ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು
ನವದೆಹಲಿ: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ನವದೆಹಲಿ: ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಟ್ವೀಟ್ ಮಾಡಿರುವ 50 ವರ್ಷದ ರಾಹುಲ್ ಗಾಂಧಿ, ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೊರೊನಾ ಬಗ್ಗೆ ಜಾಗ್ರತೆಯಿಂದ ಇರಬೇಕು ಎಂದಿದ್ದಾರೆ.
ರಾಹುಲ್ ಗಾಂಧಿ ಅವರ ಭಾವ ರಾಬರ್ಟ್ ವಾಧ್ರಾ ಅವರಿಗೂ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು. ಇನ್ನು ಪಂಚ ರಾಜ್ಯ ಚುನಾವಣೆ ಹಿನ್ನೆಲೆ ಪ್ರಚಾರದಲ್ಲಿ ತೊಡಗಿದ್ದ ರಾಹುಲ್ ಅವರ ಸೋದರಿ ಪ್ರಿಯಾಂಕಾ ವಾಧ್ರಾ ಅವರಿಗೂ ಇತ್ತೀಚೆಗೆ ಸೋಂಕು ದೃಢಪಟ್ಟಿತ್ತು. ಇನ್ನು ಮಾಜಿ ಪ್ರಧಾನಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮನಮೋಹನ್ ಸಿಂಗ್ ಅವರಿಗೆ ನಿನ್ನೆ ಸೋಂಕು ತಗುಲಿದ್ದು, ದೆಹಲಿಯ ಎಐಐಎಂಎಸ್ (AIIMS) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಸಿಎಂ ಕೇಜ್ರಿವಾಲ್ ಪತ್ನಿಗೆ ಸಹ ಕೊರೊನಾ ಸೋಂಕು ತಗುಲಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊರೊನಾ ಪಾಸಿಟಿವ್ ಆಗಿದ್ದು, ರಾಹುಲ್ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ, ಹಾರೈಸಿದ್ದಾರೆ.
After experiencing mild symptoms, I’ve just tested positive for COVID.
All those who’ve been in contact with me recently, please follow all safety protocols and stay safe.
— Rahul Gandhi (@RahulGandhi) April 20, 2021
ಈ ಸುದ್ದಿ ಇದೀಗ ಬ್ರೇಕ್ ಆಗಿದೆ. ನಾವು ಈ ಸುದ್ದಿಯ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ಪಡೆಯುತ್ತಿದ್ದೇವೆ. ಎಲ್ಲರಿಗಿಂತ ಮೊದಲು ನಿಮಗೆ ಬ್ರೇಕಿಂಗ್ ಸುದ್ದಿ ತಲುಪಬೇಕು ಎಂಬುದು ನಮ್ಮ ಉದ್ದೇಶ. ಈ ಸುದ್ದಿಗೆ ಸಂಬಂಧಿಸಿದಂತೆ ಹೆಚ್ಚಿನ ವಿವರ ತಿಳಿದುಕೊಳ್ಳಲು ಈ ಪೇಜನ್ನು ರೀಫ್ರೇಶ್ ಮಾಡಿ. ಮತ್ತು ನಮ್ಮ ಇತರೇ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:20 pm, Tue, 20 April 21