂತ್ರಿ ಒ. ಪನ್ನೀರಸೆಲ್ವಂ (ಎಡ) ಮುಖ್ಯಮಂತ್ರಿ ಕೆ.ಪಳನಿಸ್ವಾಮಿ (ಬಲ)
Follow us
guruganesh bhat
|

Updated on:Dec 28, 2020 | 1:20 PM

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಕಾವು ಪಡೆಯತೊಡಗಿದೆ. ಸದ್ಯದ ಆಡಳಿತಾರೂಢ ಎಐಎಡಿಎಂಕೆ ಬಿಜೆಪಿ ಜೊತೆಗಿನ ಸಖ್ಯದಿಂದ ಕೊಂಚ ದೂರ ಜಾರತೊಡಗಿದೆ. ಸಾರ್ವಜನಿಕ ಪ್ರಚಾರ ಸಭೆಯೊಂದರಲ್ಲಿ ಎಐಎಡಿಎಂಕೆಯ ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ನೀಡಿದ ಹೇಳಿಕೆ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ.

ಎಐಎಡಿಎಂಕೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರೆ, ಕೆ. ಪಳನಿಸ್ವಾಮಿಯವರೇ ಮುಖ್ಯಮಂತ್ರಿಯಾಗಲಿದ್ದಾರೆ. ಅಲ್ಲದೇ ಇತರ ಯಾವ ಪಕ್ಷದ ಜೊತೆಗೂ ಅಧಿಕಾರ ಹಂಚಿಕೊಳ್ಳುವುದಿಲ್ಲ ಎಂದು ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿದ್ದಾರೆ. ಎಐಎಡಿಎಂಕೆಗೆ ಇತರ ಪಕ್ಷಗಳ ಜೊತೆ ಮೈತ್ರಿಯ ಅವಶ್ಯಕತೆಯಿಲ್ಲ. ಮೈತ್ರಿ ಮಾಡಿಕೊಂಡರೂ ತಮ್ಮ ಪಕ್ಷವೇ ನಾಯಕತ್ವ ವಹಿಸಲಿದೆ ಎಂಬುದಾಗಿ ಸಂಸದ ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ.

ಪೆರಿಯಾರ್ ಚಿಂತನೆಗಳಿಂದ ಹುಟ್ಟಿಕೊಂಡ ತಮಿಳುನಾಡು ರಾಜಕೀಯ ಚಿಂತನೆಗಳು ಭಾರತದ ಇತರ ರಾಜಕೀಯ ಯೋಚನೆಗಳಿಗಿಂತ ಭಿನ್ನವಾಗಿದೆ. ರಾಷ್ಟ್ರ ಮಟ್ಟದ ರಾಜಕಾರಣಿಗಳು ರಾಜ್ಯಗಳ ರಾಜಕೀಯದಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇದನ್ನು ತಮಿಳುನಾಡುನ ವಿಧಾನಸಭಾ ಚುನಾವಣೆ ಸುಳ್ಳು ಮಾಡಲಿದೆ ಎಂದು ಕೆ.ಪಿ.ಮುನುಸ್ವಾಮಿ ಘೋಷಿಸಿದ್ದಾರೆ. ರಾಜ್ಯಸಭಾ ಸಂಸದ ಕೆ.ಪಿ.ಮುನುಸ್ವಾಮಿ ಹೇಳಿಕೆಗೆ ಬಿಜೆಪಿ ಈವರೆಗೆ ಪ್ರತಿಕ್ರಿಯೆ ನೀಡಿಲ್ಲ. ಆದರೆ, ಎಐಎಡಿಎಂಕೆ ಪಕ್ಷವೇ ಮೈತ್ರಿಕೂಟದ ಮುಂಚೂಣಿ ನಾಯಕ ಎಂಬುದನ್ನು ಬಿಜೆಪಿ ಈಗಾಗಲೇ ಒಪ್ಪಿಕೊಂಡಿದೆ. 2021ರ ಮೇವರೆಗೆ ತಮಿಳುನಾಡು ರಾಜಕೀಯದಲ್ಲಿ ಏನೆಲ್ಲ ಬದಲಾವಣೆಗಳು ಘಟಿಸಲಿವೆ ಎಂಬುದನ್ನು ಕಾದುನೋಡಬೇಕಿದೆ.

ರಾಜಕೀಯಕ್ಕೆ ರಜನಿಕಾಂತ್: ಏನಾಗಬಹುದು ತಮಿಳುನಾಡು ರಾಜಕಾರಣ?

Published On - 1:16 pm, Mon, 28 December 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್