ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ, ಕರ್ನಾಟಕದ ಮೂವರಿಗೆ ಸ್ಥಾನ

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ರಚಿಸಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (AICC) 39 ಸದಸ್ಯರ ಪಟ್ಟಿ ಬಿಡುಗಡೆ ಮಾಡಿದೆ. ಸಮಿತಿಯಲ್ಲಿ ಕರ್ನಾಟಕದಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಲ್ಲದೆ, ಬಿಕೆ ಹರಿಪ್ರಸಾದ್, ವೀರಪ್ಪ ಮೊಯ್ಲಿ ಅವರಿಗೆ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ, ಕರ್ನಾಟಕದ ಮೂವರಿಗೆ ಸ್ಥಾನ
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಪಟ್ಟಿ ಬಿಡುಗಡೆ
Image Credit source: PTI
Edited By: Rakesh Nayak Manchi

Updated on: Aug 20, 2023 | 2:54 PM

ನವದೆಹಲಿ, ಆಗಸ್ಟ್ 20: ಕಾಂಗ್ರೆಸ್ ಕಾರ್ಯಕಾರಿ ಸಮಿತಿ (Congress Working Committee) ರಚಿಸಿ 39 ಸದಸ್ಯರುಳ್ಳ ಪಟ್ಟಿಯನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಬಿಡುಗಡೆ ಮಾಡಿದ್ದಾರೆ. ಸಮಿತಿಯಲ್ಲಿ ಕರ್ನಾಟಕದಿಂದ ಖರ್ಗೆ ಅಲ್ಲದೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa Moily) ಹಾಗೂ ಎಂಎಲ್​​ಸಿ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರಿಗೆ ಸ್ಥಾನ ನೀಡಲಾಗಿದೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರ ಪಟ್ಟಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಮುಖಂಡೆ ಸೋನಿಯಾ ಗಾಂಧಿ, ಸಂಸದ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯಾಂಕಾ ಗಾಂಧಿ, ರಣದೀಪ್ ಸುರ್ಜೇವಾಲ, ಎಐಸಿಸಿ ಕಾರ್ಯದರ್ಶಿ ವೇಣುಗೋಪಾಲ್ ಅವರು ಸಮಿತಿಯಲ್ಲಿದ್ದಾರೆ.

ಇದನ್ನೂ ಓದಿ: ಬೈಕ್​ ಏರಿ ಪಾಂಗಾಂಗ್ ಸರೋವರಕ್ಕೆ ಹೊರಟ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏನಂದರು ಗೊತ್ತಾ!?

ಇವರಲ್ಲದೆ, ಮಾಜಿ ಕೇಂದ್ರ ಸಚಿವ ಪಿ.ಚಿದಂಬರಂ, ಸಚಿನ್ ಪೈಲೆಟ್, ದಿಗ್ವಿಜಯ್ ಸಿಂಗ್, ಶಶಿ ತರೂರ್, ಆನಂದ ಶರ್ಮಾ, ಜೈರಾಮ್ ರಮೇಶ್, ಅಧೀರ್ ರಂಜನ್ ಚೌಧರಿ, ಅಭಿಷೇಕ್ ಮನು ಸಿಂಘ್ವಿ ಸೇರಿದಂತೆ ಒಟ್ಟು 39 ನಾಯಕರಿಗೆ ಸಮಿತಿಯಲ್ಲಿ ಸ್ಥಾನ ನೀಡಲಾಗಿದೆ. ರಾಜ್ಯಸಭೆ ಸದಸ್ಯ ನಾಸೀರ್ ಹುಸೇನ್​ ಅವರಿಗೆ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.

ಇನ್ನು, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಖಾಯಂ ಆಹ್ವಾನಿತರಾಗಿ ಕರ್ನಾಟಕದ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹಾಗೂ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್​ ಅವರನ್ನು ಆಯ್ಕೆ ನೀಡಲಾಗಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More
Loading...
Unable to load recommendations.
Follow Us