AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಮತಾ ಬ್ಯಾನರ್ಜಿ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ: ಮೈತ್ರಿ ಬಿರುಕು ಸರಿಪಡಿಸಲು ಯತ್ನ

ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಏಕೈಕವಾಗಿ ಸ್ಪರ್ಧಿಸುವುದಾಗಿ ಮಮತಾ ಬ್ಯಾನರ್ಜಿ ಹೇಳಿದ್ದರು. ಮಮತಾ ಇಲ್ಲದೆ ಮೈತ್ರಿ ಅಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಹಿಂದೆ ಹೇಳಿದ್ದರು. ರಾಜಕೀಯ ಊಹಾಪೋಹಗಳ ಮಧ್ಯೆ, ಮಮತಾ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ.

ಮಮತಾ ಬ್ಯಾನರ್ಜಿ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ: ಮೈತ್ರಿ ಬಿರುಕು ಸರಿಪಡಿಸಲು ಯತ್ನ
ಮಮತಾ ಬ್ಯಾನರ್ಜಿ & ಮಲ್ಲಿಕಾರ್ಜುನ ಖರ್ಗೆ
Ganapathi Sharma
|

Updated on: Jan 26, 2024 | 1:12 PM

Share

ನವದೆಹಲಿ, ಜನವರಿ 26: ಲೋಕಸಭೆ ಚುನಾವಣೆಯಲ್ಲಿ (Lok Sabha Elections 2024) ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಕ್ಷದ ಮುಖ್ಯಸ್ಥೆ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಘೋಷಿಸಿದ ಬೆನ್ನಲ್ಲೇ ಅವರ ಜತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮಾತುಕತೆ ನಡೆಸಿದ್ದಾರೆ. ಮಮತಾ ಅವರನ್ನು ಪ್ರತಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದಲ್ಲಿ ಉಳಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ ಎಂಬುದು ಪಕ್ಷದ ನಾಯಕರ ಮಾತುಗಳಿಂದ ಈಗಾಗಲೇ ಸ್ಪಷ್ಟವಾಗಿದೆ. ಮಮತಾ ಇಲ್ಲದೆ ಮೈತ್ರಿ ಅಸಾಧ್ಯ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಈ ಹಿಂದೆ ಹೇಳಿದ್ದರು. ರಾಜಕೀಯ ಊಹಾಪೋಹಗಳ ಮಧ್ಯೆ, ಮಮತಾ ಜತೆ ಮಲ್ಲಿಕಾರ್ಜುನ ಖರ್ಗೆ ಮಾತುಕತೆ ನಡೆಸಿದ್ದಾರೆ.

ಬಂಗಾಳದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ ಯಾತ್ರೆ ಗುರುವಾರ ಆರಂಭವಾಗಿದೆ. ರಾಹುಲ್ ಅಸ್ಸಾಂನಿಂದ ಬಂಗಾಳಕ್ಕೆ ಬಂದಿದ್ದಾರೆ. ಮುಂದಿನ ದಿನಗಳಲ್ಲಿ ಅವರು ಹಲವಾರು ಕಾರ್ಯಕ್ರಮಗಳನ್ನು ಹೊಂದಿದ್ದಾರೆ. ಅವುಗಳಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಬೇಕೆಂದು ಕಾಂಗ್ರೆಸ್ ಬಯಸುತ್ತದೆ. ಕೆಲವು ನಿಮಿಷಗಳಾದರೂ ರಾಹುಲ್ ಪರವಾಗಿ ನಿಲ್ಲುವಂತೆ ಮಮತಾ ಅವರಿಗೆ ಕಾಂಗ್ರೆಸ್ ಮನವಿ ಮಾಡಿದೆ. ಈ ವಿಚಾರವಾಗಿ ಉಭಯ ನಾಯಕರು ಚರ್ಚಿಸಿದ್ದಾರೆ ಎಂದು ಜೈರಾಂ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಜೈರಾಂ ರಮೇಶ್, ‘ಇಂಡಿಯಾ’ ಮೈತ್ರಿಕೂಟವನ್ನು ರಚಿಸುವ ಮೂಲಕ ಬಿಜೆಪಿಯನ್ನು ಸೋಲಿಸುವುದು ನಮ್ಮ ಗುರಿಯಾಗಿದೆ. ಮಮತಾ ಇಲ್ಲದೆ ನಾವು ಬಂಗಾಳದಲ್ಲಿ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಿಲ್ಲ. ಅವರು ‘ಇಂಡಿಯಾ’ ಮೈತ್ರಿಕೂಟದ ಅವಿಭಾಜ್ಯ ಅಂಗ. ಪ್ರತಿಪಕ್ಷಗಳ ಮೈತ್ರಿಕೂಟದ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಮಮತಾ ಅವರ ಪಾತ್ರ ದೊಡ್ಡದು ಎಂದು ಹೇಳಿದ್ದಾರೆ.

ಇತ್ತೀಚೆಗಷ್ಟೇ ಮಮತಾ ಅವರು ಪತ್ರಿಕಾಗೋಷ್ಠಿ ನಡೆಸಿ, ರಾಜ್ಯ ಕಾಂಗ್ರೆಸ್ ನಾಯಕರು ಟಿಎಂಸಿ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಯಾತ್ರೆಯ ಬಗ್ಗೆ ತಮ್ಮ ಬಳಿ ಚರ್ಚಿಸುವ ಕನಿಷ್ಠ ಸೌಜನ್ಯವನ್ನೂ ಕಾಂಗ್ರೆಸ್ ತೋರಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಅಲ್ಲದೆ, ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್​ನೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು. ಇದು ಕೈ ಪಾಳಯದಲ್ಲಿ ತಲ್ಲಣಕ್ಕೆ ಕಾರಣವಾಗಿತ್ತು.

ಇದನ್ನೂ ಓದಿ: ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿ ಹೋರಾಟ: ಮಮತಾ ಬ್ಯಾನರ್ಜಿ

ಸೀಟು ಹಂಚಿಕೆ ಕುರಿತ ಬಿಕ್ಕಟ್ಟೇ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಹಾಗೂ ಕಾಂಗ್ರೆಸ್ ನಡುವಣ ಒಡಕಿಗೆ ಪ್ರಮುಖ ಕಾರಣ ಎನ್ನಲಾಗಿದೆ. ಬಿಜೆಪಿ ವಿರುದ್ಧ ಸೆಣಸಲು ಬಂಗಾಳದಲ್ಲಿ ಕಾಂಗ್ರೆಸ್ ಹಾಗೂ ಎಡಪಕ್ಷಗಳು ಸಹಕರಿಸಬೇಕು. ಆದರೆ, ಹಾಗೆ ಆಗುತ್ತಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ